ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವುಗಳ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿರುವುದು ದುಃಖ ತರಿಸಿದೆ ಎಂದು ಬಿಜೆಪಿ(BJP) ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ದೇಶಕ್ಕೆ ಮಾದರಿಯಾಗಿದ್ದ ಆರೋಗ್ಯ ಇಲಾಖೆಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ದುರಾಡಳಿತದಲ್ಲಿ ಇಲಾಖೆಯ ಅಕ್ರಮ, ಭ್ರಷ್ಟಾಚಾರಗಳು ಲೋಕಾಯುಕ್ತ ದಾಳಿಯಿಂದ ಬಯಲಾಗುತ್ತಿವೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ನನ್ನ ನಾಯಿ ಪ್ರೀತಿಗಿಂತ ಯಾವುದೇ ಪ್ರೀತಿ ದೊಡ್ಡದಲ್ಲ! ನಾಗಚೈತನ್ಯ 2ನೇ ಮದ್ವೆ ಬೆನ್ನಲ್ಲೇ samantha ಪೋಸ್ಟ್ ವೈರಲ್
ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಾಗುತ್ತಿದ್ದರೂ, ಸಾರ್ವಜನಿಕರು ಬಿದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರು ತಕ್ಕಪಾಠ ಕಲಿಸಲೇ ಬೇಕಿದೆ ಬಿಎಸ್ವಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: 2 ಲಕ್ಷ ರೂ.ಗೆ ಮೂವರು ಗಂಡು ಮಕ್ಕಳ ಮಾರಾಟ ಮಾಡಿದ ಮಹಾತಾಯಿ ಅರೆಸ್ಟ್! | Mother
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವುಗಳ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿರುವುದು ದುಃಖ ತರಿಸಿದೆ. ಈ ಹಿಂದಿನ @BJP4Karnataka ಸರ್ಕಾರದ ಆಡಳಿತಾವಧಿಯಲ್ಲಿ ದೇಶಕ್ಕೆ ಮಾದರಿಯಾಗಿದ್ದ… pic.twitter.com/42Ye8A0dWd
— Vijayendra Yediyurappa (@BYVijayendra) December 9, 2024
ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ
ರಾಜ್ಯದಲ್ಲಿ ಬಾಣಂತಿಯರು ಮತ್ತು ಹಸುಗೂಸುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿದ್ದು, ಸೋಮವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿಯರ ಕ್ಷೇಮ ವಿಚಾರಿಸಲಾಯಿತು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
2 ಲಕ್ಷ ರೂ.ಗೆ ಮೂವರು ಗಂಡು ಮಕ್ಕಳ ಮಾರಾಟ ಮಾಡಿದ ಮಹಾತಾಯಿ ಅರೆಸ್ಟ್! | Mother