More

    ನಾಯಕ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಲಿ, ಹೈ.ಕ. ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಒತ್ತಾಯ

    ರಾಯಚೂರು: ಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದು, ಪಕ್ಷದಲ್ಲಿ 15 ಜನ ಎಸ್ಟಿ ಸಮುದಾಯಕ್ಕೆ ಸೇರಿದ ಶಾಸಕರಿದ್ದಾರೆ. ಅವರಲ್ಲಿ ಒಬ್ಬರಿಗೆ ಡಿಸಿಎಂ, ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೈ.ಕ. ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್.ರಘುವೀರ ನಾಯಕ ಒತ್ತಾಯಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಕಳೆದ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಉಸ್ತುವಾರಿ ನೀಡಿದ್ದಿಲ್ಲ. ಈ ಬಾರಿ ಜಿಲ್ಲೆಯವರಿಗೆ ಉಸ್ತುವಾರಿ ನೀಡಬೇಕು ಎಂದರು.

    ಬಿಜೆಪಿ ಸರ್ಕಾರ ಎಸ್ಟಿ ಸಮುದಾಯಕ್ಕೆ ಅನುದಾನ ಮತ್ತು ಅಭಿವೃದ್ಧಿಗೆ ಕೆಲಸ ಮಾಡದಿರುವುದರಿಂದ ಜನರು ತಿರಸ್ಕರಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಮಾಡಿದರೂ ಅನುದಾನ ನೀಡದಿರುವುದರಿಂದ ಸಮುದಾಯದವರಿಗೆ ಯಾವುದೇ ಉಪಯೋಗವಾಗಲಿಲ್ಲ.

    ಇದನ್ನೂ ಓದಿ: ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿರಿ ಕಾಂಗ್ರೆಸ್ ಹೈಕಮಾಂಡ್ ಗೆ ಸಮಾಜ ಮುಖಂಡರ ಬೇಡಿಕೆ

    ಮೀಸಲಾತಿ ಹೆಚ್ಚಳದ ನಾಟಕವಾಡಿ ಸಮುದಾಯದ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು. ಸಮುದಾಯದ ಸ್ವಾಮೀಜಿ 255 ದಿನ ಧರಣಿ ನಡೆಸಿದರೂ ಸ್ಪಂದನೆ ನೀಡದೆ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೆಚ್ಚಳ ನಾಟಕವಾಡಲಾಯಿತು ಎಂದು ಟೀಕಿಸಿದರು.

    ಕಾಂಗ್ರೆಸ್‌ನಲ್ಲಿ 15 ಎಸ್ಟಿ ಸಮುದಾಯದ ಶಾಸಕರಿದ್ದು, ರಾಜ್ಯದಲ್ಲಿನ ಜನಸಂಖ್ಯೆ ಆಧರಿಸಿ ಡಿಸಿಎಂ ಹಾಗೂ ನಾಲ್ವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಎನ್.ರಘುವೀರ ನಾಯಕ ಒತ್ತಾಯಿಸಿದರು.

    ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ನಾಯಕ, ಪದಾಧಿಕಾರಿಗಳಾದ ರಾಮು ನಾಯಕ, ರಾಮಕೃಷ್ಣ ನಾಯಕ, ಶರಣಬಸವ ನಾಯಕ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts