

ಗಂಗಾವತಿ: ರಾಜ್ಯದ ಬೊಕ್ಕಸ ಬರಿದು ಮಾಡುವ ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸವಿಲ್ಲ. ಅಸ್ತಿತ್ವ ಉಳಿಸಿಕೊಳ್ಳಲು ದಿನಕ್ಕೊಂದು ಪುಕ್ಕಟೆ ಯೋಜನೆಗಳ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಗರ ಘಟಕ ಗುರುವಾರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು. ಬಿ ಾರ್ಮ್‌ಗಾಗಿ ಹಣ ವಸೂಲಿ ಮಾಡಿದ ಕಾಂಗ್ರೆಸ್ ಆಕಾಂಕ್ಷಿಗಳಿಗೆ ಟಿಕೆಟ್ ಗ್ಯಾರಂಟಿ ನೀಡಿಲ್ಲ. ಇನ್ನೂ ಮತದಾರರಿಗೇನೂ ಉಚಿತ ಯೋಜನೆ ಜಾರಿಗೊಳಿಸುವರು.
ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್, ಬಿಜೆಪಿ ಯೋಜನೆಗಳನ್ನು ರದ್ದುಗೊಳಿಸುವ ಭರವಸೆಗಳನ್ನು ನೀಡುತ್ತಿದೆ. ಎಲ್ಲ ವರ್ಗಕ್ಕೂ ಸಮಾನ ಮೀಸಲು ೋಷಿಸಿದ ಬಿಜೆಪಿ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ. ಸಮಾಜಮುಖಿ ಕೆಲಸ ಮಾಡುವ ಬಜರಂಗ ದಳ ನಿಷೇಧಿಸುವ ಕುರಿತು ಪ್ರಣಾಳಿಕೆಯಲ್ಲಿ ಸೇರಿಸಿಕೊಂಡ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದ ಹಲವು ಯೋಜನೆಗಳು ಜನಪ್ರಿಯ ಗಳಿಸಿದ್ದು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಆಯೋಧ್ಯೆ ರಾಮಮಂದಿರವನ್ನು ಮುಂದಿನ ವರ್ಷದಲ್ಲಿ ಲೋಕಾರ್ಪಣೆಗೊಳ್ಳಲು ಬಿಜೆಪಿ ಕಾರಣ. ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ನಿಗಮ, ಮಂಡಳಿ ರಚಿಸಲಾಗಿದೆ.
ದರ್ಪ ಮತ್ತು ಹಣದಿಂದ ಅಧಿಕಾರ ಪಡೆಯಲು ಸಾಧ್ಯವಿಲ್ಲ. ಸಾತ್ವಿಕ ಸ್ವಭಾವದ ಅಭ್ಯರ್ಥಿಗಳನ್ನು ಮತದಾರರು ಆಯ್ಕೆ ಮಾಡಲಿದ್ದು, ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಗೆಲವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ೈಟ್ ಇದ್ದೂ, ಉಳಿದವರು ಲೆಕ್ಕಕ್ಕಿಲ್ಲ. ಬೇಕಾದರೆ ರೆಡ್ಡಿ ನೋಟು ಪಡೆಯಿರಿ, ಬಿಜೆಪಿಗೆ ವೋಟು ಹಾಕಿ ಎಂದರು.
ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಮಾತನಾಡಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವಿಶೇಷ ಕಾಳಜಿವಹಿಸಿದ್ದು, 120 ಕೋಟಿ ರೂ. ಬಿಡುಗಡೆ ಮಾಡಿದೆ. ಎಲ್ಲ ಸಮುದಾಯಕ್ಕೂ ಒಳಿತಾಗುವಂತೆ ಬಿಜೆಪಿ ಆಡಳಿತಾವಧಿಯಲ್ಲಿ ಯೋಜನೆ ಜಾರಿಯಾಗಿದ್ದು, ಮೀಸಲು ಸಮಸ್ಯೆ ಬಗೆಹರಿಸುವ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿದೆ. ಬಿಜೆಪಿ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗುತ್ತಿದ್ದು, ಪ್ರಸಕ್ತ ಚುನಾವಣೆಯಲ್ಲಿ ಬಹುಮತ ಪಡೆಯಲಿದೆ ಎಂದರು.
ನಯೋಪ್ರಾ ಅಧ್ಯಕ್ಷ ಎಸ್.ರಾಘವೇಂದ್ರ ಶ್ರೇಷ್ಠಿ ಮಾತನಾಡಿದರು. ಕ್ಷೇತ್ರದ ಉಸ್ತುವಾರಿಗಳಾದ ಅಜಯ್ ಮಹಾವಾರ್, ಪ್ರಭು ಕಪ್ಪಗಲ್, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಇತರರಿದ್ದರು.