Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಸರ್ಕಾರದಲ್ಲಿ ಸಿದ್ದು ನಿರ್ಲಕ್ಷಿಸಿದರೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ: ಕಾಗಿನೆಲೆ ಶ್ರೀ

Thursday, 28.06.2018, 4:45 PM       No Comments

ದಾವಣಗೆರೆ: ಸರ್ಕಾರದಲ್ಲಿ ಸಿದ್ದರಾಮಯ್ಯ ಅವರನ್ನು ನಿರ್ಲಕ್ಷ್ಯ ಮಾಡಬಾರದು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಾಗಿನೆಲೆ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರಂಜನಾನಂದಪುರಿ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಹರಿಹರ ತಾಲೂಕಿನ ಬೆಳ್ಳೂಡಿ ಕನಕ ಮಠದಲ್ಲಿ ಗುರುವಾರ ಮಾತನಾಡಿ, ಸಿದ್ದರಾಮಯ್ಯರನ್ನು ನಿರ್ಲಕ್ಷ್ಯ ಮಾಡಿದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 15 ಸೀಟೂ ಬರುವುದಿಲ್ಲ. ಇದನ್ನು ಹೈಕಮಾಂಡ್ ಮತ್ತು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅರ್ಥ ಮಾಡಿಕೊಳ್ಳಬೇಕು. ಇದು ಹೀಗೇ ಮುಂದುವರಿದರೆ ನಾವು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದಲ್ಲಿ ಕುರುಬ ಸಮುದಾಯದವರಿಗೆ ಸೂಕ್ತ ಸಚಿವ ಸ್ಥಾನ ಸಿಕ್ಕಿಲ್ಲ. ಸಿದ್ದರಾಮಯ್ಯ ಸುಮ್ಮನೆ ಇದ್ದಾರೆ ಎಂದರೆ ಬೇರೆ ಅರ್ಥ ಇದೆ. ಮುಂದಿನ ಹೆಜ್ಜೆ ಇಡಲು ಟಗರು ರೆಡಿಯಾಗುತ್ತಿದೆ ಎಂದು ಅರ್ಥ. ಕುರುಬ ಸಮುದಾಯದ ಅಧಿಕಾರಿಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ರಚನೆಯಾದ ನಂತರ ಕುರುಬ ಸಮುದಾಯದ ಅಧಿಕಾರಿಗಳನ್ನು ಗುರಿಯಾಗಿಟ್ಟುಕೊಂಡು ವರ್ಗಾವಣೆ ಮಾಡಲಾಗುತ್ತಿದೆ. ಒಂದು ಜಾತಿ ಜನಾಂಗದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕೈಗೊಂಡಿರುವ ದ್ವೇಷದ ಪ್ರಕ್ರಿಯೆ ಖಂಡನೀಯ. ಈ ಕಾರ್ಯವನ್ನು ಕೈ ಬಿಟ್ಟು ಸಾಮರಸ್ಯದಿಂದ ಆಡಳಿತ ನಡೆಸಿದರೆ ಸರ್ಕಾರಕ್ಕೆ ಒಳ್ಳೆಯದು. ಇಲ್ಲವಾದರೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

Back To Top