ಕಾಂಗ್ರೆಸ್‌ನಿಂದ ಮಹಿಳಾ ಪರ ಯೋಜನೆ ಜಾರಿ

kon
Published on

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ದೇಶಾದ್ಯಂತ ಮತ್ತು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ಮಹಿಳೆಯರು ಹಾಗೂ ದಲಿತರ ಪರ ಅತಿ ಹೆಚ್ಚು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ವಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಆವರ್ಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಬೂತ್‌ಮಟ್ಟದ ಮಹಿಳಾ ಸಂಘಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ.ಕುಂದರ್, ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಪಿ.ಸುವರ್ಣ, ಬ್ರಹ್ಮಾವರ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಮತಾ ಕಿಶೋರ್ ಶೆಟ್ಟಿ, ಆವರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಗಾಣಿಗ, ಉಪಾಧ್ಯಕ್ಷೆ ಸಬೀನಾ ಬಾನು, ಸದಸ್ಯರಾದ ಚಿತ್ತರಂಜನ್ ಶೆಟ್ಟಿ ಹಿಲಿಯಾಣ, ಲಕ್ಷ್ಮಣ ಪೂಜಾರಿ, ಜ್ಯೋತಿ ಬಾಯಿ, ಸಂತೋಷ್ ಶೆಟ್ಟಿ ಹಿಲಿಯಾಣ, ವಿಜಯೇಂದ್ರ ಶೆಟ್ಟಿ ಕಕ್ಕುಂಜೆ, ವಿಜಯಕುವಾರ್ ಶೆಟ್ಟಿ ಆವರ್ಸೆ, ದಿನಕರ್ ಶೆಟ್ಟಿ ಹಿಲಿಯಾಣ, ಶಂಕರ್ ಪೂಜಾರಿ ಆವರ್ಸೆ, ಚಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಚಿತ್ತರಂಜನ್ ಶೆಟ್ಟಿ ಸ್ವಾಗತಿಸಿ, ಧನ್ಯವಾದಗೈದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರ ಪರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಆಮಿಷಗಳಿಗೆ ಬಲಿಯಾಗದೆ ಜನಪರ ಕೆಲಸ ಮಾಡುವ ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಸಂಸದ https://www.vijayavani.net/vanamahotsava-at-bagwadi-temple https://www.vijayavani.net/troubled-by-unscientific-work

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net