More

    ದುರಾಡಳಿತ ಮಾಡಿದ ಕಾಂಗ್ರೆಸ್‌ಗೆ ಸೋಲಿನ ಶಿಕ್ಷೆ : ಹರಿಹರದಲ್ಲಿ ಬಿಜೆಪಿ ಮಾಜಿ ಶಾಸಕ ಬಿ.ಪಿ. ಹರೀಶ್ ವ್ಯಾಖ್ಯಾನ

    ಹರಿಹರ: ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿರುವ ತಾಲೂಕಿನ ಮತದಾರರು ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಬಿಜೆಪಿ ಕೈ ಹಿಡಿಯಲಿದ್ದಾರೆ ಎಂದು ಮಾಜಿ ಶಾಸಕ ಬಿ.ಪಿ. ಹರೀಶ್ ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಕಾಟ್ವೆ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ನಗರ ಮತ್ತು ಗ್ರಾಮಾಂತರ ಎಸ್ಸಿ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

    ಸ್ಥಳೀಯ ಚುನಾವಣೆಗಳು ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ವೇದಿಕೆಯಂತಿದ್ದು, ಚುನಾವಣೆ ಎದುರಿಸಲು ಸನದ್ಧರಾಗಬೇಕು ಎಂದರು.

    ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಪಡಿಸುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಎಸ್ಸಿ, ಎಸ್‌ಟಿ ಹಾಗೂ ಅಲ್ಪ ಸಂಖ್ಯಾತರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದೇಶ ಪ್ರಗತಿಗೆ ಪಣ ತೊಟ್ಟಿದೆ. ಸುಳ್ಳು ಹೇಳಿ ಜನರ ದಾರಿ ತಪ್ಪಿಸಿದ ಕಾಂಗ್ರೆಸ್ ಪಕ್ಷವನ್ನು ಕೇವಲ 40 ಸ್ಥಾನಕ್ಕೆ ಸೀಮಿತಗೊಳಿಸಿದೆ ಎಂದರು.

    ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭ್ರಷ್ಟಾಚಾರ ರಹಿತವಾಗಿ ಆಡಳಿತ ನೀಡುತ್ತಿದ್ದು, ಹಲವು ಜನಪರ ಯೋಜನೆ ಜಾರಿ ಮಾಡಿವೆ ಎಂದರು.

    ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಬಸವರಾಜ್ ನಾಯ್ಕ ಮಾತನಾಡಿ, ಮೋದಿ ಸರ್ಕಾರ ಜನೌಷಧ ಕೇಂದ್ರದ ಆರಂಭ ಸೇರಿ ಹಲವು ಕ್ರಾಂತಿಕಾರಕ ಹೆಜ್ಜೆಯಿಟ್ಟಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts