More

    ಕಾಂಗ್ರೆಸ್‌ಗೆ ಮಾತನಾಡುವ ನೈತಿಕತೆ ಇಲ್ಲ

    ಮಂಡ್ಯ : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಕಾಂಗ್ರೆಸ್ ಪಕ್ಷದವರಿಗೆ ಸಂವಿಧಾನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

    • ಮಳವಳ್ಪಳಿ ಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸೋಮವಾರ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಪ್ರತಿಯೊಬ್ಬ ನಾಗರಿಕನಿಗೂ ಮತದಾನ ಮಾಡುವ ಅವಕಾಶವನ್ನು ಸಂವಿಧಾನ ನೀಡಿದೆ. ಚುನಾವಣೆಯಲ್ಲಿ ಬಹುಮತದಿಂದ ಆಯ್ಕೆಯಾದ ಯಾವುದೇ ಸರ್ಕಾರ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಆದರೆ ಕೇಂದ್ರದಲ್ಲಿ ಏಳು ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ತೊಂಬತ್ತೆಂಟು ಬಾರಿ ತಿದ್ದುಪಡಿ ಮಾಡುವ ಮೂಲಕ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು.
    • ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜಕೀಯವಾಗಿ ಶಕ್ತಿ ನೀಡಿರುವ ಕ್ಷೇತ್ರ ಮಂಡ್ಯ. ಕಳೆದ 2018 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆ ಏಳೂ ಕ್ಷೇತ್ರಗಳನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು ಜಿಲ್ಲೆಯ ಮತದಾರರ ಕೊಡುಗೆ ಅಪಾರವಾಗಿದೆ ಎಂದರು.
    • ಮಂಡ್ಯ ಜಿಲ್ಲೆ ಎಂದಾಕ್ಷಣ ಕಾವೇರಿ ನದಿ ವಿಚಾರ ಮುನ್ನೆಲೆಗೆ ಬರುತ್ತಿದೆ. ಪ್ರಸ್ತುತ ಕೆ. ಆರ್.ಎಸ್. ಜಲಾಶಯದಲ್ಲಿ 86 ಅಡಿ ನೀರಿದ್ದರೂ ನಾಲೆಗಳಿಗೆ ನೀರು ಹರಿಸದೆ ರೈತರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸುವುದರಿಂದ ಕಾವೇರಿ ಸಮಸ್ಯೆಗೆ ಶಾಸ್ವತ ಪರಿಹಾರದ ಜತೆಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಮತ್ತು ರೈತರಿಗೆ ಆಗುತ್ತಿರುವ ಅನ್ಯಾಯಗಳನ್ನು ತಡೆಗಟ್ಟಲು ಮತದಾರರು ಜೆಡಿಎಸ್ ಪಕ್ಷದ ಚಿಹ್ನೆ ತೆನೆ ಹೊತ್ತ ಮಹಿಳೆ ಗುರುತಿಗೆ ಮತನೀಡಿ ಆಶೀರ್ವಾದಿಸಬೇಕೆಂದು ಮನವಿ ಮಾಡಿದರು.
    • ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜೆಡಿಎಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧಕ್ಷ ಡಿ.ಜಯರಾಮು, ಬಿಜೆಪಿ ಮುಖಂಡ ಮುನಿರಾಜು, ಪುರಸಭೆ ಸದಸ್ಯರಾದ ಟಿ.ನಂದಕುಮಾರ್, ಪ್ರಶಾಂತ್, ಸಿದ್ದರಾಜು, ನೂರುಲ್ಲಾ, ಪುಟ್ಟಸ್ವಾಮಿ, ಕೃಷ್ಣ, ಜಯಸಿಂಹ, ಜಿ.ಪಂ. ಮಾಜಿ ಸದಸ್ಯ ರವಿ ಕಂಸಾಗರ, ಜೆಡಿಎಸ್ ತಾಲೂಕು ಅಧ್ಯಕ್ಷ ವಿ.ಎಂ.ವಿಶ್ವನಾಥ್, ಯುವ ಘಟಕದ ಅಧ್ಯಕ್ಷ ಚಂದಳ್ಳಿ ಶ್ರೀಧರ್, ಯಮದೂರು ಸಿದ್ದರಾಜು ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts