ಸಂವಿಧಾನ ಅತಿಹೆಚ್ಚು ವಿರೂಪಗೊಳಿಸಿದ್ದು ಕಾಂಗ್ರೆಸ್

blank

ಸಾಗರ: ಸಂವಿಧಾನವನ್ನು ವಿರೂಪಗೊಳಿಸಿದ್ದು ಕಾಂಗ್ರೆಸ್ ಪಕ್ಷ. ಸಂವಿಧಾನದ ಮೇಲೆ ದೌರ್ಜನ್ಯ ನಡೆಸಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಲ್ಲದೆ, 75ಕ್ಕೂ ಹೆಚ್ಚು ಬಾರಿ ಸಂವಿಧಾನ ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.
ಸಾಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಗುರುವಾರ ಸಿಟಿಜನ್ ಫಾರ್ ಸೋಶಿಯಲ್ ಜೆಸ್ಟಿಸ್ ಸಂಸ್ಥೆಯಿಂದ ಆಯೋಜಿಸಿದ್ದ ಸಂವಿಧಾನ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಆಶಯ ಮತ್ತು ಅಸ್ತಿತ್ವ ಉಳಿಸಲು, ಸಂವಿಧಾನದ ಮೂಲ ಚಿಂತನೆ ಕಾಪಾಡಲು ಸಂಘ ಪರಿವಾರ ಮತ್ತು ಬಿಜೆಪಿ ಶ್ರಮಿಸಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದ ಎಲ್ಲ ಸಂದರ್ಭದಲ್ಲೂ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಉಳಿಸಿ ಮುಂದಿನ ತಲೆಮಾರಿಗೆ ತಲುಪಿಸುವ ಕಾರ್ಯವನ್ನು ಜವಾಬ್ದಾರಿಯಿಂದ ಮಾಡಿದೆ. ಕಾಂಗ್ರೆಸ್ ಪಕ್ಷ ಕಾಲಕಾಲಕ್ಕೆ ಅಂಬೇಡ್ಕರ್ ಅವರನ್ನು ಹಿಮ್ಮೆಟ್ಟಿಸುವ ಕೆಲಸ ಮಾಡಿರುವುದು ಜನತೆಗೆ ತಿಳಿದಿದೆ ಎಂದು ಹೇಳಿದರು.
ಮಹಾತ್ಮ ಗಾಂಧೀಜಿ ಹೆಸರಿನಲ್ಲಿ ಕೆಲವು ನಕಲಿ ಗಾಂಧಿಗಳು ವಿಜೃಂಭಿಸುತ್ತಿದ್ದಾರೆ. ಇದರಿಂದ ನಿಜವಾಗಿಯೂ ದೇಶಕ್ಕೆ ಸ್ವಾತಂತ್ರೃ ತಂದುಕೊಡಲು ಶ್ರಮಿಸಿದ ಮಹಾತ್ಮ ಗಾಂಧೀಜಿ ಅವರ ಅಸ್ತಿತ್ವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರ ಮನೆಯಲ್ಲಿ ಭಗವದ್ಗೀತೆ ಹೇಗೆ ಇರಿಸಿಕೊಳ್ಳುತ್ತೇವೆಯೋ, ಅದೇ ರೀತಿ ಸಂವಿಧಾನವನ್ನೂ ಇರಿಸಿಕೊಳ್ಳಬೇಕು ಎಂದು ತಿಳಿಸಿದರು.
ಭಾರತ ದೇಶ ನೆಮ್ಮದಿಯಿಂದ ಇರಲು ದುಷ್ಟಶಕ್ತಿಗಳು ಇಚ್ಛಿಸುತ್ತಿಲ್ಲ. ಇವು ಈ ಹಿಂದೆ ಕಾಡಿನಲ್ಲಿ ಬಂದೂಕು ಹಿಡಿದು ವ್ಯವಸ್ಥೆಯನ್ನು ಬುಡಮೇಲು ಮಾಡುವ ಪ್ರಯತ್ನ ನಡೆಸಿದ್ದವು. ನಿಧಾನವಾಗಿ ನಗರಗಳಿಗೆ ಸ್ಥಳಾಂತರವಾಗಿ ಬಂದೂಕು ಕೆಳಗಿರಿಸಿ, ಸಮಾಜ ಒಡೆಯುವ, ಜಾತೀಯ ವಿಷಬೀಜ ಬಿತ್ತುವ, ಸಾಮರಸ್ಯ ಕದಡುವ ಕೆಲಸ ಮಾಡುತ್ತಿವೆ. ಇಂತಹ ನಗರ ನಕ್ಸಲರ ಆಲೋಚನಾ ಲಹರಿಯೆ ಆತಂಕಕಾರಿ. ಬಿಜೆಪಿಗೆ ಸಂವಿಧಾನ ವಿರೋಧಿ ಎನ್ನುವ ಹಣೆಪಟ್ಟಿ ಕಟ್ಟುವ ಹುನ್ನಾರದ ವಿರುದ್ಧ ದೇಶವಾಸಿಗಳಿಗೆ ಸತ್ಯವಾದ ಮಾಹಿತಿ ತಲುಪಿಸಬೇಕು ಎಂದು ತಿಳಿಸಿದರು.
ಎಂಎಲ್‌ಸಿ ಶಾಂತರಾಮ ಸಿದ್ದಿ, ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಿಯೋಜಿತ ಜಿಲ್ಲಾಧ್ಯಕ್ಷ ಜಗದೀಶ್, ಅ.ಪು.ನಾರಾಯಣಪ್ಪ, ಪ್ರತಿಮಾ ಜೋಗಿ, ಡಾ. ರಾಜನಂದಿನಿ ಕಾಗೋಡು, ಮಲ್ಲಿಕಾರ್ಜುನ ಹಕ್ರೆ, ದೇವೇಂದ್ರಪ್ಪ, ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಮಂಜಪ್ಪ, ಎ.ಟಿ.ನಾಗರತ್ನ, ರೇವಪ್ಪ, ಗಾಯತ್ರಿ ಮಲ್ಲೇಶಪ್ಪ, ವಿಕಾಸ್ ಪುತ್ತೂರು, ರೇಖಾ, ರವಿ ಗೌತಮಪುರ ಇನ್ನಿತರರಿದ್ದರು.

Share This Article

ಕಲ್ಲಂಗಡಿಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಯಾವುದೇ ಕಾರಣಕ್ಕೂ ಇಷ್ಟು ಹೊತ್ತು ಇಡಲೇಬೇಡಿ, ಅಪಾಯ ಫಿಕ್ಸ್​! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…