ಆ.15ರಂದು ಮನೆಯೊಡತಿಯ ಖಾತೆಗೆ 2000 ರೂ. ಜಮೆ; ಗೃಹಲಕ್ಷ್ಮಿ ಯೋಜನೆಯ ಷರತ್ತುಗಳೇನು? ಇಲ್ಲಿದೆ ಪೂರ್ಣ ಮಾಹಿತಿ...

CM
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಮುಂದಿನ ಆಗಸ್ಟ್​ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಯೋಜನೆಯ ಫಲಾನುಭವಿಯಾಗಲು ಅರ್ಜಿ ಸಲ್ಲಿಸುವ ಮೊದಲು ಮನೆ ಯಜಮಾನಿ ಯಾರೆಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಅವರಲ್ಲಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಷರತ್ತುಗಳೇನು?

  • ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗುವ ಮನೆ ಒಡತಿ ಮೊದಲು ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯ ವಿವರ ಸಲ್ಲಿಸಬೇಕು.
  • ಮನೆಯ ಯಜಮಾನಿ ಯಾರು ಎಂಬುದನ್ನು ಆಯಾ ಮನೆಯವರೇ ನಿರ್ಧರಿಸಬೇಕು
  • ಆನ್‌ಲೈನ್ ಮೂಲಕ ಜೂನ್ 15 ರಿಂದ ಜುಲೈ 15ರ ಒಳಗಾಗಿ ಅರ್ಜಿ ಹಾಕಬೇಕು.
  • ಜುಲೈ 15 ರಿಂದ ಆಗಸ್ಟ್ 15ರ ಅವಧಿಯಲ್ಲಿ ಅರ್ಜಿಗಳ ಪರಿಶೀಲನೆ
  • ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಚಾಲನೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net