ಬಿಜೆಪಿ ರಾಜ್ಯ ಅಧ್ಯಕ್ಷ ಕಟೀಲ್ ವಿರುದ್ಧ ಪೊಲೀಸರಿಗೆ ಕಾಂಗ್ರೆಸ್ ನಾಯಕರ ದೂರು

police may
Published on

ಬೆಂಗಳೂರು: ಕರೊನಾ ನಿಯಂತ್ರಣದ ವಿಷಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಬ್ಬರು ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರು ಇಲ್ಲಸಲ್ಲದ ಹೇಳಿಕೆ ನೀಡ್ತಿದ್ದಾರೆ. ಭಾರತದಲ್ಲಿ ಕರೊನಾ ಕಡಿಮೆಯಾಗುವುದಕ್ಕೆ ಪ್ರಧಾನಿ ಮೋದಿಯವರು ಕಾರಣ ಎಂಬ ಕಟೀಲ್ ಅವರ ಹೇಳಿಕೆ ಜನರನ್ನು ತಪ್ಪು ದಾರಿಗೆ ಎಳೆಯುವಂತಹದ್ದು ಎಂದು ವಿಧಾಸೌಧ ಠಾಣೆಗೆ ನೀಡಿರುವ ಈ ದೂರಿನಲ್ಲಿ ವಾದಿಸಲಾಗಿದೆ.

ಭಾರತದಲ್ಲಿ ಕರೊನಾ ನಿಯಂತ್ರಣಕ್ಕೆ ತಂದಿದ್ದರಿಂದಲೇ ವಿಶ್ವ ಸಂಸ್ಥೆಯಲ್ಲಿ ಭಾರತಕ್ಕೆ ಉತ್ತಮ ಸ್ಥಾನಮಾನ ನೀಡಲಾಗಿದೆ ಎಂಬ ಹೇಳಿಕೆಯೂ ಸರಿಯಲ್ಲ. ಇಂತಹ ಸುಳ್ಳು ಹೇಳಿಕೆಗಳಿಂದ ಅವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಮತ್ತು ಪ್ರಕಾಶ್ ರಾಥೋಡ್ ಅವರು ನೀಡಿರುವ ಈ ದೂರನ್ನು ವಿಧಾನಸೌಧ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net