More

    ಮತದಾರರ ವಿಭಜಿಸಲು ಕಾಂಗ್ರೆಸ್ ಹುನ್ನಾರ

    ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗಕ್ಕೆ ಸೇರಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಒಬಿಸಿ ಮೋರ್ಚಾದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
    ತಾಲೂಕು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಮಿಲಿಟರಿ ಬಸವರಾಜ್ ಮಾತನಾಡಿ, ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಹಿಂದುಳಿದ ವರ್ಗಕ್ಕೆ ಸೇರಿಲ್ಲ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. ಹಿಂದುಳಿದ ವರ್ಗಗಳ ಮತಗಳನ್ನು ಒಡೆಯಲು ಈ ರೀತಿ ಅನಗತ್ಯ ಹೇಳಿಕೆ ನೀಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
    ಮೋದಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಲ್ಲದೆ ವಿಶ್ವವೇ ಅವರ ನಾಯಕತ್ವವನ್ನು ಮೆಚ್ಚಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಈ ರೀತಿ ಹೇಳಿಕೆ ನೀಡಿ ಹಿಂದುಳಿದ ವರ್ಗಗಳ ಮನಸ್ಥಿತಿ ಬದಲಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಅನಗತ್ಯ ಮತ್ತು ಅವಾಸ್ತವಿಕ ಹೇಳಿಕೆ ನೀಡಿದ್ದಕ್ಕಾಗಿ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬಿಜೆಪಿ ಒಬಿಸಿ ಮೋರ್ಚಾದಿಂದ ಗಂಭೀರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
    ಮೋದಿ ಅವರ ಜನಪ್ರಿಯತೆ ಕಂಡು ಕಾಂಗ್ರೆಸ್ಸಿಗರಿಗೆ ಸಹಿಸಲಿಕೊಳ್ಳಲಾಗುತ್ತಿಲ್ಲ. ಸಮೀಕ್ಷೆಗಳು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ ಎಂದು ಹೇಳಿವೆ. ಹಿಂದುಳಿದ ವರ್ಗಗಳ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆ ನೀಡಿ ಷಡ್ಯಂತ್ರ ಮಾಡುತ್ತಿದೆ. ಆದರೆ ಅದು ಫಲಿಸುವುದಿಲ್ಲ ಎಂದು ಹೇಳಿದರು.
    ತಾಲೂಕು ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಯುವ ಮೋರ್ಚಾ ಅಧ್ಯಕ್ಷ ವೀರನಗೌಡ, ನಗರ ಬಿಜೆಪಿ ಅಧ್ಯಕ್ಷ ರಾಘವೇಂದ್ರ, ಪುರಸಭೆ ಸದಸ್ಯ ಪಾಲಾಕ್ಷಪ್ಪ , ಬೆಣ್ಣೆ ಪ್ರವೀಣ್, ಮಧು ಹೋತನಕಟ್ಟೆ, ದಿನೇಶ್ ಕಟ್ಟಿಗೆಹಳ್ಳಿ, ಜಯಂತಿಬಾಯಿ, ಅಶೋಕ್, ದಿನೇಶ್ ಕಪ್ಪನಹಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts