More

    ಬಿಹಾರದ ಬಳಿಕ ರಾಜಸ್ಥಾನದಲ್ಲೂ ಜಾತಿ ಗಣತಿ; ಆದೇಶ ಹೊರಡಿಸಿದ ಗೆಹ್ಲೋಟ್ ಸರ್ಕಾರ

    ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಜಾತಿ ಸಮೀಕ್ಷೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶನಿವಾರ ತಡರಾತ್ರಿ ಆದೇಶ ಹೊರಡಿಸಿದೆ.

    ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಈ ಆದೇಶ ಹೊರಬಂದಿದೆ. ಈ ಮೂಲಕ ರಾಜಸ್ಥಾನ ಜಾತಿ ಗಣತಿ ನಡೆಸುತ್ತಿರುವ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

    ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜಸ್ಥಾನದಲ್ಲಿ ಜಾತಿ ಸಮೀಕ್ಷೆ ನಡೆಸುವ ಕುರಿತು ಆದೇಶ ಹೊರಡಿಸಿದೆ.

    ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ; ತಮ್ಮ ವಿರುದ್ಧ ಮಾಡಿರುವ ಆರೋಪ ಸುಳ್ಳು, ಪ್ರೇರಿತ ಎಂದ WFI ಮಾಜಿ ಅಧ್ಯಕ್ಷ

    ರಾಜಸ್ಥಾನ ಸರ್ಕಾರವು ತನ್ನ ಎಲ್ಲಾ ನಾಗರೀಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಕ್ಕುಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಅಂಕಿಅಂಶಗಳನ್ನು ಸಂಗ್ರಹಿಸಲು ತನ್ನದೇ ಆದ ಸಂಪನ್ಮೂಲಗಳೊಂದಿಗೆ ಸಮೀಕ್ಷೆಯನ್ನು ನಡೆಸುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಶುಕ್ರವಾರ ಸಂಜೆ ರಾಜಸ್ಥಾನ ಕಾಂಗ್ರೆಸ್​ ಕಚೇರಿಯಲ್ಲಿ ನಡೆದ ಕೋರ್​ ಕಮಿಟಿ ಸಭೆಯಲ್ಲಿ ಜಾತಿ ಸಮೀಕ್ಷೆ ಸೇರಿದಂತೆ ಹಲವು ವಿಚಾರಗಳನ್ನು ಕಾರ್ಯರೂಪಕ್ಕೆ ತರುವ ಕುರಿತು ಚರ್ಚೆ ನಡೆಸಲಾಗಿತ್ತು. ಈ ಸಂಬಂಧ ಶನಿವಾರ ಅಥವಾ ಸೋಮವಾರ ನಡೆಯುವ ಸಚಿವ ಸಂಪುಟ ಸಭೆ ಬಳಿಕ ವಿಸ್ತೃತ ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸಭೆ ಬಳಿಕ ತಿಳಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts