Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಮಂತ್ರಿ ಸ್ಥಾನ ಕೊಡದಿದ್ದರೆ ಗಂಟುಮೂಟೆ ಕಟ್ಟುವೆ ಎಂದ ಶಾಸಕ ಎಂ.ಟಿ.ಬಿ.ನಾಗರಾಜ್

Tuesday, 18.09.2018, 1:26 PM       No Comments

ಬೆಂಗಳೂರು: ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು. ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಕೊಡುತ್ತೇವೆ ಎಂದು ಹೈಕಮಾಂಡ್​ ಹೇಳಿತ್ತು. ಒಮ್ಮೆ ನೀಡದಿದ್ದರೆ ಮುಖಂಡರ ಜತೆ ಚರ್ಚಿಸಿ, ನಂತರ ಗಂಟುಮೂಟೆ ಕಟ್ಟಿಕೊಂಡು ಹೋಗುತ್ತಿರುತ್ತೇನೆ ಎಂದು ಶಾಸಕ ಎಂ.ಟಿ.ಬಿ. ನಾಗರಾಜ್​ ಹೇಳಿದರು.

ಹೊಸಕೋಟೆಯಲ್ಲಿ ಮಾತನಾಡಿ, ಇವತ್ತು ಸುದ್ದಿಗೋಷ್ಠಿ ನಡೆಸುತ್ತೇನೆಂದು ಹೇಳಿದ್ದೆ. ಅದನ್ನು ಮೂರು ದಿನ ಮುಂದೂಡಿದ್ದೇನೆ. ಸಿದ್ದರಾಮಯ್ಯನವರು ಇದುವರೆಗೆ ನನ್ನ ಬಳಿ ಮಾತನಾಡಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮಾತುಕತೆ ನಡೆಸಿದ್ದಾರೆ. ಸಂಧಾನಕ್ಕೆ ಪ್ರಯತ್ನ ನಡೆಯುತ್ತಿರುವುದರಿಂದ ಸ್ವಲ್ಪ ದಿನ ಕಾಯುತ್ತೇನೆ ಎಂದು ಹೇಳಿದರು.

ನನಗೆ ಸಚಿವ ಸ್ಥಾನ ಸಿಗಬೇಕು ಎನ್ನುವುದು ಕಾರ್ಯಕರ್ತರ ಆಸೆ. ಆದರೆ, ಕೊಡಲಿಲ್ಲ ಎಂಬ ಕಾರಣಕ್ಕೆ ಅವರಿಗೆ ಬೇಸರವಿದೆ. 35 ವರ್ಷ ಪಕ್ಷಕ್ಕಾಗಿ ದುಡಿದಿದ್ದೇನೆ. 3 ಬಾರಿ ಶಾಸಕನಾಗಿದ್ದೇನೆ. ಆದರೂ ನನ್ನನ್ನು ಮಂತ್ರಿ ಮಾಡಿಲ್ಲ. ನನಗಿಂತ ಕಿರಿಯರೂ ಸಚಿವರಾಗಿದ್ದಾರೆ. ಎಲ್ಲೋ ಒಂದು ಕಡೆ ಕಾಂಗ್ರೆಸ್​ನವರು ನನ್ನ ನಿರ್ಲಕ್ಷ್ಯ ಮಾಡಿದ್ದು ಬೇಸರ ತಂದಿದೆ ಎಂದರು.

ನಿನ್ನೆ ಸಿದ್ದರಾಮಯ್ಯನವರು, ಸುಧಾಕರ್​, ರಮೇಶ್​ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ. ಆದರೆ, ಅದೇನು ಚರ್ಚೆ ಮಾಡಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back To Top