More

  ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

  ಶಿವಮೊಗ್ಗ: ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ 9 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

  ದೇಶಕ್ಕೆ ಬುಲೆಟ್ ರೈಲು ನೀಡುತ್ತೇವೆ ಎಂದು ಭರವಸೆ ನೀಡಿದ್ದ ಬಿಜೆಪಿ ನಾಯಕರಿಗೆ ಇರುವ ರೈಲುಗಳಿಗೂ ಸರಿಯಾಗಿ ಸಿಗ್ನಲ್ ಕೊಡಿಸಲು ಸಾಧ್ಯವಾಗುತ್ತಿಲ್ಲ. ಬುಲೆಟ್ ರೈಲು ಆರಂಭವಾಗುವ ಸಮಯದಲ್ಲಿ ನಡೆದಿರುವ ಈ ಅಪಘಾತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
  ಮನವಿ ಸಲ್ಲಿಸುವ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಸ್.ಶಿವಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಪ್ರಮುಖರಾದ ರಂಗೇಗೌಡ, ಎಚ್. ಎಸ್.ಬಾಲಾಜಿ, ನವೀನ್, ಅಕ್ಬರ್, ಗಿರೀಶ್, ಕುಮಾರ್ ಮುಂತಾದವರಿದ್ದರು.

  See also  ಎಸ್.ಪಿ. ಸೌಂದರ್ಯ ‘ಭರತನಾಟ್ಯ ರಂಗಪ್ರವೇಶ’

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts