20.4 C
Bengaluru
Sunday, January 19, 2020

ಗುಂಪುಗಾರಿಕೆಗೆ ಬಹು ದೊಡ್ಡ ಬೆಲೆತೆತ್ತ ಕಾಂಗ್ರೆಸ್

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬೆಂಗಳೂರು: ಎರಡು ವರ್ಷಗಳಿಂದೀಚಿಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಭಿನ್ನಮತಕ್ಕೆ ಕಾಂಗ್ರೆಸ್ ದೊಡ್ಡ ಬೆಲೆ ತೆತ್ತಿದೆ. ಮೈತ್ರಿ ಸರ್ಕಾರ ಕಳೆದುಕೊಳ್ಳುವಲ್ಲಿಂದ ಆರಂಭವಾಗಿ ಬಲಾಢ್ಯ ಶಾಸಕರನ್ನು ಬಿಟ್ಟುಕೊಟ್ಟಿತು, ಅಷ್ಟೇ ಅಲ್ಲದೆ, ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನೆಪದಲ್ಲಿ ಕಾರ್ಪೆರೇಟರ್ ಹಾಗೂ ಪದಾಧಿಕಾರಿಗಳನ್ನು ಕಳೆದುಕೊಂಡಿದೆ.

2013ರಲ್ಲಿ ಸರ್ಕಾರ ರಚಿಸಿದಲ್ಲಿಂದಲೂ ಒಳಗೊಳಗೆ ಶೀತಲ ಸಮರ ನಡೆದೆ ಇತ್ತು. 2018ರ ವಿಧಾನಸಭಾ ಚುನಾವಣೆ ಬಳಿಕ ಬಣಗಳಾಗಿ ಹೈಕಮಾಂಡ್ ಅಖಾಡದಲ್ಲಿ ಗುದ್ದಾಡಿದವು. ಅನೇಕ ಸಂದರ್ಭದಲ್ಲಿ ಮೇಲುಗೈ ಸಾಧಿಸಿ ಮೀಸೆ ತಿರುವಿದವು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಲ್ಲಿಂದಲೂ ಘರ್ಷಣೆ ತೀವ್ರಗೊಂಡಿತ್ತು.

ಸಿದ್ದರಾಮಯ್ಯ ವಿರುದ್ಧ ಸಿಡಿದೇಳುತ್ತಲೇ ಇದ್ದ ಹಿರಿಯ ನಾಯಕರು, ವಲಸಿಗ ಮತ್ತು ಮೂಲನಿವಾಸಿಗಳು ಎಂದು ಎರಡು ಗುಂಪಾಗಿ ಪರಿವರ್ತಿಸುವಲ್ಲಿ ಸಫಲರಾಗಿದ್ದರು. ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಒಂದು ತಂಡ ಪ್ರಯತ್ನ ನಡೆಸಿದರೆ, ಮತ್ತೊಂದು ತಂಡಕ್ಕೆ ಬೇಡವಾಗಿತ್ತು. ಇಷ್ಟರಲ್ಲೇ 17 ಶಾಸಕರ ಗುಂಪು ಮುಂಬೈಗೆ ಹಾರಿ ಸರ್ಕಾರವನ್ನು ಕೆಡವಿತು.

ಬಳಿಕ ನಡೆದ ರಾಜಕೀಯ ವಿದ್ಯಮಾನದಲ್ಲಿ ಅನರ್ಹ ಶಾಸಕರ ಜತೆ ಆ ಕ್ಷೇತ್ರಗಳಲ್ಲಿನ ಕೈ ಕಾರ್ಯಕರ್ತರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಅನರ್ಹರ ಜತೆ ಸಾಗಿದರು. ಈ ಬೆಳವಣಿಗೆಯ ಸಂಪೂರ್ಣ ನಷ್ಟವಾಗಿದ್ದು ಪಕ್ಷಕ್ಕೆ ಎಂಬುದರಲ್ಲಿ ಎರಡು ಮಾತಿಲ್ಲ. ಉಪಚುನಾವಣೆಯಲ್ಲಿ ಅನೇಕ ಬೂತ್​ಗಳಲ್ಲಿ ಮತದಾರರಿಗೆ ಚೀಟಿ ಬರೆದುಕೊಡಲೂ ಕಾರ್ಯಕರ್ತರಿಲ್ಲದ ಸ್ಥಿತಿ ಇತ್ತು! ಗುಂಪುಗಾರಿಕೆ ಇಲ್ಲದೆ ಇದ್ದಿದ್ದರೆ, ಪಕ್ಷವೂ ಶಿಸ್ತಿನಿಂದ ಇರುತ್ತಿತ್ತು ಮತ್ತು ಯಾರೂ ಪಕ್ಷ ಬಿಡುವ ಸಂದರ್ಭ ಇರುತ್ತಿರಲಿಲ್ಲ ಎಂದು ಕೈ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ.

ಇದೀಗ ಬಿಜೆಪಿ ಗೆಲುವು ಸಾಧಿಸಿದ ಕ್ಷೇತ್ರಗಳಲ್ಲಿ ಮತ್ತೆ ಪಕ್ಷ ಕಟ್ಟಿ ಬೆಳೆಸುವುದು, ನಾಯಕರನ್ನು ಬೆಳೆಸುವುದು ಅಷ್ಟು ಸುಲಭದ ಮಾತಲ್ಲ. ಹೀಗಾಗಿ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಹಿರಿಯ ನಾಯಕರೊಬ್ಬರು ಅಭಿಪ್ರಾಯಪಡುತ್ತಾರೆ. ಪಕ್ಷದಲ್ಲಿ ಹಿರಿಯರ್ಯಾರಿಗೂ ಗೆಲುವು ಬೇಕಾಗಿರಲಿಲ್ಲ, ಜೆಡಿಎಸ್ ಜತೆ ಮೈತ್ರಿಗೆ ಹೆಚ್ಚಿನ ಒಲವು ತೋರಿದ್ದರು. ಆದ್ದರಿಂದಲೇ ಪ್ರಚಾರಕ್ಕೂ ಬಾರದೆ ಭಿನ್ನಮತೀಯ ಚಟುವಟಿಕೆಗೆ ನೀರೆರೆದು ಪೋಷಿಸಿದರು. ಮಾಧ್ಯಮಗಳಲ್ಲಿ ಸುದ್ದಿಯಾಗುವಂತೆಯೂ ನೋಡಿಕೊಳ್ಳಲು ಸಫಲರಾದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...