More

    ಮಧ್ಯಪ್ರದೇಶ ಚುನಾವಣೆ; ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಎದುರಿಸಲು ‘ಹನುಮಂತ’ನನ್ನು ಕಣಕ್ಕಿಳಿಸಿದ ಕಾಂಗ್ರೆಸ್

    ಭೋಪಾಲ್: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಗದ್ದುಗೆಗಾಗಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್​ ನಡುವಿನ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

    ಮಧ್ಯಪ್ರದೇಶ, ಛತ್ತೀಸಗಡ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. 230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ ಕಾಂಗ್ರೆಸ್ 144 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. 230 ಸದಸ್ಯಬಲದ ಮಧ್ಯಪ್ರದೇಶಕ್ಕೆ ನವೆಂಬರ್ 17ರಂದು ಮತದಾನ ನಡೆಯಲಿದ್ದು, ಡಿಸೆಂಬರ್3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಇನ್ನು ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​ ಎದುರು ಕಾಂಗ್ರೆಸ್​ ಹಿಂದಿ ಕಿರುತೆರೆಯ ಜನಪ್ರಿಯ ಧಾರವಾಹಿ ರಾಮಾಯಣದ ಹನುಮಂತನ ಪಾತ್ರಧಾರಿ ವಿಕ್ರಂ ಮಸ್ತಾಲ್​ರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಆನಂದ್ ಸಾಗರ್ ಅವರ 2008 ರ ದೂರದರ್ಶನ ಕಾರ್ಯಕ್ರಮ ರಾಮಾಯಣದಲ್ಲಿ ಹನುಮಾನ್ ಪಾತ್ರಕ್ಕಾಗಿ ವಿಕ್ರಮ್ ಮಸ್ತಾಲ್ ಹೆಚ್ಚು ಹೆಸರುವಾಸಿಯಾಗಿದ್ದಾರೆ.

    ಇದನ್ನೂ ಓದಿ: ದೇಶದಲ್ಲಿ ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವ ಅಗತ್ಯತೆ ಹೆಚ್ಚಿದೆ: ಮೋಹನ್​ ಭಾಗವತ್

    ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧ್ನಿ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಅವರಿಗೆ ನಟ ವಿಕ್ರಮ್ ಮಸ್ತಾಲ್ ಅವರಿಂದ ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ. ಬುದ್ನಿ ಕ್ಷೇತ್ರದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಾಕಷ್ಟು ಪ್ರಾಬಲ್ಯ ಹೊಂದಿದ್ದಾರೆ. 2018ರ ಚುನಾವಣೆಯಲ್ಲಿ ಚೌಹಾಣ್ ಅವರು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಅವರನ್ನು 58,999 ಮತಗಳ ಅಂತರದಿಂದ ಸೋಲಿಸಿದ್ದರು.

    ಮಾಜಿ ಸಿಎಂ ಹಾಗೂ ಪ್ರದೇಶ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷ ಕಮಲ್​ನಾಥ್​ರನ್ನು ಪಕ್ಷ ಚಿಂದ್ವಾರಾ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ. ಮಾಜಿ ಸಿಎಂ ದಿಗ್ವಿಜಯ್​ ಸಿಂಗ್ ಪುತ್ರ ಜೈವರ್ಧನ್​ ಸಿಂಗ್​ರನ್ನು ರಾಗಿಘಾತ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ 144 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ 47 ಸಾಮಾನ್ಯ ವರ್ಗ, 39 ಒಬಿಸಿ ವರ್ಗದವರು, 30 ಪರಿಶಿಷ್ಟ ಪಂಗಡ, 22 ಪರಿಶಿಷ್ಟ ಜಾತಿ, 1 ಮುಸ್ಲಿಂ ಮತ್ತು 19 ಮಹಿಳೆಯರಿದ್ದಾರೆ. 65ಕ್ಕೂ ಹೆಚ್ಚಿನ ಅಭ್ಯರ್ಥಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.

    ಕಾಂಗ್ರೆಸ್​ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಜೆಪಿಯಿಂದ ವಲಸೆ ಬಂದಿದ್ದ ನಾಲ್ವರಿಗೆ ಟಿಕೆಟ್​ ಘೋಷಿಸಲಾಗಿದೆ. ಅವಧೇಶ್ ನಾಯಕ್ (ದಾಟಿಯಾ), ರಾವ್ ಯದ್ವೇಂದ್ರ ಸಿಂಗ್ (ಮುಂಗೋಲಿ), ಮಾಜಿ ಸಂಸದ ಬೋಧ್ ಸಿಂಗ್ ಭಗತ್ (ಕಟಾಂಗಿ), ಮತ್ತು ನೀರಜ್ ಶರ್ಮಾ (ಸುರ್ಖಿ) ಎಂದು ತಿಳಿದು ಬಂದಿದೆ. ಮಾಜಿ ಸ್ಪೀಕರ್ ಎನ್‌ಪಿ ಪ್ರಜಾಪತಿ ಸೇರಿದಂತೆ ಮೂವರು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts