Video: ಅಭಿಮಾನಿ 'ಕೃಷ್ಣ'ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ

siddaramaiah
Published on

ಮಂಡ್ಯ: 'ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು' ಅಂತ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ  ಕೃಷ್ಣ ಎಂಬ ಯುವಕನ ಅಂತ್ಯಕ್ರಿಯೆಯಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಯಯ್ಯ ಗುರುವಾರ ಭಾಗವಹಿಸಿದರು.

'ಅತ್ಯಂತ ದುಃಖದಿಂದ ಆತನ ಕೊನೆ ಆಸೆ ಈಡೇರಿಸಿದ್ದೇನೆ. ಸಮಸ್ಯೆಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಸಮಸ್ಯೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದರೆ ತಮ್ಮ ಸಮಸ್ಯೆಯನ್ನು ಬೇರೊಬ್ಬರ ಹೆಗಲಿಗೆ ವರ್ಗಾಯಿಸಿದಂತೆ. ಸಾವಿನ ನಂತರವೂ ಸಮಸ್ಯೆ ಹಾಗೆಯೇ ಉಳಿಯುತ್ತೆ, ಆದರೆ ಅಮೂಲ್ಯ ಬದುಕೊಂದು ನಷ್ಟವಾಗುತ್ತೆ' ಎಂದು ಟ್ವಿಟ್ ಮಾಡಿದ್ದಾರೆ.

'ಕಷ್ಟಗಳು ಬಂದಾಗ ಎದುರಿಸುವ ಗಟ್ಟಿತನ ಪ್ರತಿಯೊಬ್ಬರಲ್ಲೂ ಬರಬೇಕು. ನೆನಪಿರಲಿ, ಸಮಸ್ಯೆಗಳು ತಾತ್ಕಾಲಿಕ, ಆದರೆ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು ಶಾಶ್ವತ. ಸಮಸ್ಯೆಯನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡಾಗ ಇವನು ನನ್ನ ಅಭಿಮಾನಿ ಎಂದು ಹೇಳಲು ನಮಗೂ ಹೆಮ್ಮೆಯಾಗುತ್ತೆ. ಅಭಿಮಾನಿಯೊಬ್ಬನ ಸಾವು ಎಷ್ಟು ನೋವು ಕೊಡುತ್ತದೋ, ಆತ್ಮಹತ್ಯೆ ಅದರ ಎರಡು ಪಟ್ಟು ಕಾಡುತ್ತದೆ' ಎಂದಿದ್ದಾರೆ.

'ಯಾರ ಅಭಿಮಾನಿಯೇ ಆಗಲಿ, ಯಾವ ಧರ್ಮ - ಸಿದ್ಧಾಂತವೇ ಇರಲಿ, ಆತ್ಮಹತ್ಯೆ ಮಾಡಿಕೊಳ್ಳುವಂತಹ ದುಡುಕಿನ ನಿರ್ಧಾರ ಬೇಡ. ಪ್ರತೀ ಜೀವವೂ ಅಮೂಲ್ಯ. ಕತ್ತಲು ಕಳೆದ ನಂತರ ಬೆಳಕು ಬಂದಂತೆ, ಕಷ್ಟಗಳು ದೂರಾಗಲೇಬೇಕು. ಭರವಸೆಯೇ ಬದುಕು ಎನ್ನುವುದನ್ನು ಮರೆಯದಿರೋಣ' ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net