More

    ಮೋದಿ, ಷಾ ಭೇಟಿ ಬಳಿಕ ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ; ಸೋನಿಯಾ ಗಾಂಧಿಗೆ ಪತ್ರ ರವಾನೆ

    ಭೋಪಾಲ್​: ಮಧ್ಯಪ್ರದೇಶ ರಾಜಕೀಯಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿರುವ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ಇಂದು ಬೆಳಗ್ಗೆ ಸಿಂಧ್ಯಾ ಗೃಹ ಸಚಿವ ಅಮಿತ್​ ಷಾ ಅವರೊಂದಿಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ. ಶೀಘ್ರವೇ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅತ್ತ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲನಾಥ್​ ರಾಜ್ಯ ಸರ್ಕಾರದ ಅಸ್ಥಿರತೆ ಹೆಚ್ಚಾಗುತ್ತಿದ್ದಂತೆ ಸೋನಿಯಾ ಗಾಂಧಿಯವರನ್ನು ಈಗಾಗಲೇ ಭೇಟಿಯಾಗಿ ಚರ್ಚಿಸಿದ್ದಾರೆ. ರಾಹುಲ್​ ಗಾಂಧಿಯವರೂ ಕೂಡ ಸೋನಿಯಾ ಅವರನ್ನು ಭೇಟಿ ಮಾಡಲು ದೌಡಾಯಿಸಿದ್ದಾರೆ. ನಿನ್ನೆ ರಾತ್ರಿ ಕಮಲನಾಥ್​ ಸರ್ಕಾರದ ಸಚಿವ ಸಂಪುಟದ ಒಟ್ಟು 20 ಸಹೋದ್ಯೋಗಿಗಳು ರಾಜೀನಾಮೆ ಸಲ್ಲಿಸಿದ್ದಾರೆ. (ಏಜೆನ್ಸೀಸ್​)

    ಮಧ್ಯಪ್ರದೇಶದಲ್ಲಿ ಮತ್ತೆ “ಕಮಲ” ಸರ್ಕಾರ?- ಮೋದಿ ಸಂಪುಟದಲ್ಲಿ ಜ್ಯೋತಿರಾದಿತ್ಯ ಸಿಂಧ್ಯಾಗೆ ಸ್ಥಾನ: ರಾಜ್ಯಸಭೆ ಮೂಲಕ ಸಂಸತ್ ಪ್ರವೇಶಕ್ಕೆ ವೇದಿಕೆ ಸಜ್ಜು?

     

    ಮಧ್ಯಪ್ರದೇಶ ಸರ್ಕಾರದ 16 ಸಚಿವರ ರಾಜೀನಾಮೆ: ಸೋಮವಾರ ತಡರಾತ್ರಿ ಬೆಳವಣಿಗೆ 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts