More

    ಪ್ರತೀಕಾರ ತೀರಿಸಿಕೊಳ್ಳಲು ಕಾಂಗ್ರೆಸ್ ಮುಖಂಡನ ಕೊಲೆ, ಐವರ ಬಂಧನ

    ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರದಲ್ಲಿ ಕಾಂಗ್ರೆಸ್ ಮುಖಂಡ ಅಂಜಾದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದು ಹಳೇ ಗಲಾಟೆಯ ಪ್ರತೀಕಾರದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.

    ಬಂಧಿತರು ಶಿಡ್ಲಘಟ್ಟ ನಗರದ ಕಲಂಧರ್ (42), ಅಮಿತ್ (38), ರಾಘವೇಂದ್ರ (37), ಅಕ್ಷಯ್ (36) ಮತ್ತು ಶ್ರೀನಾಥ್ (37). ಕೆಲ ವರ್ಷಗಳ ಹಿಂದೆ ನಡೆದ ಗಲಾಟೆಯಲ್ಲಿ ಅಂಜಾದ್ ಗಂಭೀರವಾಗಿ ಗಾಯಗೊಳಿಸಿ, ಕಲಂಧರ್ ನ ಎರಡು ಕೈಗಳನ್ನು ಮುರಿದು ಹಾಕಿದ್ದ. ಇದರಿಂದ ಹಲವು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದು ಹೈರಾಣಾಗಿದ್ದ ಗಾಯಾಳು ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ. ಇದಕ್ಕಂತಲೇ ನಾಲ್ವರ ಗೆಳೆಯರನ್ನೊಳಗೊಂಡ ತಂಡವನ್ನು ರಚಿಸಿಕೊಂಡಿದ್ದು ಪೂರ್ವಯೋಜಿತ ನಿಧರ್ಾರದಂತೆ ಟೀಮ್ ಅಂಜಾದ್ ಮೇಲೆ ದಾಳಿ ನಡೆಸಿದೆ. ಮೊದಲು ಓಮಿನಿ ಕಾರಿನಿಂದ ಡಿಕ್ಕಿ ಹೊಡೆದು, ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. 

    ಇನ್ನು ತೀವ್ರ ಸಂಚಲನ ಮೂಡಿಸಿದ್ದ ಹಾಡಹಗಲೇ ಕಾಂಗ್ರೆಸ್ ಮುಖಂಡನ ಕೊಲೆ ಪ್ರಕರಣ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿಡ್ಲಘಟ್ಟ ನಗರದ ಪೊಲೀಸ್ ಠಾಣೆಯ ಸಮೀಪದ ರಸ್ತೆಯಲ್ಲಿ ಬಂಧಿತರು ಕೊಲೆ ಮಾಡಿ, ಓಮಿನಿ ಕಾರಿನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿಯೇ ಸಹಾಯಕ ಆರಕ್ಷಕ ನಿರೀಕ್ಷಕ ವಾಹನವನ್ನು ನಿಲ್ಲಿಸಲು ಯತ್ನಿಸಿದ್ದರು. ಆದರೆ, ಆರೋಪಿಗಳು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts