20.4 C
Bengaluru
Monday, January 20, 2020

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಆರಂಭ: ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ 57 ಶಾಸಕರು ಭಾಗಿ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್​ ಪಕ್ಷದ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಇದುವರೆಗೆ 57 ಶಾಸಕರು ಪಾಲ್ಗೊಂಡಿದ್ದಾರೆ.

ಮಂಗಳವಾರ ರಾಜೀನಾಮೆ ನೀಡುತ್ತಾರೆ ಎಂದು ಹೇಳಲಾಗಿದ್ದ ಜಯನಗರ ಶಾಸಕಿ ಸೌಮ್ಯರೆಡ್ಡಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಇವರ ತಂದೆ ಹಾಗೂ ಬಿಟಿಎಂ ಲೇಔಟ್​ ಶಾಸಕ ಬಿ. ರಾಮಲಿಂಗಾ ರೆಡ್ಡಿ ಸಭೆಗೆ ಗೈರುಹಾಜರಾಗಿದ್ದಾರೆ.

ಅಂಜಲಿ ನಿಂಬಾಳ್ಕರ್​, ರೋಷನ್​ ಬೇಗ್​, ಡಾ. ಸುಧಾಕರ್​ ಗೈರುಹಾಜರಾಗಿರುವವರಲ್ಲಿ ಪ್ರಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಸಕರನ್ನೂ ದೂರವಾಣಿ ಮೂಲಕ ಸಂಪರ್ಕಿಸುತ್ತಿರುವ ಕಾಂಗ್ರೆಸ್​ ಮುಖಂಡರು ಸಭೆಗೆ ಆಗಮಿಸುವಂತೆ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.

78ರಲ್ಲಿ 21 ಗೈರು
ಕಾಂಗ್ರೆಸ್​ ಶಾಸಕರ ಒಟ್ಟು ಸಂಖ್ಯೆ 79. ಅವರಲ್ಲಿ ಒಬ್ಬರು ವಿಧಾನಸಭಾಧ್ಯಕ್ಷರಾಗಿರುವುದರಿಂದ, ಈ ಸಂಖ್ಯೆ 78ಕ್ಕೆ ಕಡಿಮೆಯಾಗುತ್ತದೆ. 10 ಶಾಸಕರು ರಾಜೀನಾಮೆ ಕೊಟ್ಟಿದ್ದು, ಅವರಲ್ಲಿ 7 ಜನರು ಮುಂಬೈ ಸೇರಿದ್ದಾರೆ. ರಾಜೀನಾಮೆ ಕೊಟ್ಟಿರುವವರ ಪೈಕಿ ರಾಮಲಿಂಗಾ ರೆಡ್ಡಿ ಸೇರಿ ಇನ್ನು ಮೂವರು ಶಾಸಕರು ಬೆಂಗಳೂರಿನಲ್ಲೇ ಇದ್ದಾರೆ. ಇವರಲ್ಲದೆ ಇನ್ನೂ 11 ಮಂದಿ ಸೇರಿ ಒಟ್ಟು 21 ಶಾಸಕರು ಸಭೆಗೆ ಗೈರುಹಾಜರಾಗಿದ್ದಾರೆ.

ಅನುಮತಿ ಪಡೆದು ಗೈರು ಹಾಜರಾದವರು

1. ಡಾ. ಸುಧಾಕರ್ – ಚಿಕ್ಕಬಳ್ಳಾಪುರ ( ಜ್ವರ)

2. ಇ. ತುಕಾರಾಂ -ಸಂಡೂರು ( ಜ್ವರ)

3. ರಾಜೇಗೌಡ – ಶೃಂಗೇರಿ

4. ಶಿವಣ್ಣ – ಆನೇಕಲ್

5. ರಾಮಪ್ಪ – ಹರಿಹರ

6. ಎಂಟಿಬಿ ನಾಗರಾಜ್ – ಹೊಸಕೋಟೆ

7. ಖನೀಜ್ ಫಾತಿಮಾ – ಗುಲ್ಬರ್ಗಾ

8. ನಾಗೇಂದ್ರ – ಬಳ್ಳಾರಿ ಗ್ರಾಮಾಂತರ

ಅನುಮತಿ ಪಡೆಯದ ಶಾಸಕರು

1. ಅಂಜಲಿ ಲಿಂಬಾಳ್ಕರ್ – ಖಾನಾಪುರ

2. ರೋಷನ್ ಬೇಗ್ – ಶಿವಾಜಿನಗರ

ಕಾಂಗ್ರೆಸ್ ನಾಯಕರಿಗೆ ಡೋಂಟ್ ಕೇರ್ ಎನ್ನದ ಅತೃಪ್ತ ಶಾಸಕರು

ರಾಜೀನಾಮೆ ನೀಡಿರುವ ಹತ್ತು ಅತೃಪ್ತ ಶಾಸಕರು ಗೈರು

1. ರಾಮಲಿಂಗಾ ರೆಡ್ಡಿ – ಬಿಟಿಎಂ ಲೇಔಟ್

2. ಎಸ್.ಟಿ ಸೋಮಶೇಖರ್- ಯಶವಂತಪುರ

3. ಭೈರತಿ ಬಸವರಾಜ್ – ಕೆಆರ್ ಪುರಂ

4. ಮುನಿರತ್ನ- ರಾಜರಾಜೇಶ್ವರಿನಗರ

5. ಪ್ರತಾಪ್ ಗೌಡ ಪಾಟೀಲ್- ಮಸ್ಕಿ

6. ಬಿ.ಸಿ ಪಾಟೀಲ್- ಹಿರೇಕೆರೂರು

7. ರಮೇಶ್ ಜಾರಕಿಹೊಳಿ‌ – ಗೋಕಾಕ್

8. ಶಿವರಾಮ್ ಹೆಬ್ಬಾರ್ – ಯಲ್ಲಾಪುರ

9. ಮಹೇಶ್ ಕುಮಟಳ್ಳಿ – ಅಥಣಿ

10. ಆನಂದ್ ಸಿಂಗ್ – ವಿಜಯನಗರ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...