More

    ಜನರ ಕೈಗೆ ಹಣ ಕೊಟ್ಟು ಮತ್ತೊಮ್ಮೆ ಲಾಕ್​ಡೌನ್​?

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್​ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್​ಡೌನ್​ ಅನಿವಾರ್ಯ ಎಂದು ಪ್ರತಿಪಾದಿಸುತ್ತಿರುವ ಕಾಂಗ್ರೆಸ್​, ದುಡಿದು ತಿನ್ನೋರಿಗೆ ಹಣ ಮತ್ತು ಆಹಾರ ಕಿಟ್ ಕೊಟ್ಟು ಮತ್ತೊಮ್ಮೆ ಲಾಕ್​ಡೌನ್​ ಜಾರಿ ಮಾಡಬೇಕು ಎಂದು ಆಗ್ರಹಿಸಿದೆ.

    ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಕರೊನಾ ರೋಗಿಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಕರೊನಾ ವಾರಿಯರ್ಸ್​ಗೆ ನೈತಿಕ ಬಲ ತುಂಬಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತಿರುವ ಕಾಂಗ್ರೆಸ್​, ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದಿದೆ. ಇದನ್ನೂ ಓದಿರಿ ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

    ಲಾಕ್​ಡೌನ್​ಗಿಂತ ರಾಜ್ಯದ ಆರ್ಥಿಕ ಪರಿಸ್ಥಿತಿ ಚೇತರಿಕೆಯೇ ಮುಖ್ಯ, ಮತ್ತೊಮ್ಮೆ ಲಾಕ್​ಡೌನ್​ ಮಾಡುವ ಪ್ರಶ್ನೆಯೇ ಇಲ್ಲ ಎಂದಿರುವ ಸಿಎಂ ಯಡಿಯೂರಪ್ಪ ಅವರು ಕಾಂಗ್ರೆಸ್​ ಒತ್ತಡಕ್ಕೆ ಮಣಿದು ಬಡಜನರ ಕೈಗೆ ಹಣ ಕೊಟ್ಟು ಲಾಕ್​ಡೌನ್​ ಜಾರಿ ಮಾಡಲಿದ್ದಾರೆಯೇ? ಕಾದು ನೋಡಬೇಕು.

    ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಲಾಕ್​ಡೌನ್​ ಸಡಿಸಲಗೊಳಿಸಿದ್ದು ತಪ್ಪು ಎನ್ನುತ್ತಿರುವ ಕಾಂಗ್ರೆಸ್​ ಮುಖಂಡರು, ಜನರಿಗೆ ಅಗತ್ಯ ವಸ್ತು ಕೊಟ್ಟು ಮತ್ತೊಮ್ಮೆ ಲಾಕ್​ಡೌನ್ ಮಾಡಿ ಎಂದು ಒತ್ತಾಯಿಸಿದ್ದಾರೆ.

    ಲಾಕ್​ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts