More

    ಗ್ಯಾರಂಟಿಗಳೊಂದಿಗೆ ಕಾಂಗ್ರೆಸ್ ಚುನಾವಣೆ

    ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳನ್ನು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಜನರೆದುರು ಇಟ್ಟು ಲೋಕಸಭೆ ಚುನಾವಣೆ ಎದುರಿಸುತ್ತೇವೆ. ಆದರೆ, ಬಿಜೆಪಿಯವರು ಸುಳ್ಳುಗಳನ್ನು ಹೇಳಿಕೊಂಡು ಚುನಾವಣೆಗೆ ಇಳಿಯುತ್ತಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

    ನಗರದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ನ ಗ್ಯಾರಂಟಿಗಳನ್ನು ಬಿಜೆಪಿಯವರು ನಕಲು ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಅವರು ಉತ್ತರಿಸುವುದಿಲ್ಲ ಎಂದರು.

    ಬಿಜೆಪಿಗೆ ಪಾಕಿಸ್ತಾನ, ಅಪಘಾನಿಸ್ತಾನ, ಉಗ್ರಗಾಮಿಗಳು ಎಂಬ ಪದಗಳನ್ನು ಬಿಟ್ಟರೆ ಅಭಿವೃದ್ಧಿ ಬಗ್ಗೆ ಗೊತ್ತಿಲ್ಲ. ಅವರು ಇಂತಹ ವಿಚಾರಗಳನ್ನು ಇಟ್ಟುಕೊಂಡೇ ಚುನಾವಣೆ ಎದುರಿಸುತ್ತಾರೆ ಎಂದು ಹೇಳಿದರು.

    ಕಳೆದ 9 ವರ್ಷಗಳಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಗರಿಷ್ಠ ಹಂತಕ್ಕೆ ಕುಸಿದಿದೆ. ಇದಕ್ಕೆ ಕಾರಣ ಏನು ? ನೋಟ್ ಬ್ಯಾನ್ ಮಾಡಿದರು. ಹೊಸ ನೋಟುಗಳ ಮುದ್ರಣಕ್ಕೆ 25 ಸಾವಿರ ಕೋಟಿ ರೂ. ವೆಚ್ಚವಾಯಿತು. ಮೇಕ್ ಇನ್ ಇಂಡಿಯಾದಿಂದ ಶ್ರೀಮಂತರಿಗೆ ಲಾಭವಾಗಿದೆಯೇ ಹೊರತು, ಬಡವರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದರು.

    ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಬಾಂಬ್ ಸ್ಪೋಟಗೊಂಡಿದೆ. ಆಗ ಬಿಜೆಪಿಯವರಿಗೆ ನೈತಿಕತೆ ಇರಲಿಲ್ಲವೇ ? ಮಂಡ್ಯದಲ್ಲಿ ಕೇಸರಿ ಶಾಲು ಹೊದ್ದುಕೊಂಡು ಪಾಕ್​ಪರ ಘೋಷಣೆಗಳನ್ನು ಕೂಗಿದ್ದರು. ಅಂದಿನ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ? ಎಂದು ಪ್ರಶ್ನಿಸಿದರು.

    ನರೇಗಾ ಯೋಜನೆ ಕೂಲಿ ಹಣವನ್ನು ಕೇಂದ್ರ ಸರ್ಕಾರ ತಕ್ಷಣ ಬಿಡುಗಡೆಗೊಳಿಸಬೇಕು. ಕೂಲಿ ಮಾಡಿ ನಾಲ್ಕೈದು ತಿಂಗಳಾದರೂ ಹಣ ಬಿಡುಗಡೆಗೊಂಡಿಲ್ಲ. ಬರಗಾಲ ಹಿನ್ನೆಲೆಯಲ್ಲಿ 50 ದಿನ ಹೆಚ್ಚುವರಿ ಕೆಲಸ ನೀಡಬೇಕು. ಆದರೆ, ಇದುವರೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಹಣ ನೀಡಿದೆ. ಆದರೆ, ಕೇಂದ್ರದಿಂದ ನಯಾಪೈಸೆನೂ ಬಿಡುಗಡೆಗೊಂಡಿಲ್ಲ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts