

ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ ಅಧ್ಯಕ್ಷ ಸಿ.ಡಿ.ಗಂಗಾಧರ ತಿಳಿಸಿದರು.
ಮನ್‌ಮುಲ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ ಹೆಚ್ಚಿನ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅವರ ನಂಬಿಕೆಯನ್ನು ಉಳಿಸಿಕೊಳ್ಳಲಾಗುವುದು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನಮ್ಮ ನಾಯಕರ ವಿರುದ್ಧ ಟೀಕೆ ಮಾಡಿದ್ದರು. ಅವರಿಗೆ ಸಹಕಾರ ಕ್ಷೇತ್ರದ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಗೆ ಕೃಷಿ ವಿಶ್ವವಿದ್ಯಾಲಯ, ಮೈಷುಗರ್‌ಗೆ ಆರ್ಥಿಕ ಶಕ್ತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಮತದಾರರು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದರು.
ಎಸ್ಸಿ, ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ವಿಜಿಕುಮಾರ್, ನಾಗರಾಜ್, ಉದಯ್, ರುದ್ರಪ್ಪ ಇದ್ದರು.