More

    ಎನ್​ಎಸ್​ಯುಐಗೆ ಗುಡ್​ ಬೈ ಹೇಳಿದ ರಾಹುಲ್​ ಗಾಂಧಿ ಆಪ್ತೆ! ಪಕ್ಷದಲ್ಲಿ ಬದಲಾವಣೆ ಅಗತ್ಯತೆಯಿದೆ ಎಂದ ನಾಯಕಿ

    ನವದೆಹಲಿ: ಕಾಂಗ್ರೆಸ್​ ನಾಯಕರೊಂದಿಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರದಂದು ಮಾತುಕತೆ ನಡೆಸಿರುವ ಬೆನ್ನಲ್ಲೇ ಪಕ್ಷದ ಯುವ ಘಟಕದ ಮುಖ್ಯಸ್ಥೆ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳಿಗೆ ಸಾಕಷ್ಟು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.

    ಇದನ್ನೂ ಓದಿ: ಕೃಷಿ ಕಾಯ್ದೆ ವಿಚಾರದಲ್ಲಿ ಮುನಿಸಿಕೊಂಡು ರಾಜೀನಾಮೆ ನೀಡಿದ ಮೈತ್ರಿ ನಾಯಕ!

    ಎನ್​ಎಸ್​ಯುಐನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ರುಚಿ ಗುಪ್ತಾ ರಾಜೀನಾಮೆ ನೀಡಿರುವ ನಾಯಕಿ. ಈಕೆ ರಾಹುಲ್​ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರಾಗಿದ್ದಾರೆ. ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳಿಗಾಗಿ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ ನಿರಂತರ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಹುಲ್​ ಜೀ ಮತ್ತು ಸೋನಿಯಾ ಜೀಗೆ ಧನ್ಯವಾದಗಳು ಎಂದು ರುಚಿ ಗುಪ್ತಾ ಹೇಳಿದ್ದಾರೆ.

    ಇದನ್ನೂ ಓದಿ: ಮದುವೆಯಾದ ಅಕ್ಕನ ಮೇಲೇ ಲೈಂಗಿಕ ದೌರ್ಜನ್ಯವೆಸಗಿದ ತಮ್ಮ! ಪ್ರಶ್ನಿಸಿದ್ದಕ್ಕೆ ಅಮ್ಮನ ಮೇಲೂ ಹಲ್ಲೆ!

    ಪಕ್ಷದ ಅಧ್ಯಕ್ಷರನ್ನಾಗಿ ರಾಹುಲ್​ ಗಾಂಧಿಯವರನ್ನು ಆಯ್ಕೆ ಮಾಡುವ ಬಗ್ಗೆ ಮಾತನಾಡಿರುವ ಅವರು, ‘ಪಕ್ಷಕ್ಕೆ ಸೂಕ್ತ ನಾಯಕತ್ವದ ಅವಶ್ಯಕತೆ ಇದೆ. ಕಾಂಗ್ರೆಸ್, ಪಕ್ಷದ ಮತ್ತು ಸಂಘಟನೆಯ ಸಮಸ್ಯೆಗಳನ್ನು ಬಗೆಹರಿಸಬೇಕು. ತಳಮಟ್ಟದ ಸಂಪರ್ಕವನ್ನು ಸರಿಪಡಿಸಿಕೊಳ್ಳಬೇಕು ಮತ್ತು ಬಲವಾದ ಉನ್ನತ-ನಾಯಕತ್ವವನ್ನು ಸ್ಥಾಪಿಸಬೇಕಾಗಿದೆ. ರಾಹುಲ್​ ಗಾಂಧಿ ಅಧ್ಯಕ್ಷ ಸ್ಥಾನಕ್ಕೇರುವುದು ಉತ್ತಮ ಆಯ್ಕೆಯಾಗಿದೆ’ ಎಂದು ಹೇಳಿದ್ದಾರೆ. (ಏಜೆನ್ಸೀಸ್​)

    ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು!

    ಪೊಲೀಸ್​ ಪೇದೆ ಮತ್ತು ಹೆಂಡತಿಯ ಕೊಲೆ! ಅಪ್ಪ ಅಮ್ಮ ಚೀರಿಕೊಳ್ಳುತ್ತಿದ್ದರೆ ಏನೂ ಗೊತ್ತಿಲ್ಲದವಳಂತೆ ಸುತ್ತಾಡಿದ ಮಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts