More

    ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯೇ ಸುರಕ್ಷಿತರಲ್ಲ: ಸಿದ್ದರಾಮಯ್ಯ ಆತಂಕ

    ಬೆಂಗಳೂರು: ಹತ್ರಾಸ್​ ಗ್ಯಾಂಗ್​ ರೇಪ್​ ಖಂಡಿಸಿ, ಹಲವು ಜನರೊಂದಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರಾದ ರಾಹುಲ್​​ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ಅರ್ಧದಲ್ಲೇ ತಡೆದಿದ್ದಾರೆ. ಗುಂಪು ಚದುರಿಸಲು ಲಾಠಿ ಚಾರ್ಜ್​ ಕೂಡ ಮಾಡಿದ್ದಾರೆ, ಈ ವೇಳೆ ರಾಹುಲ್​ ಗಾಂಧಿ ಮುಗ್ಗರಿಸಿ ನೆಲಕ್ಕೆ ಬಿದ್ದಿದ್ದಾರೆ.
    ಇದೀಗ ಈ ಘಟನೆಯನ್ನು ರಾಜ್ಯದ ಕಾಂಗ್ರೆಸ್​ ನಾಯಕರು ತೀವ್ರವಾಗಿ ವಿರೋಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮೂಲಕ ಉತ್ತರ ಪ್ರದೇಶದ ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಉತ್ತರ ಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕಾರ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿರುವುದು ಖಂಡನೀಯ. ಇವರಿಬ್ಬರನ್ನೂ ಬಂಧಿಸಿರುವುದಕ್ಕೆ ಮತ್ತು ಪೊಲೀಸರ ದುರ್ವರ್ತನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಖಂಡಿತ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಅಮ್ಮ ನನ್ನನ್ನು ಕಾಪಾಡಿ, ಸಾಯಲು ಇಷ್ಟವಿಲ್ಲ: ಹತ್ರಾಸ್ ಗ್ಯಾಂಗ್​ರೇಪ್​​ ಕಿಚ್ಚು ಆರುವ ಮುನ್ನವೇ ಮತ್ತೊಂದು ಹೀನ ಕೃತ್ಯ

    ಉತ್ತರ ಪ್ರದೇಶದ ಪೊಲೀಸ್​ ರಾಜ್ಯದಲ್ಲಿ ಸಂಸದ ರಾಹುಲ್​ ಗಾಂಧಿ, ನಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿಯವರೇ ಸುರಕ್ಷಿತರಲ್ಲ ಎಂದಮೇಲೆ ಅಲ್ಲಿನ‌ ದಲಿತರು,‌ ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ?. ಯೋಗಿ ಸರ್ಕಾರ ಪ್ರಜಾಪ್ರಭುತ್ವಕ್ಕೇ ಕಳಂಕ ಎಂದು ಕಿಡಿಕಾರಿದ್ದಾರೆ.
    ಅತ್ಯಾಚಾರಕ್ಕೀಡಾಗಿ, ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ. ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾಜಿ ಸಚಿವ ಸಾರಾ ಮಹೇಶ್​ ಗಂಭೀರ ಆರೋಪ..!

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಟ್ವೀಟ್​ ಮಾಡಿ, ನಮ್ಮ ಪಕ್ಷದ ನಾಯಕರಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಮೇಲಾದ ಹಲ್ಲೆಯನ್ನು ನಾನು ಖಂಡಿಸುತ್ತೇನೆ. ಹತ್ರಾಸ್​ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಸಿಗಲೆಂದು ಹೋರಾಟ ಮಾಡುತ್ತಿರುವ ಅವರನ್ನು ಯಾವ ಕಾನೂನಿನ ಅಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ? ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಯಾಕೆ ಅವಕಾಶ ಕೊಡುತ್ತಿಲ್ಲ? ಈಗ್ಯಾಕೆ ಪ್ರಧಾನಿ ನರೇಂದ್ರ ಮೋದಿಯವರು ಬೇಟಿ ಬಚಾವೋ ಬಗ್ಗೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

    ನನ್ನನ್ನು ತಳ್ಳಿದರು, ನೆಲಕ್ಕೆ ಬೀಳಿಸಿದರು- ಪೊಲೀಸರ ವಿರುದ್ಧ ರಾಹುಲ್​ ಗಾಂಧಿ ಗುಡುಗು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts