ರಾಣೆಬೆನ್ನೂರ: ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಲಾಗದೆ ಮತ್ತು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ದಿವಾಳಿಯಾಗುತ್ತಿದೆ. ಇದನ್ನು ಬದಿಗೊತ್ತುವ ಸಲುವಾಗಿ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಹುಲಿ ಉಗುರಿನ ವಿಚಾರ ತೆಗೆದಿದೆ ಎಂದು ಮಾಜಿ ಸಚಿವ ಹಾಗೂ ನಟ ಬಿ.ಸಿ. ಪಾಟೀಲ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಗ್ಯಾರಂಟಿಗಳಿಗೆ ಹಣ ಹೊಂದಿಸುವುದೇ ದೊಡ್ಡ ಕೆಲಸವಾಗಿದೆ. ಇಂತಹ ಅಭಿವೃದ್ಧಿ ಕಾರ್ಯ ಮಾಡದ ಸರ್ಕಾರ ಯಾಕೆ ಇರಬೇಕು ಎಂದು ಪ್ರಶ್ನಿಸಿದರು. ಹುಲಿ ಉಗುರಿನ ವಿಚಾರದಲ್ಲಿ ಇಷ್ಟು ವರ್ಷ ಕಣ್ಮುಚ್ಚಿ ಕುಳಿತುಕೊಂಡು ಈಗ ಯಾಕೆ ನೆನಪು ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಿ ಅವಕಾಶ ಮಾಡಿಕೊಡಬೇಕು. ಸ್ಥಳೀಯ ಯಾರಿಗೆ ಟಿಕೆಟ್ ನೀಡಿದರೂ ಸ್ವಾಗತ ಎಂದರು.
ಗರಡಿ ಚಿತ್ರದ ಟೀಸರ್ ಬಿಡುಗಡೆ…
ನ. 1ರಂದು ಸಂಜೆ 6.30ಕ್ಕೆ ನಗರದ ಮುನ್ಸಿಪಲ್ ಮೈದಾನದಲ್ಲಿ ಗರಡಿ ಸಿನಿಮಾದ ಟೀಸರ್ ಬಿಡುಗಡೆ ಸಮಾರಂಭ ಹಾಗೂ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಟ ದರ್ಶನ ಸಿನಿಮಾದ ಟೀಸರ್ ಬಿಡುಗಡೆ ಮಾಡುವರು.
ಈ ಚಿತ್ರದಲ್ಲಿ ದರ್ಶನ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ದರ್ಶನ ಶಿಷ್ಯ ಸೂರಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ನಾನು ಹಾಗೂ ನನ್ನ ಅಳಿಯ ಸೂಜೈ ಸಹ ಚಿತ್ರದಲ್ಲಿದ್ದೇವೆ. ಚಿತ್ರದ ಸಂಭಾಷಣೆ ಹಾಗೂ ನಿರ್ದೇಶನವನ್ನು ಯೋಗರಾಜ್ ಭಟ್, ಸಂಗೀತವನ್ನು ಹರಿಕೃಷ್ಣ ರಚಿಸಿದ್ದಾರೆ.
ಗರಡಿಮನೆಯ ಯಜಮಾನ ಸುತ್ತ ಹೆಣೆದಿರುವ ಕಥೆಯಾಗಿದ್ದು, ವಿಭಿನ್ನವಾಗಿದೆ. ಕುಟುಂಬ ಸಮೇತರಾಗಿ ಸಿನಿಮಾ ನೋಡಬಹುದು. ಕಳೆದ ಎರಡು ವರ್ಷಗಳಿಂದ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಬದಾಮಿ ಸೇರಿ ವಿವಿಧ ಸ್ಥಳದಲ್ಲಿ ಚಿತ್ರಿಕರಣ ಮಾಡಲಾಗಿದೆ. ಚಿತ್ರದಲ್ಲಿ ನಿಜವಾದ ಪೈಲ್ವಾನ್‌ನರಿಗೆ ನಟನೆಗೆ ಅವಕಾಶ ನೀಡಲಾಗಿದ್ದು, ಒಟ್ಟಾರೆ ನಮ್ಮ ದೇಶಿಯ ಕಲೆಗಳನ್ನು ಬೆಳೆಸುವ ಕೆಲಸ ಮಾಡಲಾಗಿದೆ ಎಂದರು.
ಪ್ರಮುಖರಾದ ರಾಜು ಅಡಿವೆಪ್ಪನವರ, ಆನಂದ ಹುಲ್ಮನಿ, ಪೈಲ್ವಾನ್ ಕಾರ್ತಿಕ ಕಾಟಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಮಾಡಲಾಗದೆ ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೆ ದಿವಾಳಿಯಾಗಲಿದೆ; ಬಿ.ಸಿ. ಪಾಟೀಲ ಆರೋಪ

You Might Also Like
ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…