ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ ಮಾಜಿ ಪ್ರಧಾನಿ ಎಚ್​ಡಿಡಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಬೆಂಗಳೂರು: ಆಪರೇಷನ್​ ಕಮಲದ ಮೂಲಕ ಕಾಂಗ್ರೆಸ್​-ಜೆಡಿಎಸ್​ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಂತಹ ಸಂವಿಧಾನ ವಿರೋಧಿ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂದು ಆರೋಪಿಸಿ ದೋಸ್ತಿ ಸರ್ಕಾರದ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಪ್ರಜಾಪ್ರಭುತ್ವದಲ್ಲಿ ಬಿಜೆಪಿಯವರ ವರ್ತನೆ ಸರಿಯಲ್ಲ ಎಂದು ಟೀಕಿಸಿದರು.

ತುರ್ತು ಪರಿಸ್ಥಿಯಲ್ಲಿ ಸರ್ಕಾರ ಉರುಳಿಸುವ ವ್ಯವಸ್ಥೆ ಸೃಷ್ಟಿ
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಮುಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಂಟಿಯಾಗಿ ನಡೆಸುತ್ತಿರುವ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಇದೊಂದು ಸಾಂಕೇತಿಕ ಪ್ರತಿಭಟನೆಯಾಗಿದೆ. ಈ ಸಂದರ್ಭದಲ್ಲಿ ಕಳೆದೊಂದು ವರ್ಷದಿಂದ ನಡೆಯುತ್ತಿರುವ ವಿದ್ಯಾಮಾನವನ್ನು ಮಾಧ್ಯಮದಲ್ಲಿ ನೋಡುತ್ತಿದ್ದೇವೆ. ತುರ್ತು ಪರಿಸ್ಥಿಯಲ್ಲಿ ಸರ್ಕಾರ ಉರುಳಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್​ ಷಾ ಅವರ ನಡೆಯನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಪ್ರಜಾಪ್ರಭುತ್ವದಲ್ಲಿ ಈ ವರ್ತನೆ ಸರಿಯಲ್ಲ
ಸಚಿವ ಡಿ.ಕೆ.ಶಿವಕುಮಾರ್ ಇವತ್ತು ಮುಂಬೈ ಹೋಟೆಲ್​ಗೆ ಹೋದಾಗ ಮಾಲೀಕರು ಧಮ್ಕಿ ಹಾಕಿದ್ದಾರೆ. ಬುಕ್ ಮಾಡಿದ ಕೋಣೆಯನ್ನು ರದ್ದುಪಡಿಸಿದ್ದಾರೆ. ಅಲ್ಲದೆ, 144 ಸೆಕ್ಷನ್ ಜಾರಿ ಮಾಡಿದ್ದಾರೆ. ಕರ್ನಾಟಕ ಅಷ್ಟೇಯಲ್ಲ ಪಶ್ಚಿಮ ಬಂಗಾಳದಲ್ಲೂ ಇದೇ ಬೆಳವಣಿಗೆ ಇದೆ. ಪ್ರಜಾಪ್ರಭುತ್ವದಲ್ಲಿ ಈ ವರ್ತನೆ ಸರಿಯಲ್ಲ ಎಂದು ಟೀಕಿಸಿದರು.

ದೇಶದೆಲ್ಲೆಡೆ ಬಿಜೆಪಿ ವಿರುದ್ಧ ಹೋರಟ ಮಾಡಬೇಕಿದೆ
ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಒಟ್ಟಿಗೆ ಸೇರಿ ಹೋರಾಟ ಮಾಡಬೇಕಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ಎರಡು ಪಕ್ಷದವರು ಸೇರಿ ಅದರ ವಿರುದ್ಧ ಹೋರಾಟ ಮಾಡಲು ಸೇರಿದ್ದೇವೆ. ಬರಿ ಕರ್ನಾಟಕದಲ್ಲಷ್ಟೇ ಅಲ್ಲಾ ದೇಶದೆಲ್ಲೆಡೆ ಬಿಜೆಪಿ ವಿರುದ್ಧ ಹೋರಟ ಮಾಡಬೇಕಿದೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ 38% ಮತ ಹಾಕಿದ್ದಾರೆ. ಬಿಜೆಪಿಗೆ ಜನಾದೇಶ ಇಲ್ಲದೆ ಹೋದರು ಸಮ್ಮಿಶ್ರ ಸರ್ಕಾರವನ್ನು ಬೀಳಿಸೋಕೆ ಯತ್ನಿಸುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಹಣ ಹಾಗೂ ಅಧಿಕಾರದ ಜತೆಗೆ ಬೇರೆ ಆಸೆಗಳನ್ನು ತೋರಿಸಿ ಕೊಂಡುಕೊಳ್ಳಲು ಯತ್ನಿಸಿದ್ದಾರೆ. ಕಳೆದೊಂದು ವರ್ಷದಿಂದಲೂ ಬಿಜೆಪಿಯವರು ಈ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಇದುವರೆಗೂ 5 ಬಾರಿ ಪ್ರಯತ್ನಪಟ್ಟು ವಿಫಲರಾದರು. ಇದೀಗ 6ನೇ ಬಾರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಸರ್ವಾಧಿಕಾರಿ ಆಡಳಿತಕ್ಕೆ ಮೋದಿ ಮುನ್ನುಡಿ ಬರೆಯುತ್ತಿದ್ದಾರೆ
ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಪ್ರಕಾರ ಕಾಂಗ್ರೆಸ್-ಜೆಡಿಎಸ್ 118 ಸ್ಥಾನ ಗೆದ್ದಿದ್ದೇವೆ. ಪಕ್ಷೇತರು ಸೇರಿ 120 ಸಂಖ್ಯಾಬಲವಿತ್ತು. ಆದರೆ, ಸರ್ಕಾರ ಬೀಳಿಸಲೇಬೇಕೆಂದು ಒಂದು ವರ್ಷದಿಂದ ಬಿಜೆಪಿ ಅವರು ಪ್ರಯತ್ನ ಮಾಡುತ್ತಿದ್ದಾರೆ. ಗೋವಾ, ಅರುಣಾಚಲ ಪ್ರದೇಶ ಸೇರಿ 14 ರಾಜ್ಯದಲ್ಲಿ ಸರ್ಕಾರ ಉರುಳಿಸುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಆರೋಪಿಸಿದರು.

ಎಲ್ಲೆಲ್ಲಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷದ ಸರ್ಕಾರವಿದೆ ಅಲ್ಲೆಲ್ಲಾ ಬಿಜೆಪಿಯವರು ಖ್ಯಾತೆ ತೆಗೆದಿದ್ದಾರೆ. ಈಗ ಕರ್ನಾಟಕದಲ್ಲೂ ಇದೇ ರೀತಿ ವರ್ತಿಸುತ್ತಿದ್ದಾರೆ. ನಮ್ಮ ಹೋರಾಟ ಜೋರಾಗಿ ಇರಬೇಕು ನಿರಾಸೆಯಿಂದ ಕೂರಬಾರದು. ನಾವು ನಿರಾಶೆಯಾದರೆ ಬಿಜೆಪಿಯವರು ಗೆದ್ದಂತಾಗುತ್ತದೆ. ಹಾಗಾಗಿ ಎಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವ ಉಳಿಸುವ ಸಲುವಾಗಿ ಹೋರಟ ಮಾಡಬೇಕಿದೆ. ಮಾಡೋಣ, ಪ್ರಜಾಪ್ರಭುತ್ವ ಇಲ್ಲವೆಂದರೆ, ಸರ್ವಾಧಿಕಾರಿ ಆಡಳಿತ ಬರುತ್ತದೆ. ಅದಕ್ಕೆ ಮೋದಿ ಮುನ್ನುಡಿ ಬರೆಯುತ್ತಿದ್ದಾರೆ ಎಂದು ಕಿಡಿಕಾರಿದರು. (ದಿಗ್ವಿಜಯ ನ್ಯೂಸ್​)

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...