More

    ನುಡಿದಂತೆ ನಡೆದಿದೆ ಕಾಂಗ್ರೆಸ್ ಸರ್ಕಾರ

    ಚಿಕ್ಕಮಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

    ನಗರದ 26ನೇ ವಾರ್ಡ್‌ನಲ್ಲಿ 1.19 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಂಕ್ರಾಂತಿ ದಿನದಂದು ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ನಗರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿಯೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.
    ನಗರೋತ್ಥಾನ ಯೋಜನೆಯಲ್ಲಿ 18 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ್ದರೂ ಹಣ ಮಂಜೂರಾಗಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸಿಲ್ಲ. ಹಾಗಾಗಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ನಗರೋತ್ಥಾನ ಕಾಮಗಾರಿ ನಡೆಸುವಾಗ ಅಮೃತ್ ಯೋಜನೆ ಮತ್ತು ಒಳ ಚರಂಡಿ ಕಾಮಗಾರಿಗೆ ರಸ್ತೆಗಳನ್ನು ಅಗೆದು ಹಾನಿ ಮಾಡಿರುವುದನ್ನು ಸರಿಪಡಿಸಲಾಗುವುದು ಎಂದರು.
    ಜ.22ರಿಂದ 23ರವರೆಗೆ ನಗರದ ವಾರ್ಡ್‌ಗಳನ್ನು ಪ್ರದಕ್ಷಿಣೆ ಹಾಕಲು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದೇ ಸಂದರ್ಭ ಜನ ಸಂಪರ್ಕ ಸಭೆ ನಡೆಸಲಾಗುವುದು. 5 ಗ್ಯಾರಂಟಿಗಳ ಪೈಕಿ ಕೊನೆಯದಾದ ಯುವನಿಧಿ ಯೋಜನೆಯನ್ನು ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜ.12ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅದೇ ದಿನ ಕಡೂರು ಕ್ಷೇತ್ರದ ಯುವಕ ಪ್ರತಾಪ್ ಎಂಬುವವರಿಗೆ ಸೌಲಭ್ಯ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.
    ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ಅಧಿಕಾರಕ್ಕೆ ಬಂದ 22 ತಿಂಗಳಲ್ಲಿ ನಗರದ ಎಲ್ಲ ವಾರ್ಡ್‌ನಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ನಾನು ಪ್ರತಿನಿಧಿಸುವ ವಾರ್ಡ್ ನಂ.26 ಅಭಿವೃದ್ಧಿಯಲ್ಲಿ ಹಿಂದೆ ಉಳಿದಿತ್ತು. ಅಧ್ಯಕ್ಷರು ತಮ್ಮ ವಾರ್ಡ್ ಅಭಿವೃದ್ಧಿಗೆ ಮಾತ್ರ ನಗರಸಭೆ ಹಣ ವ್ಯಯ ಮಾಡುತ್ತಾರೆಂಬ ಆರೋಪ ಬರಬಾರದು ಎಂಬ ಕಾರಣಕ್ಕೆ ಇತರೆ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ಬಳಿಕ ನನ್ನ ವಾರ್ಡ್‌ನಲ್ಲಿ ಅಭಿವೃದ್ಧಿ ಕೆಲಸ ಆರಂಭಿಸಿದ್ದೇನೆ ಎಂದರು. 26ನೇ ವಾರ್ಡ್ ನಿವಾಸಿಗಳಾದ ಏಕಾಂತ ರಾಮು, ರಾಕೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts