ನಾಮಪತ್ರ ಹಿಂಪಡೆಯಲು ಮುದ್ದಹನುಮೇಗೌಡ ಸಮ್ಮತಿ? ದಿನೇಶ್​ ಗುಂಡೂರಾವ್​, ಜಿ. ಪರಮೇಶ್ವರ್​ ಸಂಧಾನ ಯಶಸ್ವಿ?

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾವು ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆಯಲು ಮುದ್ದುಹನುಮೇಗೌಡ ಮತ್ತು ಕೆ.ಎನ್​. ರಾಜಣ್ಣ ಅವರ ಮನವೊಲಿಸುವಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್​ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಮುದ್ದುಹನುಮೇಗೌಡರನ್ನು ದೂರವಾಣಿಯಲ್ಲಿ ಸಂಪರ್ಕಿಸಿದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಪಕ್ಷದಲ್ಲಿ ಸೂಕ್ತ ಸ್ಥಾನಮಾನದೊಂದಿಗೆ ಗೌರವಪೂರ್ಣವಾಗಿ ನಡೆಸಿಕೊಳ್ಳುವ ಭರವಸೆ ನೀಡಿದರು ಎನ್ನಲಾಗಿದೆ. ಈ ಮಾತುಗಳಿಗೆ ಸೋತಿರುವ ಮುದ್ದಹನುಮೇಗೌಡ ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಮುದ್ದಹನುಮೇಗೌಡ, ರಾಹುಲ್​ ಗಾಂಧಿ ಅಲ್ಲದೆ, ಡಿಸಿಎಂ ಪರಮೇಶ್ವರ್​ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ನನ್ನೊಂದಿಗೆ ಚರ್ಚಿಸಿದ್ದಾರೆ. ಈ ಸಂಗತಿಗಳನ್ನು ನನ್ನ ಅಭಿಮಾನಿಗಳ ಜತೆ ಹಂಚಿಕೊಂಡು, ಅವರು ಹೇಳಿದಂತೆ ನಡೆದುಕೊಳ್ಳುವುದಾಗಿ ಹೇಳಿದರು.