ಆಪರೇಷನ್ ಆತಂಕ ಅಧಿಕಾರಕ್ಕಾಗಿ ಅಂಕ: ಸಂಪುಟ ಸೇರಲು ಕೈ ಶಾಸಕರ ಒತ್ತಡ ತಂತ್ರ, ಗುಮ್ಮ ತೋರಿಸಿ ಗುರಿ ಸಾಧನೆಗೆ ಯತ್ನ

Latest News

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ರಕ್ಷಣಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ ಆಯ್ಕೆ: ಇದು ದೇಶಕ್ಕೆ ಮಾಡಿದ ಅಪಮಾನವೆಂದ ಕಾಂಗ್ರೆಸ್​

ನವದೆಹಲಿ: ಮಾಲೆಗಾಂವ್​ ಸ್ಪೋಟ(2008) ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದ 21 ಸದಸ್ಯರ...

ಶಾಸಕ ತನ್ವೀರ್​ ಸೇಠ್​ ಕಿವಿ ಕೆಳ ಭಾಗದಲ್ಲಿ ಊನ; ಆಪರೇಷನ್​ ನಡೆಸಿದ ವೈದ್ಯರು

ಮೈಸೂರು: ಶಾಸಕ‌ ತನ್ವೀರ್‌ಸೇಠ್ ದೇಹದಲ್ಲಿ ಕಿವಿ ಕೆಳಭಾಗಕ್ಕೆ ಹೊಲಿಗೆ ಹಾಕಲಾಗಿದ್ದ ಸ್ಥಳದಲ್ಲಿ ಊನ ಕಂಡುಬಂದಿದೆ. ಹೊಲಿಗೆ ಹಾಕಿದ್ದ ಭಾಗ ಕಪ್ಪನೆಯ ಬಣ್ಣಕ್ಕೆ ತಿರುಗಿದ್ದರಿಂದ...

ಬೆಂಗಳೂರು: ಅಭದ್ರೆತೆಯ ಅಳುಕಿನಲ್ಲಿರುವ ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲದ ಗುಮ್ಮ ತೋರಿಸಿ ಸಂಪುಟ ಸೇರಲು ಕೆಲವು ಕಾಂಗ್ರೆಸ್ ಶಾಸಕರು ಮುಂದಾಗಿರುವ ಬೆಳವಣಿಗೆ ನಡೆದಿದೆ.

ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಪ್ರಸ್ತಾಪ ಮಾಡಿದ್ದಾರೆ, ಮುಂದೆ ಹಂತ ಹಂತವಾಗಿ ಶಾಸಕರು ರಾಜೀನಾಮೆ ನೀಡುತ್ತಾರೆ, ಈ ಪ್ರಯತ್ನದ ಹಿಂದೆ ಬಿಜೆಪಿ ರಾಷ್ಟ್ರೀಯ ನಾಯಕರಿದ್ದಾರೆ ಎಂಬ ಊಹಾಪೋಹ ಹರಿಯಬಿಟ್ಟು ಸಂಪುಟ ಪುನಾರಚನೆಗೆ ಒತ್ತಡ ಹೇರುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಂಪುಟ ಸೇರಲು ತಹತಹಿಸುತ್ತಿರುವ ಕೆಲವು ಶಾಸಕರು ಬುಧವಾರ ಪ್ರತ್ಯೇಕ ಸಭೆ ಮಾಡಿ, ತಮ್ಮ ಬೇಡಿಕೆಯನ್ನು ಯಾವ ರೀತಿ ಈಡೇರಿಸಿಕೊಳ್ಳಬೇಕೆಂಬ ಬಗ್ಗೆ ಚಿಂತನ-ಮಂಥನ ನಡೆಸಿದ್ದಾರೆ. ಸರ್ಕಾರವನ್ನು ಮಣಿಸಲು ಇದೇ ಸರಿಯಾದ ಸಂದರ್ಭ ಎಂಬ ಅಭಿಪ್ರಾಯಕ್ಕೂ ಬಂದಿದ್ದಾರೆ ಎನ್ನಲಾಗಿದೆ.

ಸೋಮವಾರ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿತ್ತು, ಒಂದು ವೇಳೆ ಪರಿಸ್ಥಿತಿ ಕೈ ಮೀರಿದರೆ ಸಂಪುಟದಲ್ಲಿರುವ ಕೆಲವು ಸಚಿವರನ್ನು ಕೈಬಿಟ್ಟು ಅತೃಪ್ತರಿಗೆ ಅವಕಾಶ ನೀಡಬಹುದು ಎಂಬ ಅಭಿಪ್ರಾಯಕ್ಕೆ ಬರಲಾಗಿತ್ತು. ಇದರ ಎಳೆ ಹಿಡಿದುಕೊಂಡಿರುವ ಕೆಲವು ಕೈ ಶಾಸಕರು, ಇಂಥ ಅವಕಾಶ ಮತ್ತೆ ಸಿಗದು. ಏನಾದರೂ ಮಾಡಿ ಈ ಬಾರಿ ಸಂಪುಟ ಸೇರಲೇಬೇಕೆಂಬ ತೀರ್ವನಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್ ಶಾಸಕರೊಬ್ಬರೇ ತಿಳಿಸಿದ್ದಾರೆ.

ಯಾರಿಗೆ ಅವಕಾಶ?: ಹಿಂದೊಮ್ಮೆ ಸರ್ಕಾರ ಉಳಿಸಿಕೊಳ್ಳಲು ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂಬಂರ್ಥ ಬರುವ ರೀತಿ ಕೃಷ್ಣ ಬೈರೇಗೌಡ ಮಾತನಾಡಿದ್ದರು. ಆ ಹಳೇ ಅಭಿಪ್ರಾಯವನ್ನೇ ಈಗ ಚಲಾವಣೆಗೆ ತಂದು ಅವರನ್ನು ಸಂಪುಟದಿಂದ ಕೈಬಿಡಬಹುದಲ್ಲ ಎಂಬ ಅಭಿಪ್ರಾಯ ಅತೃಪ್ತ ಶಾಸಕರಲ್ಲಿದೆ. ಐಎಂಎ ಪ್ರಕರಣ ನೆಪದಲ್ಲಿ ಜಮೀರ್ ಅಹಮದ್​ರಿಂದ ರಾಜೀನಾಮೆ ಪಡೆದುಕೊಳ್ಳುವುದು, ಜತೆಗೆ ಹಿರಿಯರಾದ ಕೆ.ಜೆ.ಜಾರ್ಜ್, ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಮತ್ತು ಜಯಮಾಲಾ ಅವರ ಸಂಪುಟ ಸೇವೆ ಮೊಟಕುಗೊಳಿಸಿ ಬೇರೆಯವರಿಗೆ ಅವಕಾಶ ಕೊಡಬಹುದೆಂಬ ಅಭಿಪ್ರಾಯ ತೇಲಿ ಬಿಡಲಾಗಿದೆ. ಜಯಮಾಲಾ ಬದಲು ರೂಪಾ ಶಶಿಧರ್​ಗೆ ಅವಕಾಶ ನೀಡಿದರೆ, ಎಡಗೈ ಸಮುದಾಯ ಮತ್ತು ಮಹಿಳಾ ಕೋಟಾ ಎರಡಕ್ಕೂ ಅವಕಾಶ ನೀಡಿದಂತಾಗುತ್ತದೆ. ಉಳಿದಂತೆ ನಾಗೇಂದ್ರ, ಬಿ.ಸಿ.ಪಾಟೀಲ್ ಅವರಿಗೆ ಮೊದಲ ಆದ್ಯತೆಯಲ್ಲಿ ನೀಡುವುದು. ಜಮೀರ್ ರಾಜೀನಾಮೆ ಸಂದರ್ಭ ಎದುರಾದರೆ, ತನ್ವೀರ್ ಸೇಠ್, ಜಾರ್ಜ್ ಬಿಟ್ಟುಕೊಟ್ಟಲ್ಲಿ ರಾಮಲಿಂಗಾರೆಡ್ಡಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್​ನ ಕೆಳಹಂತದ ನಾಯಕರಲ್ಲಿ ಚರ್ಚೆ ನಡೆದಿದೆ.

ಪುನಾರಚನೆ ಏಕೆ?

ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನ ನೀಡಿದ್ದರಿಂದ ಸರ್ಕಾರ ರಚಿಸುವ ಬಿಜೆಪಿ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ. ಇದೀಗ ಬಿ.ನಾಗೇಂದ್ರ, ಬಿ.ಸಿ.ಪಾಟೀಲ್ ಮತ್ತು ಅವರ ಜತೆ ಗುರುತಿಸಿಕೊಂಡ ಇನ್ನೊಬ್ಬ ಶಾಸಕರಿಗೆ ಮಂತ್ರಿ ಸ್ಥಾನ ನೀಡುವುದರಿಂದ ಬಿಜೆಪಿ ಪ್ರಯತ್ನಕ್ಕೆ ಪೂರ್ಣ ವಿರಾಮ ಹಾಕಿದಂತಾಗುತ್ತದೆ. ಜತೆಗೆ ರಾಮಲಿಂಗಾರೆಡ್ಡಿಗೆ ಅವಕಾಶ ನೀಡಿದಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಸಾಧ್ಯ ಎಂಬ ಮಾತೂ ಇದೆ.

ಬ್ಲಾ್ಯಕ್​ವೆುೕಲ್ ತಂತ್ರವೇ?

ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸದೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿ ಸುದ್ದಿಯಾದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಬಣ್ಣ ಬಯಲಾಗಿದೆ. ಇದೊಂದು ಬ್ಲಾ್ಯಕ್​ವೆುೕಲ್ ತಂತ್ರ ಎಂದು ಕಾಂಗ್ರೆಸ್ ನಾಯಕರೇ ಟೀಕಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸ್ಪೀಕರ್​ಗೆ ನೀಡಿದರೆ ಮಾತ್ರ ಅದು ಅಂಗೀಕಾರವಾಗುತ್ತದೆ ಎಂಬ ಕನಿಷ್ಠ ಜ್ಞಾನ ರಮೇಶ್​ಗೆ ಇದ್ದೇ ಇರುತ್ತದೆ. ಆದರೂ, ಸ್ಪೀಕರ್​ಗೆ ಕೊಡದೆ ಇರುವುದು ಒಂದು ನಾಟಕ ಎಂಬುದು ರಾಜ್ಯದ ಜನರಿಗೂ ಗೊತ್ತಾಗಿದೆ. ಇವರನ್ನು ಅವರ ಕ್ಷೇತ್ರದ ಜನರೂ ನಂಬುವ ಪರಿಸ್ಥಿತಿಯಲ್ಲಿಲ್ಲ ಎಂದು ಕಾಂಗ್ರೆಸಿಗರೊಬ್ಬರು ತಿಳಿಸಿದರು.

ನಡೆಯುವುದೆಂದು?

ಪ್ರಸ್ತುತ ಆಷಾಢ ಮಾಸ ಆರಂಭವಾಗಿರುವ ಕಾರಣ ವಿಧಾನಮಂಡಲ ಅಧಿವೇಶನದೊಳಗೆ ಬದಲಾವಣೆ ಮಾಡಲು ಎರಡೂ ಪಕ್ಷದ ನಾಯಕರು ಸಿದ್ಧರಿಲ್ಲ. ಆದರೆ, ಅಧಿವೇಶನದೊಳಗೆ ಮಾತುಕತೆಗಳನ್ನು ನಡೆಸಿ ಅಧಿವೇಶನ ಬಳಿಕ ಸಂಪುಟ ಪುನಾರಚನೆ ಮಾಡಬಹುದು ಎಂಬ ಮಾತಿದೆ. ಮುಖ್ಯಮಂತ್ರಿ ವಿದೇಶ ಪ್ರವಾಸದ ಬಳಿಕವಷ್ಟೇ ಚಿತ್ರಣ ಸ್ಪಷ್ಟ ರೂಪ ಪಡೆದುಕೊಳ್ಳಲಿದೆ.

ಜಿಂದಾಲ್ ಮನವೊಲಿಕೆ!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುರುವ ಆನಂದ್ ಸಿಂಗ್ ಮನವೊಲಿಸುವುದಕ್ಕಾಗಿ ಸರ್ಕಾರದ ಪ್ರತಿನಿಧಿಗಳು ಜಿಂದಾಲ್ ಜತೆ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. 3,667 ಎಕರೆ ಭೂಮಿ ಪರಭಾರೆ ಮಾಡುವ ಸರ್ಕಾರದ ತೀರ್ವನಕ್ಕೆ ಆನಂದ್ ಸಿಂಗ್ ಆಕ್ಷೇಪಿಸಿದ್ದರು. ಇದೇ ವೇಳೆ ಗೌಪ್ಯವಾಗಿ ಉಳಿದಿರುವ ಆನಂದ್ ಸಿಂಗ್ ಬೇಡಿಕೆ ಈಡೇರಿಸುವ ದೃಷ್ಟಿಯಿಂದ ಜಿಂದಾಲ್ ಜತೆಗೆ ಮಾತುಕತೆ ಕುದುರಿಸಲು ಮೈತ್ರಿ ಸರ್ಕಾರದ ಪ್ರಮುಖ ಸಚಿವರೊಬ್ಬರು ತಂತ್ರ ರೂಪಿಸಿದ್ದಾರೆನ್ನಲಾಗಿದೆ.

ಶಾಸಕರೊಂದಿಗೆ ಸಿಎಂ-ಡಿಸಿಎಂ ಚರ್ಚೆ

ಉಭಯ ಆಡಳಿತ ಪಕ್ಷಗಳ ಶಾಸಕರಲ್ಲಿ ಇರುವ ಗೊಂದಲ, ಮನಸ್ತಾಪ ನಿವಾರಿಸುವ ನಿಟ್ಟಿನಲ್ಲಿ ಕೊನೆಗೂ ಸಿಎಂ ಎಚ್.ಡಿ.ಕುಮಾರಸ್ವಾಮಿ ಶಾಸಕರ ಸಭೆ ನಡೆಸಲು ತೀರ್ವನಿಸಿದ್ದಾರೆ. ವಿದೇಶದಿಂದ ಬಂದ ಬಳಿಕ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರೊಟ್ಟಿಗೆ ಜು.9 ಮತ್ತು 10ರಂದು ಜಿಲ್ಲಾವಾರು ಶಾಸಕರ ಸಭೆ ನಡೆಸಿ ಸಮಸ್ಯೆ ಆಲಿಸಿ ಪರಿಹಾರ ನೀಡಲು ನಿರ್ಧರಿಸಿದ್ದಾರೆ. ಸರ್ಕಾರ ಸುಸೂತ್ರವಾಗಿ ನಡೆಸಲು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ. ಕಾಂಗ್ರೆಸ್ ಮುಖಂಡರು ಬಹಳಷ್ಟು ದಿನಗಳಿಂದ ಈ ಬಗ್ಗೆ ಸಿಎಂಗೆ ಒತ್ತಾಯ ಮಾಡುತ್ತಿದ್ದರು. ಕೊನೆಗೂ ಅಧಿವೇಶನಕ್ಕೆ ಮುನ್ನ ಸಭೆ ನಡೆಸಲಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಬುಧವಾರ ಮಾಧ್ಯಮದವರಿಗೆ ಈ ವಿಷಯವನ್ನು ಖಾತ್ರಿ ಪಡಿಸಿದ್ದು, ಅಧಿವೇಶನ ಆರಂಭಗೊಳ್ಳುವುದರೊಳಗೆ ಎಲ್ಲವೂ ಸುಗಮಗೊಳ್ಳಲಿದೆ ಎಂದರು. ಆನಂದ್ ಸಿಂಗ್ ವೈಯಕ್ತಿಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಿಎಂ ಸ್ಪಂದಿಸಿದ್ದಾರೆ ಎಂದ ಡಿಕೆಶಿ, ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಿದ್ದಾರೆಯೇ? ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಯಾರ ಮೇಲೆ ಪ್ರೀತಿ ಹೆಚ್ಚಿರುತ್ತೋ ಅವರನ್ನು ನೆನಪಿಸಿಕೊಳ್ಳುವುದು ಸಹಜ. ಹೀಗಾಗಿ ನನ್ನ ಬಗ್ಗೆ ಮಾತನಾಡುತ್ತಿರುತ್ತಾರೆಂದು ಪ್ರಶ್ನೆಗೆಯೊಂದಕ್ಕೆ ಉತ್ತರಿಸಿದರು.

ರಮೇಶ್ ರಾಜೀನಾಮೆ ಸಲ್ಲಿಸಿಲ್ಲ , ಸಿಂಗ್ ಮನವೊಲಿಕೆ

ಮೈಸೂರು: ರಮೇಶ್ ಜಾರಕಿಹೊಳಿ ಸ್ಪೀಕರ್​ಗೆ ರಾಜೀನಾಮೆ ಸಲ್ಲಿಸಿಲ್ಲ. ಆನಂದ್ ಸಿಂಗ್ ಜಿಂದಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದು, ಅವರ ಮನವೊಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲವೆಂದು ಸ್ಪೀಕರ್ ರಮೇಶ್​ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ನೀಡಿದ್ದಾರೆ ಎನ್ನುವುದು ಊಹಾಪೋಹ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ನಾಯಕರು ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ಮಾಹಿತಿ ಇಲ್ಲದಿರಬಹುದು. ಅಮಿತ್ ಷಾ ಅವರೇ ಆಪರೇಷನ್ ಕಮಲ ಮಾಡುತ್ತಿದ್ದು, ಇದರಲ್ಲಿ ಪ್ರಧಾನಿ ಮೋದಿ ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ನಾವು ಯಾವುದೇ ರಿವರ್ಸ್ ಆಪರೇಷನ್​ಗೆ ಕೈ ಹಾಕುವುದಿಲ್ಲ. ಆ ಬಗ್ಗೆ ನಮಗೆ ಆಸಕ್ತಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ಕಮಲ, ಹಸ್ತ ಸೇರಿ ಆಪರೇಷನ್ ಮಾಡುವುದು ತಪ್ಪು ಎಂದರು.

ವಿಧಾನಸಭೆಯನ್ನು ಅಮಾನತಿನಲ್ಲಿಡಲು ಬಿಜೆಪಿ ಯತ್ನಿಸುತ್ತಿದೆ ಎಂಬ ಆರೋಪ ಸುಳ್ಳು. ಈ ಸರ್ಕಾರ ಒಳ ಜಗಳದಿಂದಲೇ ಪತನಗೊಳ್ಳಲಿದೆ. ಸರ್ಕಾರ ಪತನಗೊಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುವುದಿಲ್ಲ. ಮೈತ್ರಿ ಸರ್ಕಾರ ಪತನಗೊಂಡರೆ 105 ಶಾಸಕರ ಬಲ ಇರುವ ಬಿಜೆಪಿ ಸರ್ಕಾರ ರಚಿಸಲಿದೆ.

| ಜಗದೀಶ ಶೆಟ್ಟರ್ ಮಾಜಿ ಸಿಎಂ

ರಾಜ್ಯಪಾಲರಿಗಲ್ಲ, ರಾಷ್ಟ್ರಪತಿಗೂ ನೀಡಲಿ

ಶಾಸಕರು ರಾಜ್ಯಪಾಲರಿಗೋ, ಇನ್ಯಾರಿಗೋ ರಾಜೀನಾಮೆ ಕೊಟ್ಟರೆ ಆಗುವುದಿಲ್ಲ. ಬೇಕಿದ್ದರೆ ರಾಷ್ಟ್ರಪತಿಗೂ ರಾಜೀನಾಮೆ ಕೊಟ್ಟು ಕೊಳ್ಳಲಿ ಎಂದು ಸ್ಪೀಕರ್ ರಮೇಶ್​ಕುಮಾರ್, ಇಬ್ಬರು ಅತೃಪ್ತ ಶಾಸಕರ ನಡೆಗೆ ಸಿಡಿಮಿಡಿಗೊಂಡರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾಯಿತ ಪ್ರತಿನಿಧಿಯನ್ನು ತಿರಸ್ಕರಿಸುವ ಅಧಿಕಾರ ಮತದಾರರಿಗಿಲ್ಲ. ಜನಪ್ರತಿನಿಧಿಗಳು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಾರೆ ಎಂಬ ಆಶಯ ಸಂವಿಧಾನ ರಚಿಸಿದವರಿಗಿತ್ತು. ಆದರೆ ಈಗ ಪರಿಸ್ಥಿತಿ ಭಿನ್ನವಾಗಿದೆ. ಹೀಗಾಗಿ ರಾಜೀನಾಮೆ ಕೊಟ್ಟಿರುವ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸುವ ಸಂದರ್ಭ ಒದಗಿಬಂದಿದೆ. ಆಕ್ಷೇಪಣೆ ಸಲ್ಲಿಸುವಂತೆ ನಾನಾಗಿ ಕೇಳುವುದಿಲ್ಲ ಎಂದರು.

ಬಂಡಾಯ ಶಮನಕ್ಕೆ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಇಷ್ಟಕ್ಕೂ ಸಂಪುಟದಲ್ಲಿ ಯಾರು ಇರಬೇಕು? ಇರಬಾರದು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ. ಸರ್ಕಾರ ಸುಭದ್ರವಾಗಿದೆ. ಇಲ್ಲದ ಊಹಾಪೋಹಗಳಿಗೆ ಕಿವಿಗೊಡಬೇಡಿ.

| ಆರ್.ವಿ.ದೇಶಪಾಂಡೆ ಕಂದಾಯ ಸಚಿವ

ಸರ್ಕಾರಕ್ಕೆ ಸಮಸ್ಯೆ ಇಲ್ಲ. ಸರ್ಕಾರ ಬೀಳಲಿದೆ ಎನ್ನುವ ನಿಮ್ಮ (ಮಾಧ್ಯಮ) ನಿರೀಕ್ಷೆ ಹುಸಿಯಾಗಲಿದೆ.

| ಎಚ್.ಡಿ.ದೇವೇಗೌಡ ಜೆಡಿಎಸ್ ವರಿಷ್ಠ

ರಮೇಶ್ ನಡೆ ಎಂಟನೇ ಅದ್ಭುತ

ರಾಜೀನಾಮೆ ನೀಡುವಂತೆ ರಮೇಶ್ ಜಾರಕಿಹೊಳಿಗೆ ಬಿಜೆಪಿ ಒತ್ತಡ ಹೇರಿಲ್ಲ. ಅವರ ಸಮಸ್ಯೆ ಹಿಂದೆ ಅವರೇ ಹೋಗುತ್ತಿದ್ದಾರೆ. ಅವರ ನಡೆ ಎಂಟನೇ ಅದ್ಭುತ ಎಂದು ಸಚಿವ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ರಮೇಶ್ ರಾಜೀನಾಮೆಗೆ ಅವರ ಅಳಿಯಂದಿಯರೇ ನೇರ ಕಾರಣ ಎಂದು ಹಲವಾರು ಬಾರಿ ಹೇಳಿದ್ದೇನೆ. ರಾಜೀನಾಮೆ ಕೊಟ್ಟ ನಂತರವೇ ಚುನಾವಣೆ ವಿಷಯ. ಆ ಸ್ಥಾನಕ್ಕೆ ಹೈಕಮಾಂಡ್ ಯಾರನ್ನು ಸೂಚಿಸುತ್ತಾರೋ ಅವರನ್ನೇ ನಿಲ್ಲಿಸುತ್ತೇವೆ ಎಂದರು.

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...