More

    ಕೈ ತಪ್ಪಿದ ಡಿಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಜಿ.ಪರಮೇಶ್ವರ್; ಹೈಕಮಾಂಡ್ ಜತೆ ಚರ್ಚಿಸಲು ಸಧ್ಯದಲ್ಲೇ ದೆಹಲಿಗೆ ಪ್ರಯಾಣ!

    ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಎರಡನೇ ಬಾರಿಗೆ ಸಿದ್ದರಾಮಯ್ಯ ಸಿಎಂ ಪಟ್ಟಕ್ಕೇರುತ್ತಿದ್ದಾರೆ. ಪೂರ್ಣ ಬಹುಮತ ಪಡೆದುಕೊಂಡು ಸರ್ಕಾರ ರಚನೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಹೊತ್ತಿನಲ್ಲೇ, ಇದೀಗ ಕಾಂಗ್ರೆಸ್ ಮತ್ತೊಂದು ಇಕ್ಕಟ್ಟಿಗೆ ಸಿಲುಕಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಡಿಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ.. ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟ ಸೇರಲಿರುವ ಸಚಿವರ ಪಟ್ಟಿ ಇಲ್ಲಿದೆ ನೋಡಿ…

    ನನ್ನನ್ನೂ ಡಿಸಿಎಂ ಮಾಡಿ!

    ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರ ಹೆಸರು ಘೋಷಿಸಿರುವುದು ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ. ಪರಮೇಶ್ವರ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿಂದೆ ನಾನು ಡಿಸಿಎಂ ಆಗಿದ್ದವನು. ಹೀಗಾಗಿ ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು. ಡಿ. ಕೆ ಶಿವಕುಮಾರ್ ಒಬ್ಬರೇ ಸಾಕು ಅಂತ ಹೇಳೋಕೆ ಬರಲ್ಲ. ಈ ಬಾರಿ ಎಲ್ಲ ಸಮುದಾಯ ಕೈ ಹಿಡಿದಿವೆ. ಹೀಗಾಗಿ ಅಧಿಕಾರ ಕೊಡಬೇಕು ಎಂದು ಡಾ.ಜಿ ಪರಮೇಶ್ವರ್ ಆಗ್ರಹಿಸಿದ್ದಾರೆ.

    ನಾನು ಡಿಸಿಎಂ ಆಗಿದ್ದವನು!

    ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಯಾರೋ ಒಬ್ಬರು ಮಾತ್ರ ಅಧಿಕಾರದಲ್ಲಿ ಇರಬೇಕು ಎನ್ನುವುದು ಸೂಕ್ತ ಅಲ್ಲ. ಡಿಸಿಎಂ ಸ್ಥಾನವನ್ನು ಕೊಡಬೇಕಾಗುತ್ತದೆ. ಎಲ್ಲ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಸ್ಥಾನ ಕೊಡಬೇಕಾಗುತ್ತದೆ. ನಾನೂ ಕೂಡ ಡಿಸಿಎಂ ಆಗಿದ್ದವನು. ಎಲ್ಲರ ನಾಯಕತ್ವದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ದೇವೇಗೌಡರು ಮನೆಯಲ್ಲಿದ್ದು ಸಲಹೆ ನೀಡಿದರೆ ಸಾಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಎಚ್​ಡಿಕೆ

    ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ಪ್ರಯಾಣ?

    ಇದೀಗ ಡಿಸಿಎಂ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಜಿ.ಪರಮೇಶ್ವರ್ ಹೈಕಮಾಂಡ್ ಭೇಟಿಯಾಗಿ, ತನ್ನನ್ನೂ ಡಿಸಿಎಂ ಮಾಡಬೇಕೆಂದು ಪಟ್ಟು ಹಿಡಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ ತನಗೆ ಡಿಸಿಎಂ ಸ್ಥಾನವೂ ಇಲ್ಲವೆಂದು ತಮ್ಮ ಆಪ್ತರ ಬಳಿ ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಹೈಕಮಾಂಡ್ ನಾಯಕರ ಬಳಿಯೂ ಈ ವಿಚಾರವನ್ನು ಪ್ರಸ್ತಾಪಿಸಲು ತೀರ್ಮಾನಿಸಿರುವ ಜಿ.ಪರಮೇಶ್ವರ್, ಸಧ್ಯದಲ್ಲೇ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts