17.8 C
Bengaluru
Wednesday, January 22, 2020

ಸಮಾಜ ಒಡೆಯುವ ಕೆಲಸ ಸಲ್ಲ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ದಾವಣಗೆರೆ: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ವೀರಶೈವ-ಲಿಂಗಾಯತ ಎಂಬ ವಿಚಾರ ತಂದಿದ್ದರಿಂದ ಕಾಂಗ್ರೆಸ್​ಗೆ ಹಿನ್ನಡೆ ಆಯಿತೆಂಬ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಸಮರ್ಥಿಸಿಕೊಂಡಿದ್ದಾರೆ. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಹಾಗೆ ಮಾತ ನಾಡಲು ಅವರಿಗೆ ಅಧಿಕಾರ ಕೊಟ್ಟವರ್ಯಾರು? ಅವರು ಕಾಂಗ್ರೆಸ್​ನ ಸುಪ್ರೀಂ ಆಗಿದ್ದಾರಾ? ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರಿಬ್ಬರು ಟೀಕಿಸಿದರು.

ವೀರಶೈವ ಲಿಂಗಾಯತ ಸಮಾಜ ಈಗ ಹುಟ್ಟಿದ್ದಲ್ಲ. ಎಂ.ಬಿ. ಪಾಟೀಲ್, ವಿನಯ್ ಕುಲಕರ್ಣಿ ಸಮಾಜ ಒಡೆಯುವ ಕೆಲಸ ಮಾಡ ಬಾರದು. ಡಿ.ಕೆ. ಶಿವಕುಮಾರ್ ವಿರುದ್ಧ ದೂರು ನೀಡುವುದಾಗಿ ಹೇಳುವ ಎಂ.ಬಿ. ಪಾಟೀಲ್ ವಿರುದ್ಧವೇ ನಾವು ಪಕ್ಷದ ಹೈಕಮಾಂಡ್​ಗೆ ದೂರು ನೀಡುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ನೀಡಿದರು.

ಎಂ.ಬಿ. ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಮಾತು ಕೇಳಿಯೇ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಪ್ರತ್ಯೇಕ ಧರ್ಮದ ಪ್ರಸ್ತಾವ ಮುಂದಿಟ್ಟರು. ಜಾತಿಗಣತಿ ಮಾಡಿ ವೀರಶೈವ ಲಿಂಗಾಯತರು ಬೇರೆ ಬೇರೆ ಎಂದಿದ್ದರಿಂದ 2 ಕೋಟಿ ಇದ್ದ ಜನಸಂಖ್ಯೆ 70 ಲಕ್ಷಕ್ಕೆ ಇಳಿದಿದೆ ಎಂದು ವಿಷಾದಿಸಿದರು. ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗದಿದ್ದರೆ ಸುಪ್ರೀಂ ಕೋರ್ಟ್​ಗೆ ಹೋಗುತ್ತಿರುವುದಾಗಿ ಹೇಳಿದ್ದಾರೆಂಬ ಪ್ರಶ್ನೆಗೆ, ಎಲ್ಲಿಗಾದರೂ ಹೋಗಲಿ.. ಅದಕ್ಕೆ ಪ್ರಚಾರ ಮಾಡಿಕೊಂಡು ಹೋಗಬೇಕೆ? ಎಂದರು.

2ನೇ ಬಾರಿಗೆ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ವಹಿಸಬೇಕೆಂಬ ಬೇಡಿಕೆ ಇದೆ ಎಂಬ ಪ್ರಶ್ನೆಗೆ ಈಗಲೇ ಬೈಸಿಕೊಂಡು ಸಾಕಾಗಿದೆ. ಮತ್ತೆ ಆ ಪಟ್ಟ ಬೇಡ ಎಂದ ಅವರು, ಸಂಪುಟದಲ್ಲಿ ಸ್ಥಾನ ಕೊಡುವಂತೆ ತಾವು ದುಂಬಾಲು ಬಿದ್ದಿಲ್ಲ ಎಂದು ಸ್ಪಷ್ಟಪಡಿಸಿದರು. ಗೋಷ್ಠಿಯಲ್ಲಿ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ ಇದ್ದರು.

ಪ್ರತ್ಯೇಕ ಲಿಂಗಾಯತ ವೀರಶೈವ ಧರ್ಮದ ವಿಚಾರದಲ್ಲಿ ಧರ್ಮ ಗುರುಗಳು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಡಿ.ಕೆ. ಶಿವಕುಮಾರ್ ಹೇಳಿಕೆ ಅವರಿಗೆ ಬಿಟ್ಟ ವಿಚಾರ. ಈ ಹಿಂದಿನ ಸರ್ಕಾರದಲ್ಲಿ ಎರಡು ವರ್ಗಗಳು ಈ ವಿಚಾರದಲ್ಲಿ ಏಕೆ ಕಿತ್ತಾಡಿಕೊಂಡವೋ ಗೊತ್ತಿಲ್ಲ. ನಮ್ಮ ಪೂರ್ವಿಕರು ಸಂಪ್ರದಾಯ ಸೃಷ್ಟಿಸುವಾಗ ಅದಕ್ಕೊಂದು ಹಿನ್ನೆಲೆ ಇಟ್ಟು ಕೊಂಡಿರುತ್ತಾರೆ. ಅದನ್ನು ಉಳಿಸಿಕೊಂಡು ಹೋಗುವಂತಾಗಬೇಕು.

| ಎಚ್.ಡಿ. ಕುಮಾರಸ್ವಾಮಿ, ಸಿಎಂ

ಇನ್ನಾದರೂ ಧರ್ಮ ರಾಜಕಾರಣ ಬಿಡಿ

ಉಡುಪಿ: ವೀರಶೈವ-ಲಿಂಗಾಯತ ಎಂದು ಗೊಂದಲ ಸೃಷ್ಟಿಸಿ ಹಿನ್ನಡೆ ಆಗಿರುವುದನ್ನು ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಕೊನೆಗೂ ಅವರಿಗೆ ತಪ್ಪಿನ ಅರಿವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಗುರುವಾರ ಶಿವಮೊಗ್ಗ ಲೋಕಸಭಾ ಉಪ ಚುನಾವಣಾ ಪ್ರಚಾರಕ್ಕೆ ಬೈಂದೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿದರು. ಜಾತಿ ಒಡೆದು ಕಾಂಗ್ರೆಸ್ ಕೈಸುಟ್ಟು ಕೊಂಡಿದೆ. ಇನ್ನಾದರೂ ಜಾತಿ- ಧರ್ಮದ ವಿಚಾರದಲ್ಲಿ ಗೊಂದಲ ಮಾಡುವುದನ್ನು ಬಿಡಿ. ರಾಜಕೀಯ ಮಾಡೋಣ, ಆದರೆ ಜಾತಿ-ಸಮಾಜ ಒಡೆಯುವ ಕೆಲಸ ಯಾರೂ ಮಾಡಬಾರದು ಎಂದು ಸಲಹೆ ನೀಡಿದರು.


ಕ್ಷಮೆ ಪ್ರಶ್ನೆ ಉದ್ಭವಿಸದು

ಕೋಲಾರ: ನಾನು ಲೀಡರ್ ಅಂತ ಎಲ್ಲೂ ಹೇಳಿಕೊಂಡಿಲ್ಲ, ಆತ್ಮಸಾಕ್ಷಿಗೆ ಅನುಗುಣ ವಾಗಿ ಮಾತನಾಡಿದ್ದೇನೆ. ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆ ಉದ್ಭವಿಸದು ಎನ್ನುವ ಮೂಲಕ ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ಕುರಿತ ಹೇಳಿಕೆಯನ್ನು ಸಚಿವ ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡರು.

ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಐಸಿಯು ಲೋಕಾರ್ಪಣೆಗೆ ಶುಕ್ರವಾರ ಆಗಮಿಸಿದ್ದ ಅವರು, ನಮ್ಮ ಸರ್ಕಾರ ಇದ್ದಾಗ ಕ್ಯಾಬಿನೆಟ್​ನಲ್ಲಿ ಧರ್ಮ ರಾಜಕಾರಣ ಸಂಬಂಧ ನನ್ನ ನಿಲುವು ಸ್ಪಷ್ಟಪಡಿಸಿದ್ದೆ. ಯಾವುದೇ ಕಾರಣಕ್ಕೂ ಪಕ್ಷ ಮಧ್ಯ ಪ್ರವೇಶಿಸಬಾರದು, ಧರ್ಮಗುರುಗಳು ಈ ವಿಚಾರವಾಗಿ ನಿಲುವು ವ್ಯಕ್ತಪಡಿಸುತ್ತಾರೆ, ನಾವು ತಟಸ್ಥರಾಗಿರುವುದೇ ಸೂಕ್ತ ಎಂದು ಹೇಳಿದ್ದೆ. ಈಗಲೂ ನನ್ನ ನಿಲುವು ಅದೇ, ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ ಎಂದರು. ನಿಮ್ಮ ಹೇಳಿಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಪ್ರತಿಕೂಲ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಕಾಲವೇ ಉತ್ತರಿಸಲಿದೆ ಎಂದರು.

ಹೇಳಿಕೆಗೆ ಕೆಲವರ ವಿರೋಧ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ಕಳೆದ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ತಪು್ಪ. ಈ ಬಗ್ಗೆ ಕ್ಷಮೆಯಾಚಿಸುವೆ ಎಂದು ಹೇಳಿಕೆ ನೀಡಿದ್ದ ಸಚಿವ ಡಿ.ಕೆ. ಶಿವಕುಮಾರ್ ಮೇಲೆ ಕೆಲವು ಮಠಾಧೀಶರು, ರಾಜಕೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಡಿಕೆಶಿ ಅಭಿಪ್ರಾಯ ಸತ್ಯಕ್ಕೆ ದೂರ, ಕರ್ನಾಟಕ ಸರ್ಕಾರದ ಶಿಫಾರಸನ್ನು ಕೇಂದ್ರ ಎತ್ತಿಹಿಡಿಯಬೇಕು ಎಂದು ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಡಾ.ಸಿದ್ದರಾಮ ಸ್ವಾಮೀಜಿ ಪ್ರತಿಕ್ರಿಯಿಸಿದ್ದರೆ, ದೆಹಲಿಯ ಬಸವಧರ್ಮ ಪೀಠಾಧ್ಯಕ್ಷ ಶ್ರೀ ಚನ್ನಬಸವಾನಂದ ಸ್ವಾಮೀಜಿ, ಕಲಬುರಗಿಯ ಶ್ರೀಶೈಲ ಸಾರಂಗಮಠದ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಸೇರಿ ಹಲವರು, ಡಿಕೆಶಿ ಹೇಳಿಕೆ ವೈಯುಕ್ತಿಕ. ನಮ್ಮ ಹೋರಾಟ ನಿಲ್ಲದು ಎಂದು ಹೇಳಿದ್ದಾರೆ. ಇನ್ನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ವಿಷಯದಲ್ಲಿ ಅವರು ಶ್ರೇಷ್ಠ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ವೀರಶೈವ ಲಿಂಗಾಯತ ಧರ್ಮ ಒಡೆದದ್ದು ತಪ್ಪಾಗಿದೆ ಎಂದು ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿ ಪಶ್ಚಾತ್ತಾಪ ಪಟ್ಟಿದ್ದಾರೆ. ಧರ್ಮ, ಸಮಾಜದಲ್ಲಿ ಒಡಕು ಮೂಡಿಸಿ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ಸಿಗರಿಗೆ ರಾಜ್ಯದ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ.

| ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್ ವಿಪಕ್ಷದ ಮುಖ್ಯಸಚೇತಕ

ಸಚಿವ ಡಿ.ಕೆ.ಶಿವಕುಮಾರ್ ಲಿಂಗಾಯತ ಅಥವಾ ಒಕ್ಕಲಿಗ ಸಮುದಾಯದ ಮುಖಂಡರಲ್ಲ. ಸಂದರ್ಭಕ್ಕೆ ತಕ್ಕಂತೆ ಮಾತನಾಡುವ ಜಾಣ ರಾಜಕಾರಣಿ. ಕಾಂಗ್ರೆಸ್ ವೀರಶೈವ ಲಿಂಗಾಯತ ಮಹಾಸಭಾದ ಕ್ಷಮೆ ಯಾಚಿಸಬೇಕು. ಮುಂದಿನ ದಿನಗಳಲ್ಲಿಯಾದರೂ ರಾಜಕಾರಣಿಗಳು ಜಾತಿ ರಾಜಕಾರಣ ಮಾಡಬಾರದು.

| ಉಮೇಶ ಕತ್ತಿ, ಶಾಸಕ ಹುಕ್ಕೇರಿ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...