16 C
Bangalore
Saturday, December 7, 2019

ರಾಜ್ಯದ ಅಭಿವೃದ್ಧಿಗಾಗಿ ಕೈ-ದಳ ಶಾಸಕರು ಬಿಜೆಪಿಗೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ವಿಜಯವಾಣಿ ಸುದ್ದಿಜಾಲ ಯಲ್ಲಾಪುರ

ಕಾಂಗ್ರೆಸ್ ಹಾಗೂ ಜೆಡಿಎಸ್​ನ ಹಲವು ಶಾಸಕರು, ಮುಖಂಡರು ಬಿಜೆಪಿಗೆ ಸೇರಲು ಉತ್ಸುಕರಾಗಿದ್ದಾರೆ. ಉಪಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಯುವುದು ದಿನೇಶ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಸುವ ಮುನ್ನ ಪಟ್ಟಣದ ವೈ.ಟಿ.ಎಸ್.ಎಸ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್, ಜೆಡಿಎಸ್ ಶಾಸಕರು ಅಧಿಕಾರದಲ್ಲಿದ್ದ ಪಕ್ಷವನ್ನು ಬಿಟ್ಟು, ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಗೆ ಬಂದಿದ್ದಾರೆ ಹೊರತು ಅಧಿಕಾರಕ್ಕಾಗಿ ಅಲ್ಲ ಎಂದರು.

ಕಾಂಗ್ರೆಸ್​ನಲ್ಲಿ ಚುನಾವಣೆಗೆ ಬೇರೆ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ತರುವ ಸ್ಥಿತಿ ಬಂದಿದೆ. ಅಲ್ಲಿನ ಒಳಜಗಳಗಳು ಬೀದಿಗೆ ಬರುತ್ತಿವೆ. ಹಿಂದೆ ಕಾಂಗ್ರೆಸ್​ನಿಂದ ವಿದ್ಯುತ್ ಕಂಬ ನಿಲ್ಲಿಸಿದರೂ ಗೆಲುವು ಖಚಿತ ಎಂಬ ಸ್ಥಿತಿ ಇತ್ತು. ಆದರೆ, ಈಗ ಹೀನ ಪರಿಸ್ಥಿತಿಗೆ ತಲುಪಿದೆ ಎಂದರೆ ಹೆಬ್ಬಾರ ವಿರುದ್ಧ ರಾಹುಲ್​ಗಾಂಧಿ ಸ್ಪರ್ಧಿಸಿದರೂ ಹೆಬ್ಬಾರ ಗೆಲುವು ಸುಲಭ ಎಂದರು.

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.

ಸಂಸದ ಅನಂತಕುಮಾರ ಹೆಗಡೆ ಮಾತನಾಡಿ, ಭಾರತಕ್ಕೆ ಕಾಂಗ್ರೆಸ್ ಒಂದು ದೊಡ್ಡ ರೋಗ. ಕಾಂಗ್ರೆಸ್ ಎಂದರೆ ಇಮ್ರಾನ್ ಖಾನ್​ಗೆ ಪ್ರೀತಿ. ಬೇಕಿದ್ದರೆ ಕಾಂಗ್ರೆಸಿನವರು ಪಾಕಿಸ್ತಾನಕ್ಕೆ ಹೋಗಲಿ ಎಂದರು.

ಅಭ್ಯರ್ಥಿ ಶಿವರಾಮ ಹೆಬ್ಬಾರ, ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಕುಮಾರ ಬಂಗಾರಪ್ಪ, ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನಿಲ ನಾಯ್ಕ, ಹರೀಶ ಕುಂಜ, ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ, ಮಾಜಿ ಶಾಸಕರಾದ ಸುನಿಲ ಹೆಗಡೆ, ವಿವೇಕಾನಂದ ವೈದ್ಯ, ರಾಜ್ಯ ವಕ್ತಾರ ಪ್ರಮೋದ ಹೆಗಡೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಹೆಗಡೆ, ಪಕ್ಷದ ಪ್ರಮುಖರಾದ ಲಿಂಗರಾಜ ಪಾಟೀಲ, ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಗಿರೀಶ ಪಟೇಲ, ವಿನೋದ ಪ್ರಭು, ದ್ಯಾಮಣ್ಣ ದೊಡ್ಮನಿ ಇತರರಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ, ರಾಮು ನಾಯ್ಕ, ವಿನೇಶ ಮಾಳಕೊಪ್ಪ ನಿರ್ವಹಿಸಿದರು. 5000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

ಕುರ್ಚಿಗಾಗಿ ಕಿತ್ತಾಟ: ವೇದಿಕೆಯಲ್ಲಿ ಮುಖಂಡರು, ಕಾರ್ಯಕರ್ತರು ಸೇರಿ 100ಕ್ಕೂ ಹೆಚ್ಚು ಜನ ಜಮಾಯಿಸಿದ್ದರು. ಮುಖಂಡರೆಲ್ಲರೂ ವೇದಿಕೆಯ ಮುಂದಿನ ಸಾಲಿನಲ್ಲೇ ಕುಳಿತುಕೊಳ್ಳುವ ಪೈಪೋಟಿಯಿಂದಾಗಿ ಮುಂದಿನ ಸಾಲು ರಶ್ ಆದ ಬಸ್​ನಂತಾಗಿತ್ತು. ಈ ನಡುವೆ ವೇದಿಕೆಗೆ ಕರೆಯದಿದ್ದರೂ ಮುಂದಿನ ಸಾಲಿನಲ್ಲೇ ಬಂದು ಕುಳಿತಿದ್ದ ತಾ.ಪಂ ಅಧ್ಯಕ್ಷೆ ಭವ್ಯಾ ಶೆಟ್ಟಿ ಅವರ ಬಳಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಹೋದಾಗ, ಅಲ್ಲೇ ಜಾಗ ಮಾಡಿಕೊಡಲು ಪ್ರಯತ್ನಿಸಿದರು. ಸಾಧ್ಯವಾಗದಿದ್ದಾಗ ಹಿಂದೆ ಹೋಗುವಂತೆ ಭವ್ಯಾ ಶೆಟ್ಟಿ ಅವರಿಗೆ ರೇಖಾ ಹೆಗಡೆ ಖಡಕ್ ಆಗಿ ಸೂಚಿಸಿದರು. ಹಿಂದೆ ಹೋಗಿ ಕೆಲ ಹೊತ್ತು ಕುಳಿತ ಭವ್ಯಾ ಶೆಟ್ಟಿ, ಬಳಿಕ ಸಮಾವೇಶದಿಂದ ನಿರ್ಗಮಿಸಿದರು. ಎರಡು ದಿನಗಳ ಹಿಂದೆ ಹೆಬ್ಬಾರ ಬೆಂಬಲಿಗರ ಸೇರ್ಪಡೆ ಕಾರ್ಯಕ್ರಮದಲ್ಲೂ ತಮ್ಮನ್ನು ವೇದಿಕೆಗೆ ಕರೆಯದ ಕಾರಣಕ್ಕೇ ಅಸಮಾಧಾನಗೊಂಡು ಭವ್ಯಾ ಶೆಟ್ಟಿ ನಿರ್ಗಮಿಸಿದ್ದರು.

ಡಮ್ಮಿ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಒಂದಷ್ಟು ಹಣ ಗಳಿಸಿದ್ದಾರೆ. ಅದನ್ನು ಖರ್ಚು ಮಾಡಲಿ ಎಂದು ಅವರಿಗೆ ಟಿಕೆಟ್ ನೀಡಿದ್ದಾರೆ.

| ಕುಮಾರ ಬಂಗಾರಪ್ಪ ಸೊರಬ ಶಾಸಕ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...