More

    ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೆ, ಸರ್ಕಾರದ ವತಿಯಿಂದ ಇಬ್ಬರು ಪತ್ನಿ ಇರುವವರಿಗೆ 2 ಲಕ್ಷ ರೂ. ನೆರವು: ಕಾಂಗ್ರೆಸ್​ ನಾಯಕ

    ಭೋಪಾಲ್: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಮತಬೇಟೆಯಲ್ಲಿ ತೊಡಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಬೇಕೆಂಬ ಹಂಬಲದಲ್ಲಿ ಕಾಂಗ್ರೆಸ್​ ಹೆಣಗಾಡುತ್ತಿದ್ದು, ಈ ನಡುವೆ ಕಾಂಗ್ರೆಸ್​ ನಾಯಕರೊಬ್ಬರು ನೀಡಿರುವ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

    ಮಧ್ಯಪ್ರದೇಶದ ರತ್ಲಾಂನಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕಾಂತಿಲಾಲ್​ ಭುರಿಯಾ ಪಕ್ಷ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯರನ್ನು ಹೊಂದಿರುವ ಪುರುಷರಿಗೆ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.

    ಇದನ್ನೂ ಓದಿ: ಪಂಜಾಬ್​ ಆಟಗಾರರ ಚಳಿ ಬಿಡಿಸಿದ ಕಿಂಗ್​ ಕೊಹ್ಲಿ; ವಿಡಿಯೋ ವೈರಲ್

    ಕೇಂದ್ರದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರ ವತಿಯಿಂದ ಪ್ರತಿಯೊಬ್ಬ ಮಹಿಳೆಯ ಖಾತೆಗೆ 1 ಲಕ್ಷ ರೂಪಾಯಿ ಹಣವನ್ನು ಜಮೆ ಮಾಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಈ ಯೋಜನೆಯಡಿ ಇಬ್ಬರು ಪತ್ನಿ ಇರುವವರಿಗೆ 2 ಲಕ್ಷ ರೂಪಾಯಿ ನೀಡಲಾಗುವುದು ಎಂದು ಕಾಂತಿಲಾಲ್​ ಭುರಿಯಾ ಹೇಳಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಹಿರಿಯ ಕಾಂಗ್ರೆಸ್​ ನಾಯಕ ದಿಗ್ವಿಜಯ್​ ಸಿಂಗ್​ ಉಪಸ್ಥಿತರಿರುವುದನ್ನು ನೋಡಬಹುದಾಗಿದೆ.

    ಇತ್ತ ಕಾಂಗ್ರೆಸ್​ ಅಭ್ಯರ್ಥಿಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಹೆಣ್ಣು ಮಕ್ಕಳಿಗೆ ಅಗೌರವ ತೋರುವುದು ಕಾಂಗ್ರೆಸ್​ನವರ ರಕ್ತದಲ್ಲೇ ಇದೆ ಎಂದು ಮ್ತೊಮ್ಮೆ ಸಾಬೀತಾಗಿದೆ. ಈ ಕೂಡಲೇ ಕಾಂಗ್ರೆಸ್​ ನಾಯಕಿಯರಾದ ಸೋನಿಯಾ ಹಾಗೂ ಪ್ರಿಯಾಂಕಾ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts