More

    ಕಾಂಗ್ರೆಸ್‌ನ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

    ಸಿಂಧನೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಶುಕ್ರವಾರ ಪ್ರತಿಭಟಿಸಿತು.

    ಇದನ್ನೂ ಓದಿ: ಕಾಂಗ್ರೆಸ್‌ನಿಂದ ಭಾರತ್ ಜೋಡೋ ಯಾತ್ರೆಯ ವಾರ್ಷಿಕೋತ್ಸವ

    ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಮರೇಗೌಡ ವಿರುಪಾಪುರ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ರೈತಪರ ಕಾರ್ಯಕ್ರಮಗಳನ್ನು ರದ್ದುಗೊಳಿಸುತ್ತಿದೆ.

    ಕೇಂದ್ರ ಸರಕಾರವು ರೈತರಿಗೆ ನೀಡುತ್ತಿದ್ದ ಕೃಷಿ ಸಮ್ಮಾನ್ ಯೋಜನೆಯಡಿ 6000 ಹಾಗೂ ರಾಜ್ಯ ಸರಕಾರದಿಂದ 4000 ಹಣವನ್ನು ರಾಜ್ಯ ಸರ್ಕಾರ ಯೋಜನೆಯನ್ನು ಸ್ಥಗಿತಗೊಳಿಸಿರುವುದು ಖಂಡನೀಯ ಎಂದರು.

    ಈ ಹಿಂದೆ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಎಪಿಎಂಸಿ ಕಾಯ್ದೆ ರದ್ದು, ಭೂಸಿರಿ ಯೋಜನೆ ರದ್ದು, ಕೃಷಿ ಭೂಮಿ ಮಾರಾಟ ಕಾಯ್ದೆ ಹಿಂಪಡೆಯುವ ಹುನ್ನಾರ ನಡೆಸಿರುವುದು, ನೀರಾವರಿ ಯೋಜನೆಯ ಗಾತ್ರವನ್ನು 23 ಕೋಟಿಯಿಂದ 19 ಕೋಟಿಗೆ ಇಳಿಸಿರುವುದು,

    ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ರದ್ದು ಬಗ್ಗೆ ನಿರ್ಧರಿಸಿರುವುದು, ಜಿಲ್ಲೆಗೊಂದು ಗೋಶಾಲೆಯನ್ನು ತೆರೆಯುವುದನ್ನು ಕೈಬಿಟ್ಟಿರುವುದು, ವಿದ್ಯುತ್ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸಲಾಯಿತು.

    ರೈತಾಪಿ ವರ್ಗದ ಏಳ್ಗೆಗಾಗಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಯೋಜನೆಗಳನ್ನುಜಾರಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
    ಬಿಜೆಪಿ ರೈತ ಮೋರ್ಚಾ ನಗರ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಕಾಟಗಲ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಈರೇಶ ಇಲ್ಲೂರು, ಮಧ್ವರಾಜಾಚಾರ, ಪ್ರಮುಖರಾದ ವೆಂಕನಗೌಡ ಮಲ್ಕಾಪುರ, ಶಿವಬಸನಗೌಡ ಗೊರೇಬಾಳ, ಮಲ್ಲಿಕಾರ್ಜುನ ಜೀನೂರು, ಸಿದ್ರಾಮೇಶ ಮನ್ನಾಪುರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts