More

    ರಾಹುಲ್ ಗಾಂಧಿಯೇ ಎಐಸಿಸಿ ಅಧ್ಯಕ್ಷರಾಗಲಿ; ಸಿಡಬ್ಲ್ಯುಸಿ ಸಭೆಯಲ್ಲಿ ಒತ್ತಾಸೆ..

    ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಐದೂ ರಾಜ್ಯಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ಇಂದು ಆತ್ಮಾವಲೋಕನೋಪಾದಿಯಲ್ಲಿ ಕಾಂಗ್ರೆಸ್​ ವರ್ಕಿಂಗ್ ಕಮಿಟಿ (ಸಿಡಬ್ಲ್ಯುಸಿ) ಸಭೆ ಹಮ್ಮಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಚರ್ಚಿಸಿದೆ.

    ಇಂದು ನಡೆಯುತ್ತಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನೇ ನೇಮಿಸುವ ಕುರಿತು ಹೆಚ್ಚಿನ ನಾಯಕರು ಒಲವು ತೋರಿದರು.

    ಪ್ರಧಾನಿ ನರೇಂದ್ರ ಮೋದಿ ಅವರನ್ನ ರಾಹುಲ್ ಗಾಂಧಿ ಅವರ ರೀತಿ ಯಾರೂ ಎದುರಿಸುತ್ತಿಲ್ಲ. ರಾಹುಲ್ ಅವರನ್ನು ಗುರಿಯಾಗಿಸಿ ಪ್ರಧಾನಿಯೇ ಮಾತನಾಡಬೇಕು ಎಂದಾದರೆ ಅದನ್ನು ಅರ್ಥ ಮಾಡಿಕೊಳ್ಳಿ ಎಂದಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಹುಲ್​ ಎಐಸಿಸಿ ಅಧ್ಯಕ್ಷರಾಗಲು ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ನಾಳೆ ಅಲ್ಲಿ 8 ಕೋಟಿ ಮಂದಿಯ ಇನ್​ಸ್ಟಾಗ್ರಾಂ ಖಾತೆಯೇ ಬ್ಯಾನ್!

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯೇ ಜವಾಬ್ದಾರಿ ವಹಿಸಿಕೊಳ್ಳಲಿ ಎಂಬ ಅಭಿಪ್ರಾಯ ವ್ಯಕಪಡಿಸಿದ್ದಾರೆ. ನಾನು ಈ ಹಿಂದೆಯೇ ಹೇಳಿರುವಂತೆ ರಾಹುಲ್ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಿ ಪೂರ್ಣಾವಧಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಇದು ನನ್ನಂಥ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಬಯಕೆ ಎಂದು ಹೇಳಿದರು.

    ಇದನ್ನೂ ಓದಿ: 52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ದೇಶವಿದು..

    ದೆಹಲಿಯ ಕಾಂಗ್ರೆಸ್​ ನಾಯಕರನ್ನು ಒಳಗೊಂಡ ಗುಂಪು, ಯುವ ಕಾಂಗ್ರೆಸ್​ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಸೇರಿ ಹಲವರು ರಾಹುಲ್ ಗಾಂಧಿಯೇ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    30 ವರ್ಷಗಳ ಬಳಿಕ ಸಿಕ್ಕಿಬಿದ್ದ ಕೊಲೆ ಆರೋಪಿ; ಮಹಿಳೆಯ ಕುತ್ತಿಗೆಗೆ ಸೀರೆ ಬಿಗಿದು ಕೊಂದಿದ್ದ…

    ಚೀನಾದಲ್ಲಿ ಹೆಚ್ಚಾದ ಕರೊನಾತಂಕ; 2 ವರ್ಷದಲ್ಲೇ ಮತ್ತೆ ಅತ್ಯಧಿಕ ದೈನಂದಿನ ಕೋವಿಡ್ ಪ್ರಕರಣ

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts