

ಬೆಂಗಳೂರು: ಜ.5ರಿಂದ 18ವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯಾದ್ಯಂತ ಯಾತ್ರೆ ನಡೆಸಲು ಸಜ್ಜಾಗಿದ್ದಾರೆ.
ನಾಯಕತ್ವ ಬದಲಾವಣೆ ಆದರೂ ಚುನಾವಣಾ ರಾಜಕಾರಣದಲ್ಲಿ ಪಕ್ಷದ ಪರಿಸ್ಥಿತಿ ಸುಧಾರಿಸಿಲ್ಲ. ಪಕ್ಷಕ್ಕೆ ಸುತ್ತಿಕೊಂಡ ಸರಣಿ ಸೋಲಿನ ಸರಪಳಿ ಕಳಚಿ, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಅಖಾಡಕ್ಕಿಳಿದಿದ್ದಾರೆ. ಪಕ್ಷದೊಳಗಿನ ಸ್ಥಳೀಯ ಮಟ್ಟದ ಗೊಂದಲ ಪರಿಹಾರ, ಸ್ಥಳೀಯ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಸಂಘಟಿಸಲು ಯೋಜನೆ ರೂಪಿಸಿದ್ದಾರೆ. ಇದನ್ನೂ ಓದಿರಿ ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಜನವರಿ 5ರಿಂದ 18ರವರೆಗೂ ಪ್ರವಾಸದಲ್ಲಿರುವೆ. ಬ್ಲಾಕ್ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಧ್ವನಿ ಆಲಿಸಲು ನಿರ್ಧರಿಸಿದ್ದೇನೆ. 2021ನೇ ವರ್ಷ ನಮ್ಮ ಪಕ್ಷಕ್ಕೆ ಸಂಘಟನೆಯ ವರ್ಷ, ಹೋರಾಟದ ವರ್ಷ. ಸ್ಥಳೀಯವಾಗಿ ಏನೇನು ಸಮಸ್ಯೆ ಇದೆ ಎಂದು ಗಮನದಲ್ಲಿಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದರು.