18 C
Bangalore
Friday, December 6, 2019

ದೋಸ್ತಿ ಸರ್ಕಾರಕ್ಕೆ ನಿರ್ಣಾಯಕ ಕಂಟಕ: ಆನಂದ ಕಸಿದ ಸಿಂಗ್, ರಮೇಶ್ ಹುಳಿ, ಇಬ್ಬರು ಶಾಸಕರ ರಾಜೀನಾಮೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದ ದಿನದಿಂದ ಕಾಡುತ್ತಿರುವ ರಾಜಕೀಯ ಅಸ್ಥಿರತೆ ಇದೀಗ ನಿರ್ಣಾಯಕ ಹಂತ ತಲುಪಿದೆ. ಮಹತ್ವದ ಬೆಳವಣಿಗೆಯಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಸೋಮವಾರ ಸ್ಪೀಕರ್​ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇದು ಕ್ರಮಬದ್ಧವಾಗಿ ಇರದಿದ್ದರೂ ಇಬ್ಬರು ಪ್ರಭಾವಿ ಶಾಸಕರ ನಡೆಯಿಂದ ಮೈತ್ರಿ ಸರ್ಕಾರಕ್ಕೆ ಆತಂಕ ಎದುರಾಗಿದೆ.

ಈ ಬೆನ್ನಲ್ಲೇ, ಇನ್ನಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ. ಆದರೆ, ಎಷ್ಟು ಮಂದಿ ಎಂಬುದರ ಬಗ್ಗೆ ಸ್ಪಷ್ಟತೆ ಮೂಡಿಲ್ಲ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಮೆರಿಕ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಸರ್ಕಾರದಲ್ಲಿ ಕಂಪನ ಆರಂಭವಾಗಿರುವುದು ಕುತೂಹಲ ಮೂಡಿಸಿದೆ.

ಸೋಮವಾರ ಮಧ್ಯಾಹ್ನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ನಾಯಕರ ಸಭೆ ನಡೆದಿದ್ದು, ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಪಕ್ಷದ ಶಾಸಕರಿಗೆ ಕರೆ ಮಾಡಿ ಮಾತನಾಡುವ ಪ್ರಯತ್ನವನ್ನೂ ನಾಯಕರು ನಡೆಸಿದ್ದಾರೆ. ಆದರೆ ಕೆಲ ಶಾಸಕರು ಸಂಪರ್ಕಕ್ಕೆ ಸಿಕ್ಕಿಲ್ಲ ಎನ್ನಲಾಗಿದೆ. ಇದು ದೋಸ್ತಿ ನಾಯಕರನ್ನು ಕಂಗಾಲಾಗಿಸಿದೆ.

ಅಮೆರಿಕದಲ್ಲಿ ಸಿಎಂ: ಅಮೆರಿಕ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕರ ನಡೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆದರೆ ಅವರು ಯಾವೊಬ್ಬ ಅತೃಪ್ತ ಶಾಸಕರ ಜತೆಗೂ ನೇರವಾಗಿ ಮಾತನಾಡಿಲ್ಲ ಎನ್ನಲಾಗಿದೆ.

ನಂಬರ್ ಗೇಮ್

224 ಸದಸ್ಯ ಬಲದ ವಿಧಾನಸಭೆಯಲ್ಲಿ 105 ಶಾಸಕರನ್ನು ಹೊಂದಿದ ಬಿಜೆಪಿ ಅತಿದೊಡ್ಡ ಪಕ್ಷವಾಗಿದೆ. ರಾಣೆಬೆನ್ನೂರು ಶಾಸಕ ಶಂಕರ್ ಕೆಪಿಜೆಪಿ ವಿಲೀನಗೊಳಿಸಿದ ಬಳಿಕ, ಒಬ್ಬ ಪಕ್ಷೇತರ ಶಾಸಕ ಸೇರಿ ಕಾಂಗ್ರೆಸ್ ಬಲ 81ಕ್ಕೇರಿದೆ. ಜೆಡಿಎಸ್ 37 ಸದಸ್ಯ ಬಲ ಹೊಂದಿದೆ. ಬಿಎಸ್ಪಿಯ ಒಬ್ಬ ಶಾಸಕರಿದ್ದಾರೆ. ರಮೇಶ್ ಮತ್ತು ಆನಂದ್ ಸಿಂಗ್ ರಾಜೀನಾಮೆ ಅಂಗೀಕಾರವಾದರೆ ಕಾಂಗ್ರೆಸ್ ಬಲ 79ಕ್ಕೆ ಕುಸಿಯಲಿದೆ. ಜೆಡಿಎಸ್​ನ 37 ಶಾಸಕರನ್ನು ಸೇರಿದರೆ ಸರ್ಕಾರದ ಬಲ ಸ್ಪೀಕರ್ ಸೇರಿ 117 ಕ್ಕೆ ಇಳಿಯಲಿದೆ. ಒಂದು ವೇಳೆ ಬಿಜೆಪಿ ಬಹುಮತ ಸಾಬೀತು ಪಡಿಸಿ ಸರ್ಕಾರ ರಚಿಸಬೇಕೆಂದರೆ ಕಾಂಗ್ರೆಸ್-ಜೆಡಿಎಸ್​ನ ಒಟ್ಟು ಬಲ 104ಕ್ಕೆ ಇಳಿಯಬೇಕು. ಅಂದರೆ, ಇನ್ನೂ 13 ಶಾಸಕರು ರಾಜೀನಾಮೆ ಕೊಡಬೇಕಾಗುತ್ತದೆ. ಅಷ್ಟೂ ಜನರ ರಾಜೀನಾಮೆ ಅಂಗೀಕಾರವಾದರೆ ನಂತರ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 8 ಸ್ಥಾನ ಗೆಲ್ಲಬೇಕಾಗುತ್ತದೆ.

ಏನೇನಾಯ್ತು?

1. ಬೆಳಗ್ಗೆ 7.15ಕ್ಕೆ ಆನಂದ್ ಸಿಂಗ್ ರಾಜೀನಾಮೆ ಪತ್ರ ಆಪ್ತ ಸಹಾಯಕನ ಮೂಲಕ ಸ್ಪೀಕರ್​ಗೆ ರವಾನಿಸಿದರು.

2. ಪತ್ರ ಕಚೇರಿ ತಲುಪಿದ್ದು, ಪರಿಶೀಲಿಸುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಪ್ರಕಟಣೆ

3. 12.30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿದ ಆನಂದ್ ಸಿಂಗ್

4. 1.20ಕ್ಕೆ ರಾಜೀನಾಮೆಯನ್ನು ಖಚಿತಪಡಿಸಿದ ವಿಜಯನಗರ ಶಾಸಕ

5. ಮಧ್ಯಾಹ್ನ 3ಕ್ಕೆ ಕಾಂಗ್ರೆಸ್ ನಾಯಕರಿಂದ ಸಭೆ, ಇತರ ಶಾಸಕರ ಮನವೊಲಿಕೆ ಕಸರತ್ತು

6. 3.30ಕ್ಕೆ ರಮೇಶ್ ಜಾರಕಿಹೊಳಿಯಿಂದ ಫ್ಯಾಕ್ಸ್ ಮೂಲಕ ಸ್ಪೀಕರ್​ಗೆ ರಾಜೀನಾಮೆ

7. 4 ಗಂಟೆಗೆ ನ್ಯೂಜೆರ್ಸಿಯಿಂದಲೇ ಸರ್ಕಾರ ಉಳಿಸಿಕೊಳ್ಳಲು ತಂತ್ರ ಆರಂಭಿಸಿದ ಸಿಎಂ.

ಅತೃಪ್ತರ ನಡೆಯೇನು?

ನಾವು ಸರ್ಕಾರ ಉರುಳಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಆನಂದ್ ಸಿಂಗ್ ಹೇಳುತ್ತಿದ್ದರೂ, ಒಳಗುಟ್ಟು ಬೇರೆಯದೇ ಇದೆ. ಮೈತ್ರಿ ಸರ್ಕಾರ ಉರುಳಿಸಲು ಹಂತಹಂತವಾಗಿ ಶಾಸಕರು ರಾಜೀನಾಮೆ ಕೊಡುತ್ತಾರೆಂಬ ಮಾತಿದೆ. ರಾಜೀನಾಮೆ ಕೊಡಬಹುದಾದ ಶಾಸಕರ ಪಟ್ಟಿಯಲ್ಲಿ ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಯವರ ಸಂಖ್ಯೆ ಹೆಚ್ಚಿದೆ. ಉಳಿದಂತೆ ಮೈಸೂರು ಜಿಲ್ಲೆಯ ಇಬ್ಬರು ಶಾಸಕರಿದ್ದಾರೆ ಎನ್ನಲಾಗಿದೆ. ಈ ಪಟ್ಟಿಯಲ್ಲಿ ಜೆಡಿಎಸ್​ನ ನಾಲ್ಕು ಹೆಸರು ಇರುವುದು ಅಚ್ಚರಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ಸುತ್ತ ಗಿರಕಿ

ರಾಜಕೀಯ ಬೆಳವಣಿಗೆ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದಾರೆಂಬ ಬಿಜೆಪಿ ನಾಯಕರ ಕುಟುಕು ಮಾತಿನ ನಡುವೆಯೂ ಕೈ ನಾಯಕರೆಲ್ಲ ಸೋಮವಾರ ಸಿದ್ದರಾಮಯ್ಯರನ್ನು ಭೇಟಿಯಾದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್ ಮುಂದಿನ ಹೆಜ್ಜೆಯ ಬಗ್ಗೆ ಚರ್ಚೆ ನಡೆಸಿದರು. ಬಿಜೆಪಿ ಕಾರ್ಯಾಚರಣೆ ಯಾವ ರೀತಿ ಇರಬಹುದು? ಕಾಂಗ್ರೆಸ್ ಮತ್ತು ಜೆಡಿಎಸ್​ನ ಯಾವೆಲ್ಲ ಶಾಸಕರು ರಾಜೀನಾಮೆ ಸನ್ನಿಗೆ ಒಳಗಾಗಬಹುದು? ಅವರನ್ನು ಯಾವ ರೀತಿ ಮನವೊಲಿಸಬಹುದು? ಯಾರನ್ನು ಮನವೊಲಿಸುವ ಜವಾಬ್ದಾರಿ ಯಾರದ್ದು? ಎಂಬಿತ್ಯಾದಿಯಾಗಿ ಚರ್ಚೆ ನಡೆಸಿದರು. ಕೆಲವು ಶಾಸಕರಿಗೆ ಕರೆ ಮಾಡಿ, ಆತುರದ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿದರು.

ಬಿಜೆಪಿ ವಿಕೆಟ್ ಬೀಳಿಸುವ ಸಾಮರ್ಥ್ಯ ನಮಗೂ ಇದೆ. ಅವರ ಪ್ರಯತ್ನ ಸ್ಪಷ್ಟವಾಗಿ ಗೊತ್ತಿದೆ. ಹೇಗೆ ಉತ್ತರ ಕೊಡಬೇಕೋ ಹಾಗೆ ಉತ್ತರ ಕೊಡುತ್ತೇವೆ.

| ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ

ರಾಜ್ಯದ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದ್ದೇನೆ. ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು.

| ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ

ನಾವಾಗಿ ಸರ್ಕಾರ ಬೀಳಿಸಲು ಹೋಗಲ್ಲ. ಸರ್ಕಾರ ಬಿದ್ದು ಹೋದರೆ ನಾವು ಸುಮ್ಮನೆ ಕೂರಲ್ಲ. ನಾವೇನು ಸನ್ಯಾಸಿಗಳಲ್ಲ.

| ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ

ಮೂರು ಪಕ್ಷಗಳ ಧೋರಣೆ ಏನು?

ಕಾಂಗ್ರೆಸ್

ಮೈತ್ರಿ ಸರ್ಕಾರ ಇದ್ದಷ್ಟು ದಿನ ಇರಲಿ ಎಂಬ ಭಾವನೆ ಕಾಂಗ್ರೆಸ್​ನಲ್ಲಿದೆ. ಹೀಗಾಗಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ನಡೆಸಿದೆ. ಇದೇ ವೇಳೆ ಸರ್ಕಾರ ಮುಂದುವರಿಯಲೇಬೇಕೆಂಬ ಒಮ್ಮತಾಭಿಪ್ರಾಯ ಪಕ್ಷದಲ್ಲಿ ಇಲ್ಲ. ಸರ್ಕಾರದಲ್ಲಿ ಇದ್ದಷ್ಟು ದಿನ ಪಕ್ಷಕ್ಕೆ ಆಪತ್ತು ಎಂಬ ಕಠೋರ ವಾಸ್ತವದ ಅರಿವು ಪಕ್ಷದ ನಾಯಕರಿಗೂ ಇದೆ.

ಜೆಡಿಎಸ್

ಹತ್ತು ವರ್ಷಗಳ ಬಳಿಕ ಸಿಕ್ಕ ಅವಕಾಶವನ್ನು ಕಳೆದುಕೊಳ್ಳಲೇಬಾರದು ಎಂಬ ಮನಸ್ಥಿತಿ ಈ ಪಕ್ಷದ್ದು. ಕಾಂಗ್ರೆಸ್ ನಾಯಕರನ್ನು ವಿಶ್ವಾಸದಲ್ಲಿ ತೆಗೆದುಕೊಂಡು ಪರಿಸ್ಥಿತಿ ಸುಧಾರಿಸುವ ಆಶಾಭಾವನೆ ನಾಯಕರದ್ದಾಗಿದೆ. ಒಂದು ವೇಳೆ ಬಿಜೆಪಿ ಆಪರೇಷನ್ ನಡೆಸಿದರೆ, ರಿವರ್ಸ್ ಆಪರೇಷನ್ ನಡೆಸುವ ಮಟ್ಟಿಗೆ ಆಲೋಚನೆ ನಡೆಸಿದೆ.

ಬಿಜೆಪಿ

ಆಪರೇಷನ್ ಕಳಂಕವನ್ನು ಮೆತ್ತಿಕೊಳ್ಳಲು ಬಿಜೆಪಿ ನಾಯಕರು ಸಿದ್ಧರಿಲ್ಲ. ಹೀಗಾಗಿ ಸರ್ಕಾರ ತನ್ನಿಂತಾನೇ ಬಿದ್ದುಹೋಗಲಿ, ನಂತರ ಸರ್ಕಾರ ರಚಿಸೋಣ ಎಂದು ಪಕ್ಷದ ನಾಯಕರು ಮೇಲ್ನೋಟಕ್ಕೆ ಹೇಳುತ್ತಿದ್ದಾರೆ. ಆದರೆ, ನಂಬರ್ ಗೇಮ್ ಲೆಕ್ಕಾಚಾರದಲ್ಲಿ ಬಹುಮತದ ಗೆರೆ ಮುಟ್ಟುವ ತಂತ್ರ ರೂಪಿಸುವುದನ್ನು ನಿಲ್ಲಿಸಿದಂತೆ ಕಾಣಿಸುತ್ತಿಲ್ಲ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...