More

    ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

    ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಕೂಡ ಹಾಕಲ್ಲ. ಸ್ಯಾಮ್ ಪಿತ್ರೊಡಾ ಹೇಳಿಕೆ ಅವರ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಸಂಬಂಧವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
    ಚುನಾವಣೆ ಸಂದರ್ಭದಲ್ಲಿಯೇ ಕಾಂಗ್ರೆಸ್ ಥಿಂಕ್ ಥ್ಯಾಂಕರ್ ಸ್ಯಾಮ್ ಪಿತ್ರೊಡಾ ಅವರು ‘ಪಿತ್ರಾರ್ಜಿತ ಆಸ್ತಿಯಲ್ಲಿ ಶೇ.50 ಸರ್ಕಾರ ಪಡೆಯಬೇಕು’ ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಡಿ.ಕೆ ಶಿವಕುಮಾರ್, ಪಕ್ಷದ ನಿಲುವೇನೆಂಬುದನ್ನು ನಮ್ಮ ನಾಯಕ ಜೈರಾಮ್ ರಮೇಶ್ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್ ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದರು.
    ನಮ್ಮ ದೇಶದಲ್ಲಿ ರಾಜಕಾರಣದಲ್ಲಿ ತಂದೆ ಹಾಗು ಪೂರ್ವಜರ ಹೆಸರಿನಲ್ಲಿ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ಎಂದರು.
    ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದಾಚೆಗಿನ ಅಂಶಗಳಿಗೆ ಪಕ್ಷಕ್ಕೆ ಸಂಬಂಧವಿಲ್ಲ. ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ ಎಂದು ತಿಳಿಸಿದರು.
    ಪ್ರಧಾನಮಂತ್ರಿ ಹತಾಶೆ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅವರ ಪಕ್ಷದ ನೆಲೆ ಇಲ್ಲ. ಹೀಗಾಗಿ ಆಂಧ್ರದಲ್ಲಿ ಟಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಅವರ ಸರ್ಕಾರ ಇಲ್ಲ. ಕರ್ನಾಟಕದಲ್ಲೂ ಅವರು ಎರಡಂಕಿ ಸ್ಥಾನ ಪಡೆಯಲ್ಲ. ಹೀಗಾಗಿ ಹತಾಶೆಯಿಂದ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts