ಇದು ದೇವರು ಕೊಟ್ಟಿರುವ ಸರ್ಕಾರ, ದೇವರ ಆಶೀರ್ವಾದ ಇರುವವರೆಗೂ ಏನು ಆಗಲ್ಲ: ಎಚ್​.ಡಿ.ರೇವಣ್ಣ

ಮೈಸೂರು: ಇದು ದೇವರು ಕೊಟ್ಟಿರುವ ಸರ್ಕಾರ. ದೇವರ ಆಶೀರ್ವಾದ ಇರುವವರೆಗೂ ಏನು ಆಗಲ್ಲ ಎಂದು ಸಚಿವ ಎಚ್​.ಡಿ.ರೇವಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಷಾಡ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಪ್ರಸ್ತುತ ರಾಜಕೀಯ ಬೆಳವಣಿಗೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವರ ಆಶೀರ್ವಾದ ಇರುವವರಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುತ್ತಾರೆ. ಚಾಮುಂಡೇಶ್ವರಿಯ ಅನುಗ್ರಹ ಕುಮಾರಸ್ವಾಮಿ ಮೇಲಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸರ್ಕಾರಕ್ಕೆ ಏನು ತೊಂದರೆ ಇಲ್ಲ. ಕುಮಾರಸ್ವಾಮಿಗೆ ಸರ್ಕಾರ ಅವಶ್ಯಕತೆ ಇಲ್ಲ. ಆದರೆ, ರಾಜ್ಯದ ಜನತೆಗೆ ಕುಮಾರಸ್ವಾಮಿಯವರು ಅವಶ್ಯಕತೆ ಇದೆ. ಇಂದು ಕೂಡ ಸರ್ಕಾರಕ್ಕೆ ಏನು ಆಗಲ್ಲ ಎಂದು ರೇವಣ್ಣ, ಸಾ.ರಾ ಮಹೇಶ್ ಬಿಜೆಪಿ ನಾಯಕರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಜತೆ ಅಧಿಕಾರ ಹಂಚಿಕೊಳ್ಳುವ ಬೆಳವಣಿಗೆ ಸದ್ಯಕ್ಕಿಲ್ಲ. ಇಂದಿನ ಅಧಿವೇಶನ ಕೂಡ ಸುಸೂತ್ರವಾಗಿ ನಡೆಯುತ್ತದೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *