ಸ್ವಂತ ಶಕ್ತಿಯಿಂದ ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಪರಮೇಶ್ವರ್​

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್​ ಅವರು ಒಂದೇ ಹಂತದಲ್ಲಿ ಚುನಾವಣೆ ನಡೆಸುವ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ನಾವು ಎರಡು ಹಂತದಲ್ಲಿ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದೆವು. ಆದರೆ, ಚುನಾವಣಾ ಆಯೋಗ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದೆ. ಈಗಾಗಲೇ ನಾವು 5 ವರ್ಷ ಅಧಿಕಾರ ನಡೆಸಿದ್ದೇವೆ. ನಮ್ಮ ಸ್ವಂತ ಶಕ್ತಿಯಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.

ಏಪ್ರಿಲ್​ 15ರೊಳಗೆ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮ ಮಾಡಿ ಪಟ್ಟಿ ಪ್ರಕಟ ಮಾಡುತ್ತೇವೆ ಎಂದು ಪರಮೇಶ್ವರ್​ ತಿಳಿಸಿದರು.

Leave a Reply

Your email address will not be published. Required fields are marked *