More

  ಗ್ಯಾರಂಟಿ ನಂಬಿ ಸಂಕಷ್ಟಕ್ಕೆ ಒಳಗಾಗದಿರಿ

  ಆಲೂರು: ರಾಜ್ಯ ಹಾಗೂ ದೇಶದ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಾಟಕ ಮಾಡುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪರಿತಪಿಸುತ್ತಿದ್ದಾರೆ. ಬಿಟ್ಟಿ ಗ್ಯಾರಂಟಿಗಳಿಂದ ತಾಯಂದಿರನ್ನು ಸರ್ಕಾರ ಸಂಕಷ್ಟಕ್ಕೆ ದೂಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆರೋಪಿಸಿದರು.ಪಟ್ಟಣದಲ್ಲಿ ಬುಧವಾರ ಜೆಡಿಎಸ್-ಬಿಜೆಪಿ ಅಭ್ಯರ್ಥಿ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ನರೇಂದ್ರ ಮೋದಿ ಅವರ

  ನಾಯಕತ್ವದಿಂದ ದೇಶದ ಅಭಿವೃದ್ಧಿ, ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಕಾಂಗ್ರೆಸ್ ನಾಯಕರು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬೇರೆ ವಿಷಯ ಗೊತ್ತಿಲ್ಲ. ಇದನ್ನು ನಂಬಿ ಮುಂದಿನ ದಿನಗಳಲ್ಲಿ ಮಹಿಳೆಯರು ಸಂಕಷ್ಟಕ್ಕೆ ಒಳಗಾಗಬೇಡಿ ಎಂದು ಸಲಹೆ ನೀಡಿದರು.

  ನರೇಂದ್ರ ಮೋದಿಯ ಎನ್‌ಡಿಎ ಪಕ್ಷ ಲೋಕಸಭೆಯ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲಿದೆ. ಕರ್ನಾಟಕದಿಂದ 28 ಸ್ಥಾನಗಳನ್ನು ಗೆಲ್ಲಿಸಿಕೊಡುವುದಾಗಿ ನರೇಂದ್ರ ಮೋದಿಗೆ ಮಾತು ಕೊಟ್ಟಿದ್ದೇನೆ. ಆದ್ದರಿಂದ ಎಲ್ಲ ಮತದಾರರು ಬಂಧುಗಳು ದೇಶದ ಹಿತದೃಷ್ಟಿಯಿಂದ ಬೆಂಬಲಿಸಬೇಕು ಎಂದರು.
  25 ಭಾಗ್ಯ ಕೊಡುತ್ತೇವೆ ಎಂದು ಕೊನೆಗೆ 5 ಭಾಗ್ಯ ನೀಡಿದ ಕಾಂಗ್ರೆಸ್ ಪಕ್ಷದಿಂದ ದೂರವಿದ್ದು, ದೇಶದ ರಕ್ಷಣೆಯ ದೃಷ್ಟಿಯಿಂದ ಎನ್‌ಡಿಎ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಬೇಕು. ಲೋಕಸಭೆಯಲ್ಲಿ ವಿರೋಧ ಪಕ್ಷದ ಸ್ಥಾನ ಪಡೆಯಲು 55 ಸ್ಥಾನಗಳನ್ನು ಗೆಲ್ಲಬೇಕು ಅದನ್ನು ಸಾಧನೆ ಮಾಡಲು ಕಾಂಗ್ರೆಸ್‌ಗೆ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

  ತಾಲೂಕು, ಜಿಲ್ಲೆಯಲ್ಲಿರುವ ಸಣ್ಣ ಡ್ಯಾಂಗಳಿಂದಲೂ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದರಿಂದ ನಮ್ಮ ರಾಜ್ಯ ರಾಜ್ಯಕ್ಕೆ ಬರಗಾಲ ಬರುವ ಸಾಧ್ಯತೆಯಿದೆ. ರಾಷ್ಟ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಎಚ್.ಡಿ.ದೇವೇಗೌಡ ಭರವಸೆ ನೀಡಿದರು.

  ಚುನಾವಣೆ ಪ್ರಚಾರದ ಕಡೆಯ ದಿನವಾದ ಬುಧವಾರ ಆಲೂರು ಪಟ್ಟಣದಲ್ಲಿ ಪಕ್ಷದ ವತಿಯಿಂದ ರ‌್ಯಾಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಆಲೂರು ಪಟ್ಟಣದ ಮುಖ್ಯಬೀದಿಲ್ಲಿ ರೋಡ್ ಶೋ ಮಾಡುವ ಮೂಲಕ ಮತಯಾಚಿಸಿದರು.
  ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್. ಮಂಜೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷೆ ಉಮಾ ಮಹೇಶ್, ಬಿಜೆಪಿ ಮುಖಂಡರಾದ ಡಾ. ಜಯರಾಜ್, ಕದಾಳು ಲೊಕೇಶ್ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts