More

    ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ, ಪ್ರಿಯಾಂಕ ಖರ್ಗೆ ಹೇಳಿದಿಷ್ಟು?

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ.

    ಇದನ್ನೂ ಓದಿ:ವಿರುಷ್ಕಾ ದಂಪತಿಗೆ 2ನೇ ಮಗು ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ: ಎಬಿಡಿ

    ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ, ಕಾಂಗ್ರೆಸ್​​​ನಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಂಪಣ್ಣ ಆರೋಪ ಮಾಡಿದ್ದಾರೆ. ಹಾಗೇನಾದರೂ ಇದ್ದರೆ ದಾಖಲೆ ನೀಡಲಿ. ಈಗಾಗಲೇ ನಾವು ಆಯೋಗ ರಚನೆ ಮಾಡಿದ್ದೇವೆ. ದಯವಿಟ್ಟು ಕೆಂಪಣ್ಣ ಅವರ ಹತ್ತಿರ ದಾಖಲೆ ಇದ್ದರೆ ಆಯೋಗಕ್ಕೆ ನೀಡಲಿ ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್ ಸರ್ಕಾರದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಕೆಂಪಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ ಬಿಜೆಪಿ ಅವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇದ್ದ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು. ನನ್ನ ಜೀವನದಲ್ಲೇ ಅಂತಹ ಸರ್ಕಾರ ನೋಡಿರಲಿಲ್ಲ ಎಂದು ಗುಡುಗಿದರು.

    ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಾಗ ಅತಿಹೆಚ್ಚು ಭ್ರಷ್ಟಾಚಾರ ನಡೆದಿತ್ತು. 3 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದರು. ಬಿಜೆಪಿಯವರು ಸಾಲದ ಗ್ಯಾರಂಟಿಯನ್ನು ಕೊಟ್ಟಿದ್ದರು ಎಂದು ರಾಮಲಿಂಗಾರೆಡ್ಡಿ ಟೀಕಿಸಿದರು.

    ಶೇ.40 ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ.  ಅಧಿಕಾರಿಗಳಿಂದಲೇ ರಾಜ್ಯದಲ್ಲಿ ಭ್ರಷ್ಟಾಚಾರ ಬೇರೂರಿದೆ. ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟ ಅಧಿಕಾರಿಯಾಗಳಿದ್ದಾರೆ.  ವಿವಿಧ ಇಲಾಖೆಗಳಲ್ಲಿ ಕರೆದಿರುವ ಪ್ಯಾಕೇಜ್ ಟೆಂಡರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಅಲ್ಲದೆ, ಪ್ರತಿಯೊಂದು ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪ ಮಾಡಿದ್ದರು.

    22 ವರ್ಷದಿಂದ ನಾಪತ್ತೆಯಾಗಿದ್ದ ಮಗ ಸನ್ಯಾಸಿಯಾಗಿ ವಾಪಸ್: ಕಣ್ಣೀರು ಹಾಕಿದ ತಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts