ಸಿನಿಮಾ

ನಾನು ಹೊಂದಾಣಿಕೆ ರಾಜಕೀಯ ಮಾಡಿದವನಲ್ಲ: ಗಾಲಿ ಜನಾರ್ದನ ರೆಡ್ಡಿ

ಗಂಗಾವತಿ: ಮುಂದಿನ ಚುನಾವಣೆ ವೇಳೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲಿದ್ದು, ಗಂಗಾವತಿಯಲ್ಲೇ ಕೇಂದ್ರ ಕಚೇರಿ ತೆರೆಯಲಾಗುವುದು ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ ಕೆಆರ್‌ಪಿಪಿ ಶನಿವಾರ ಆಯೋಜಿಸಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಗಂಗಾವತಿ ನನ್ನ ಕರ್ಮಭೂಮಿ

ಪಕ್ಷದ ಪ್ರಣಾಳಿಕೆಯಂತೆ ಪ್ರಸಕ್ತ ಚುನಾವಣೆ ಎದುರಿಸಲಾಗುತ್ತಿದ್ದು, ಜನಪರ ಕಾರ್ಯಕ್ರಮ ಮುಂದಿಟ್ಟುಕೊಂಡು ಮತ ಕೇಳಲಾಗುವುದು. ವಿಜಯನಗರ ಸಾಮ್ರಾಜ್ಯದ ವ್ಯಾಪ್ತಿಯಲ್ಲಿ ಬರುವ ಗಂಗಾವತಿ ನನ್ನ ಕರ್ಮಭೂಮಿ ಎಂದು ನಿರ್ಧರಿಸಿ, ಚುನಾವಣೆಗೆ ಸ್ಪರ್ಧಿಸಿದ್ದೇನೆ. ಎದುರಾಳಿಗಳ ತರಹ ನಾನು ಮಾತು ತಪ್ಪುವ ವ್ಯಕ್ತಿಯಲ್ಲ. ಕೊಟ್ಟ ಮಾತು ತಪ್ಪುವ ಪರಿಸ್ಥಿತಿ ಬಂದರೆ ನನ್ನ ಪ್ರಾಣ ಬಿಡ್ತೀನಿ ಎಂದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಾಗಿಲ್ಲ: ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಆಡಳಿತದಿಂದ ಜನ ಭ್ರಮನಿರಸನಗೊಂಡಿದ್ದು, ಅಭಿವೃದ್ಧಿ ಕಾರ್ಯಗಳಾಗಿಲ್ಲ. ಸಮಗ್ರ ಅಭಿವೃದ್ಧಿಗಾಗಿ ಕೆಆರ್‌ಪಿಪಿ ಸೇರ್ಪಡೆಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ನೆಲೆ ಇಲ್ಲದಂತೆ ಮಾಡುವೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ನೋಡಲು ಜಮಾಯಿಸಿದ ವಿದೇಶಿ ಅಧಿಕಾರಿಗಳು!

Latest Posts

ಲೈಫ್‌ಸ್ಟೈಲ್