ಕಾಂಗ್ರೆಸ್ ದೂರು: ಬಿಜೆಪಿ ತೀವ್ರ ಅಸಮಾಧಾನ

blank

ಮಡಿಕೇರಿ: ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು ಎಂಬ ವಾಟ್ಸ್ ಆಪ್ ಗ್ರೂಪ್‌ನಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಗ್ರೂಪ್ ಅಡ್ಮಿನ್‌ಗಳ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ನೀಡಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ದೇಶದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ, ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇದನ್ನು ಮನಗಂಡು ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು ಎಂಬ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಚರ್ಚೆ ನಡೆದಿದೆ. ಶೌಚಾಲಯದ ಫೋಟೋಕ್ಕೆ ಸ್ಥಳೀಯ ಶಾಸಕರ ಫೋಟೋವನ್ನು ಎಡಿಟ್ ಮಾಡಿ ಹಾಕಿದರು ಎಂಬ ಕಾರಣಕ್ಕೆ ವಾಟ್ಸ್‌ಆಪ್ ಗ್ರೂಪ್‌ನ ಅಡ್ಮಿನ್‌ಗಳ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರಕರಣ ದಾಖಲಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡದೆ ಇದ್ದಾಗ ಆ ಕ್ಷೇತ್ರದ ಶಾಸಕರ ಗಮನಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಶಾಸಕರು ಸಮಸ್ಯೆಯ ಬಗ್ಗೆ ಗಮನಹರಿಸಿ ಶೌಚಾಲಯವನ್ನು ಶುಚಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕಾಗಿತ್ತು. ಶಾಸಕರ ಫೋಟೋ ಹಾಕಿದ್ದರಿಂದ ತೇಜೋವಧೆ ಆಗಿದ್ದರೆ ಪ್ರಕರಣ ದಾಖಲಿಸಲಿ. ಅದನ್ನು ಬಿಟ್ಟು ಚರ್ಚೆ ಮಾಡಿದ ಗ್ರೂಪ್ ಅಡ್ಮಿನ್‌ಗಳ ವಿರುದ್ಧವೇ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿರುವುದು ಸರಿಯಲ್ಲವೆಂದು ಹೇಳಿದ್ದಾರೆ.

ಆಡಳಿತ ಪಕ್ಷ ಪೊಲೀಸ್ ಇಲಾಖೆಯನ್ನು ತಮ್ಮ ಪರ ಕೆಲಸ ಮಾಡುವಂತೆ ಒತ್ತಾಯಿಸಿ ಈ ರೀತಿ ಪ್ರಕರಣ ದಾಖಲು ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರು ಕೂಡ ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸದೆ ಕಾನೂನಿಗೆ ಗೌರವ ನೀಡಿ ಕರ್ತವ್ಯ ನಿರ್ವಹಿಸಬೇಕೆಂದು ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…