More

    ಒಂದು ಸಮುದಾಯ ಓಲೈಕೆ ಮಾಡುವಲ್ಲಿ ಕಾಂಗ್ರೆಸ್ ನಿರತ

    ಪಾಂಡವಪುರ: ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ಓಲೈಕೆ ಮಾಡುವಲ್ಲಿ ನಿರತವಾಗಿದೆ ಎಂದು ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್ ಬುಧವಾರ ಆರೋಪಿಸಿದರು.

    ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಪವಿತ್ರ ಮಂತ್ರಾಕ್ಷತೆಯನ್ನು ಪಟ್ಟಣದ ಮನೆ ಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಕಳೆದ ವಿಧಾನಸಭಾ ಚಯನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದರೂ ಸದಾ ಕಾಂಗ್ರೆಸ್ ಪರವಾಗಿ ನಿಲ್ಲುವ ಒಂದು ಸಮುದಾಯದ ತುಷ್ಟೀಕರಣಕ್ಕೆ ಮುಂದಾಗಿರುವ ಸಿದ್ದರಾಮಯ್ಯ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಮುದಾಯವನ್ನು ಸಮಾನವಾಗಿ ಕಾಣುವುದನ್ನು ಬಿಟ್ಟು, ಮತ ಬ್ಯಾಂಕ್‌ಗಾಗಿ ಒಂದು ಸಮುದಾಯಕ್ಕೆ 10 ಸಾವಿರ ಕೋಟಿ ರೂ. ನೀಡುವುದಾಗಿ ಪ್ರಕಟಿಸಿರುವುದು ಖಂಡನೀಯ. ಯಾವಾಗಲೂ ಸಿದ್ದರಾಮಯ್ಯ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

    ಸಭೆ-ಸಮಾರಂಭಗಳಲ್ಲಿ ಸಿದ್ದರಾಮಯ್ಯ ಹೆಸರಿನ ನನ್ನ ಹೆಸರಿನಲ್ಲೇ ರಾಮನಿದ್ದಾನೆ ಎನ್ನುವ ಮುಖ್ಯಮಂತ್ರಿ ಹಿಂದು ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದ್ದು, ಈ ಕೂಡಲೇ ಹಿಂದು ವಿರೋಧಿ ಧೋರಣೆಯನ್ನು ಅವರು ಕೈ ಬಿಡಬೇಕು ಎಂದು ಒತ್ತಾಯಿಸಿದರು.

    ರಾಮಭಕ್ತ ಶ್ರೀಕಾಂತ್ ಪೂಜಾರಿ ಹಳೇ ಕೇಸ್‌ಗಳನ್ನು ಕೆದಕುವ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರನ್ನು ಬೆದರಿಸಲು ಮುಂದಾಗಿದೆ. ಈ ಕೂಡಲೇ ಶ್ರೀಕಾಂತ್ ಪೂಜಾರಿ ಅವರ ವಿರುದ್ಧ ಹಾಕಲಾಗಿರುವ ಕೇಸ್ ವಾಪಸ್ ಪಡೆದು ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
    ಇದೇ ವೇಳೆ ಪಟ್ಟಣದಲ್ಲಿ ವಿವಿಧ ಅಂಗಡಿಗಳಿಗೆ ತೆರಳಿ ವಿಶ್ವ ಹಿಂದು ಪರಿಷತ್ ಹಾಗೂ ಶ್ರೀರಾಮ ಭಕ್ತರು ಅಯೋಧ್ಯೆಯಿಂದ ಪೂಜಿಸಿ, ಭಾರತ ದೇಶಾದ್ಯಂತ ವಿತರಣೆ ಮಾಡಲಾಗುತ್ತಿರುವ ಮಂತ್ರಾಕ್ಷತೆಯನ್ನು ವಿತರಿಸಿದರು.

    ವಿಶ್ವ ಹಿಂದು ಪರಿಷತ್, ಶ್ರೀರಾಮ ಭಕ್ತರಾದ ಎಲ್.ಅಶೋಕ್, ನೀಲನಹಳ್ಳಿ ಧನಂಜಯ, ಶ್ರೀನಿವಾಸ್ ನಾಯ್ಕ, ಎಸ್‌ಎನ್‌ಟಿ ಸೋಮಶೇಖರ್, ಬಳಿಘಟ್ಟ ಅಶೋಕ್, ಮಂಗಳಾ ನವೀನ್, ಸೋಮಾಚಾರಿ, ಕೆ.ಎಲ್.ಆನಂದ್, ಚಿಕ್ಕಮರಳಿ ನವೀನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts