ಸೋಲಿನ ಭಯದಿಂದ ಕಾಂಗ್ರೆಸ್ ಅಪಪ್ರಚಾರ: ತೇಜಸ್ವಿನಿ ಅನಂತಕುಮಾರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನಾಯಕರು ಸೋಲಿನ ಭಯದಿಂದ ಅಪಪ್ರಚಾರ ನಡೆಸುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಸೃಷ್ಟಿ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಯ ತೇಜೋವಧೆೆಗೆ ಇಳಿದಿದ್ದಾರೆ. ಇದಕ್ಕೆಲ್ಲ ಚುನಾವಣೆ ದಿನದಂದು ಕ್ಷೇತ್ರದ ಜನತೆಯೇ ಉತ್ತರ ನೀಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.

ಸೋಮವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ರೋಡ್ ಶೋನಲ್ಲಿ ಭಾಗವಹಿಸಿ ಮತಯಾಚಿಸಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿ ಬಸ್ ನಿಲ್ದಾಣದಿಂದ ಆರಂಭವಾದ ರೋಡ್​ಶೋ ಮತ್ತು ಬೈಕ್ ರ‍್ಯಾಲಿ ಹೊಸಕೆರೆಹಳ್ಳಿಯ ಪ್ರಮುಖ ಬೀದಿಗಳು, ನಾರಾಯಣಪ್ಪ ಬಡಾವಣೆ, ಕೆರೆ ಕೋಡಿ, ಹೊಸಕೆರೆಹಳ್ಳಿ ಮುಖ್ಯರಸ್ತೆ, ಈಶ್ವರಿನಗರದ ಮೂಲಕ ಇಟ್ಟಮಡುವರೆಗೂ ನಡೆಯಿತು.

ನನ್ನನ್ನು ಗೆಲ್ಲಿಸಿದರೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಿಮ್ಮ ಪರವಾಗಿ ಸಂಸತ್​ನಲ್ಲಿ ಧ್ವನಿ ಎತ್ತಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಲಿದ್ದೇನೆ ಎಂದು ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದರು.

ದೇಶದಲ್ಲಿ ಜನರ ಜೀವನಮಟ್ಟ ಸುಧಾರಿಸಲು ಆದಾಯ ಹೆಚ್ಚಾಗಬೇಕಿದೆ. ಆದಾಯ ವೃದ್ಧಿ ಪ್ರಗತಿ ಕಾಣಲು ಭಾರತದ ಆರ್ಥಿಕತೆ ಹೆಚ್ಚಾಗಬೇಕಿದೆ. ಹಾಗಾಗಿ ರಾಷ್ಟ್ರದಲ್ಲಿ ಜನಸಾಮಾನ್ಯರಿಗೆ ಅನುಕೂಲಕರ ಕಾನೂನುಗಳನ್ನು ರೂಪಿಸಲು ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು.

| ತೇಜಸ್ವಿ ಸೂರ್ಯ ಬೆಂ. ದಕ್ಷಿಣ ಬಿಜೆಪಿ ಅಭ್ಯರ್ಥಿ

Leave a Reply

Your email address will not be published. Required fields are marked *