More

    ಕಾಂಗ್ರೆಸ್ ಅಧಿಕಾರ ಹಿಡಿಯುವುದು ನಿಶ್ಚಿತ

    ತರೀಕೆರೆ: ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯದಂತೆ ಬಡವರು, ದಲಿತರು, ಅಲ್ಪ ಸಂಖ್ಯಾತರು, ಶೋಷಿತರು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬಂದಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಿಎಂ ಎಸ್.ಸಿದ್ದರಾಮಯ್ಯ ಹೇಳಿದರು.
    ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಏರ್ಪಡಿಸಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹಗ್ಡೆ ಅವರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಿತದೃಷ್ಟಿಯಿಂದ ಈ ಚುನಾವಣೆ ಮಹತ್ವ ಪಡೆದೆ. ಯಾವ ಪಕ್ಷ ಮುಂದಿನ 5 ವರ್ಷ ಆಡಳಿತ ನಡೆಸಲಿದೆಯೋ ಅದರ ಆಧಾರದಲ್ಲಿ ಅಭಿವೃದ್ಧಿ ನಿರ್ಧರಿಸಬಹುದಾಗಿದೆ. ಈವರೆಗೆ ಬಿಜೆಪಿ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿಲ್ಲ. ಸಂವಿಧಾನದ ಬಗ್ಗೆ ಗೌರವವಿರಲಿ, ಅದರ ಧ್ಯೇಯೋದ್ದೇಶ ಈಡೇರಿಸುವ ಬದ್ಧತೆ ಕೂಡ ಪ್ರದರ್ಶಿಸಿಲ್ಲ ಎಂದು ದೂರಿದರು.
    ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್ ಮಾತನಾಡಿ, ಬಿಜೆಪಿ ನೋಟು ಅಮಾನ್ಯೀಕರಣ, ಕರೋನಾ, ಲಾಕ್‌ಡೌನ್ ಬಳಿಕ ಜನರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದೆ. ಬಿಜೆಪಿ ಭಾವನೆಗಳ ಜತೆ ಆಟವಾಡುತ್ತಿದೆ. ಚುನಾವಣಾ ಆಯೋಗದ ಕಾರ್ಯವೈಖರಿ ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಶೇ.58 ಜನ ಅನುಮಾನ, ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಎಚ್ಚರಿಕೆಯಿಂದ ಚುನಾವಣೆ ಎದುರಿಸಬೇಕಿದೆ. ಚುನಾವಣೆ ನಂತರ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಭವಿಷ್ಯ ನುಡಿದರು.
    ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ,ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿದ 5 ಗ್ಯಾರಂಟಿ ಯೋಜನೆಗಳು ಬಡವರ ಬದುಕನ್ನು ಬದಲಾಯಿಸಿದೆ. ಬಿಜೆಪಿ ಇಡಿ, ಸಿಬಿಐ ನಂಥ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಸಂವಿಧಾನ ಉಳಿಯುವುದೇ ಅನುಮಾನವಾಗಿದೆ. ಬಿಜೆಪಿ ದುರಾಡಳಿತದಿಂದ ಬೇಸತ್ತ ಜನ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದರು.
    ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್, ನಯನ ಮೋಟಮ್ಮ, ಮಾಜಿ ಸಂಸದರಾದ ಆಯನೂರು ಮಂಜುನಾಥ್, ಡಿ.ಕೆ.ತಾರಾದೇವಿ, ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಮಾಜಿ ಶಾಸಕರಾದ ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ, ಮೋಟಮ್ಮ, ಮಾಜಿ ಎಂಎಲ್ಸಿಗಳಾದ ಎ.ವಿ.ಗಾಯತ್ರಿ ಶಾಂತೇಗೌಡ, ಎಂ.ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ.ಅಂಶುವಂತ್, ಮಾಜಿ ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎಂ.ಸಂತೋಷ್, ಎಚ್.ಎಂ.ಗೋಪಿಕೃಷ್ಣ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts