ಕಾಂಗ್ರೆಸ್ ನಿಂದ ಸಂಘಟನೆ ಮಂತ್ರ,  ಒಂದೇ ವೇದಿಕೆಯಲ್ಲಿ ಪಕ್ಷದ ಮುಖಂಡರು,  ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ

blank

ಹುಬ್ಬಳ್ಳಿ: ಮಹಾತ್ಮ ಗಾಂಧಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಏರ್ಪಡಿಸಿರುವ ಗಾಂಧಿ ಭಾರತ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್ಸಿಗರು ಸಂಘಟನೆ ಹಾಗೂ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಕೆಪಿಸಿಸಿ ಸಾರಥ್ಯ ಕುರಿತು ರಾಜ್ಯದಲ್ಲಿ ಎದ್ದಿರುವ ಅಸಮಾಧಾನದ ಮಧ್ಯೆ ಬೆಳಗಾವಿ ಅಧಿವೇಶನ ಯಶಸ್ವಿಗೊಳಿಸುವ ಮಹತ್ವದ ಜವಾಬ್ದಾರಿ ಹೊತ್ತುಕೊಂಡಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಗಾಂಧಿ ಭಾರತ ಕಾರ್ಯಕ್ರಮವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಸಂಟನೆಗೆ ಮುಂದಾಗಿದ್ದಾರೆ.

ಈ ಮೂಲಕ ಬೆಳಗಾವಿಯಲ್ಲಿ ಕೆಲ ನಾಯಕರು ತಮ್ಮ ಬಗ್ಗೆ ವ್ಯಕ್ತಪಡಿಸುತ್ತಿರುವ ಅಸಮಾಧಾನಕ್ಕೆ ತಿರುಗೇಟು ನೀಡಿದ್ದಾರೆ.

ಇದಕ್ಕಾಗಿ ಬೆಳಗಾವಿ, ಹುಬ್ಬಳ್ಳಿಯಲ್ಲಿ ನಿರಂತರ ಸಭೆ, ಕಾರ್ಯಕರ್ತರು, ಪಕ್ಷದ ನಾಯಕರ ಜತೆ ಚರ್ಚೆ ಮಾಡುತ್ತಿದ್ದಾರೆ.

ಎರಡು ದಿನಗಳಿಂದ ಹುಬ್ಬಳ್ಳಿ ಧಾರವಾಡ, ಬೆಳಗಾವಿಯಲ್ಲಿಯೇ ಬೀಡಾರ ಹೂಡಿರುವ ಅವರು, ಪಕ್ಷ ಸಂಘಟನೆಯ ಜತೆಗೆ ಕಾರ್ಯಕ್ರಮದ ಯಶಸ್ಸಿಗೆ ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಗಹನ ಚರ್ಚೆ ನಡೆಸಿದರು.

ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಗಾಂಧಿ ಭಾರತ ಕಾರ್ಯಕ್ರಮದ ಜವಾಬ್ದಾರಿ ವಹಿಸಲಾಗಿದ್ದರೂ ಡಿ.ಕೆ. ಶಿವಕುಮಾರ ಅವರು ಸುಮ್ಮನಿಲ್ಲ. ಶುಕ್ರವಾರ ಮಧ್ಯಾಹ್ನವೇ ಇಲ್ಲಿಗೆ ಆಗಮಿಸಿ ಎಲ್ಲ ವ್ಯವಸ್ಥೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಕಾರ್ಯಕ್ರಮದ ರೂಪುರೇಷೆ ಹೇಗಿರಬೇಕು ಎಂಬುದಕ್ಕೆ ಸಚಿವ ಎಚ್.ಕೆ. ಪಾಟೀಲ ಅವರು ನೂರು ಪುಟಗಳ ಮಾರ್ಗದರ್ಶನ ನೀಡಿದ್ದಾರೆ. ಇದನ್ನು ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ಸ್ವೀಕಾರ ಮಾಡಿದೆ. ಅದರಂತೆ ಕಾರ್ಯಕ್ರಮದ ಸಿದ್ಧತೆಗಳು ನಡೆಯುತ್ತಿವೆ.


ಶುಕ್ರವಾರ ಬೆಳಗ್ಗೆಯಿಂದ ಹುಬ್ಬಳ್ಳಿಯಲ್ಲಿ ನಿರಂತರ ಸಭೆಗಳನ್ನು ನಡೆಸಲಾಯಿತು. ಇದರಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವರಾದ ಎಚ್.ಕೆ. ಪಾಟೀಲ, ಶಿವಾನಂದ ಪಾಟೀಲ, ಮಂಕಾಳ ವೈದ್ಯ, ಸಂತೋಷ ಲಾಡ್, ಶಾಸಕರು, ಪರಾಜಿತ ಅಭ್ಯರ್ಥಿಗಳು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ಮಾಜಿ ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾ ಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಎಲ್ಲ ನಾಯಕರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 10 ಸಾವಿರ ಜನರನ್ನು ಅಧಿವೇಶನಕ್ಕೆ ಕರೆ ತರಬೇಕೆಂಬ ಆದೇಶ ಕೂಡ ಮಾಡಲಾಗಿದೆ. ಹಳೇ ಧಾರವಾಡ ಜಿಲ್ಲೆಯಿಂದ ಸುಮಾರು 75 ಸಾವಿರ ಜನರನ್ನು ಸೇರಿಸುವ ಮಹತ್ವದ ಜವಾಬ್ದಾರಿಯನ್ನು ಈ ಭಾಗದ ನಾಯಕರಿಗೆ ನೀಡಲಾಗಿದೆ.

ಚರ್ಚೆಯಾದ ಪ್ರಮುಖ ಅಂಶಗಳು

  • ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮವಾಗಬೇಕು
  • 2028ರ ವಿಧಾನಸಭೆ ಚುನಾವಣೆಗೆ ಮುನ್ನುಡಿ ಆಗಬೇಕು
  • ಅಖಂಡ ಧಾರವಾಡ ಜಿಲ್ಲೆಯಿಂದ 75 ಸಾವಿರ ಜನ ಸೇರಬೇಕು
  • ಡಾ. ಅಂಬೇಡ್ಕರ್​ ಅವರನ್ನು ಕಾಂಗ್ರೆಸ್​ನಿಂದ ದೂರ ಮಾಡುವ ಯತ್ನಕ್ಕೆ ಹಿನ್ನಡೆ ಆಗಬೇಕು
  • ಗಾಂಧಿ, ಅಂಬೇಡ್ಕರ್​, ಸಂವಿಧಾನ ಉಳಿಸುವುದು ಪ್ರಮುಖ ಉದ್ದೇಶ
  • ಸ್ವಾತಂತ್ರ್ಯ ಚಳವಳಿಯ ನೆನಪು ಮುಂದಿನ ಪೀಳಿಗೆಗೆ ತಿಳಿಯಪಡಿಸುವುದು
  • ಸ್ಮರಣೀಯ ಕಾರ್ಯಕ್ರಮ ಕಾಂಗ್ರೆಸ್ಸಿಗರು ಕಳೆದುಕೊಳ್ಳಬಾರದು
  • ಗಾಂಧಿ ಹೆಸರು ಹೇಳುವ ಅಧಿಕಾರ ಕಾಂಗ್ರೆಸ್‌ಗೆ ಮಾತ್ರ
  • ಭಗವದ್ಗೀತೆ, ಕುರಾನ್​, ಬೈಬಲ್​ ರೀತಿಯಲ್ಲೇ ಸಂವಿಧಾನ ಕಾಂಗ್ರೆಸ್​ ಧರ್ಮಗ್ರಂಥ
Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…