ತುಮಕೂರು: ಚುನಾವಣೋತ್ತರ ಸಮೀಕ್ಷೆಗಳಿಂದ ಪುಳಕಿತರಾಗಿರುವ ಕಾಂಗ್ರೆಸ್ ಮುಖಂಡರಾದ ಡಾ.ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಕಳೆಗಟ್ಟಿತ್ತು.
ಡಾ.ಜಿ.ಪರಮೇಶ್ವರ ಮಾತನಾಡಿ, ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆಯಾದರೂ ಕಾಂಗ್ರೆಸ್‌ಗೆ ಆರಂಭದಿಂದಲೂ ಇವಿಎಂ ಮೇಲೆ ಅನುಮಾನ ಇದ್ದೇ ಇದೆ ಎಂದರು.
ಬಜರಂಗದಳ ನಿಷೇಧ ವಿಚಾರದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಂ, ಬಜರಂಗದಳಕ್ಕೂ ಭಜರಂಗಿಗೂ ಏನು ಸಂಬಂಧ? ಯಾರು ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಾರೆ? ಅಂತಹ ಸಂಘಟನೆಗಳ ವಿರುದ್ಧ ಸಂವಿಧಾನದ ಚೌಕಟ್ಟಲ್ಲಿ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಬೇಕು ಅಂತಲೇ ಭಾವನಾತ್ಮಕವಾಗಿ ಬಳಸಿಕೊಂಡಿದ್ದಾರೆ ಎಂದರು.
ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ನಾನೂ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರ ಗೌಡ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ರಾಯಸಂದ್ರ ರವಿಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ, ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್, ಮಾಜಿ ಶಾಸಕ ಗಂಗಹನುಮಯ್ಯ ಇದ್ದರು.